ಕೆರೆ ಒತ್ತುವರಿ ತೆರವುಗೊಳಿಸಲು ಸರ್ವೇ ನಡೆಸಿ


Team Udayavani, Aug 20, 2021, 6:54 PM IST

2020

ಚಿತ್ರದುರ್ಗ: ಜಿಲ್ಲೆಯಲ್ಲಿರುವ ಎಲ್ಲ ಕೆರೆಗಳ ಸರ್ವೇ ನಡೆಸಿ ಕೆರೆಗಳ ಒತ್ತುವರಿ ತೆರವು ಮಾಡಿ ಜಲಮೂಲಗಳ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೂಚಿಸಿದರು. ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕೆರೆ ಸಂರಕ್ಷಣೆ ಸಮಿತಿ ಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಕೆರೆಗಳಿಗೆ ಸಂಬಂಧಪಟ್ಟಂತೆ ಕೆರೆ ಸರ್ವೇ ಕಾರ್ಯ ಮತ್ತು ತ್ವರಿತವಾಗಿ ಒತ್ತುವರಿ ತೆರವುಗೊಳಿಸಿ ಕೆರೆಗಳ ಸುತ್ತ ಗಡಿ ಗುರುತಿಸಬೇಕು. ಕೆರೆಯ ಸುತ್ತ 30 ಮೀಟರ್‌ ಬಫರ್‌ ಜೋನ್‌ ಗುರುತಿಸಿ. ಬಫರ್‌ ಜೋನ್‌ ಪ್ರದೇಶದಲ್ಲಿ ಯಾವುದೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ನೀಡುವಂತಿಲ್ಲ ಎಂದರು.

ಒತ್ತುವರಿಯಾಗಿರುವ ಕೆರೆಗಳ ಮಾಹಿತಿ, ಜಂಗಲ್‌ ಕ್ಲಿನಿಂಗ್‌ ಜೊತೆಗೆ ಕೆರೆಗಳ ಸಂರಕ್ಷಣೆಗಾಗಿ ಬೌಂಡ್ರಿ ಟ್ರೆಂಚ್‌ ನಿರ್ಮಿಸಲು ಕ್ರಿಯಾ ಯೋಜನೆ ತಯಾರಿಸುವಂತೆ ಅ ಧಿಕಾರಿಗಳಿಗೆ ತಾಕೀತು ಮಾಡಿದರು. ಕೆರೆಗಳ ಒತ್ತುವರಿಯನ್ನು ತೆರವು ಮಾಡಿ ಸಂರಕ್ಷಣೆ ಮಾಡಬೇಕೆಂದು ಈಗಾಗಲೇ ಕೋರ್ಟ್‌ ಸೂಚಿಸಿದ್ದು, ಇದರ ವರದಿ ನೀಡಬೇಕಾಗಿದೆ. ಕೆರೆಗಳ ಸರ್ವೆ ಕಾರ್ಯ ಕೈಗೊಂಡು ಒತ್ತುವರಿ ತೆರವು ಮಾಡಲೇಬೇಕಾಗಿದೆ ಎಂದರು. ಈ ವೇಳೆ ಅಧಿ ಕಾರಿಗಳು, ಕೆಲವೆಡೆ ಒತ್ತುವರಿ ಮಾಡಿಕೊಂಡು ತೋಟ, ಮನೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ  ಧಿಕಾರಿಗಳು, ವಾಸಕ್ಕೆ ಬೇರೆ ಮನೆಯೇ ಇಲ್ಲವೆಂದರೆ ಅವರಿಗೆ ಗ್ರಾಪಂನಿಂದ ಮನೆ ಕೊಡಿಸಿ ತೆರವು ಮಾಡಬೇಕು. ಆದರೆ ಮನೆ ನಿರ್ಮಾಣ ಮಾಡಿದ್ದಾರೆ ಎಂದು ತೆರವು ಮಾಡದೇ ಬಿಡುವಂತಿಲ್ಲ. ಈ ವಿಚಾರದಲ್ಲಿ ಸರಿಯಾಗಿ ಕೆಲಸ ಮಾಡದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಬಿ.ಕೆ. ಗಿರೀಶ್‌ ಮಾತನಾಡಿ, ಚಳ್ಳಕೆರೆ ತಾಲೂಕಿನ ನಗರಂಗೆರೆ ಕೆರೆ ಒತ್ತುವರಿಯಾಗಿದೆ. ಒತ್ತುವರಿಯಾಗಿರುವುದನ್ನು ಶೀಘ್ರದಲ್ಲಿ ತೆರವುಗೊಳಿಸಬೇಕು ಹಾಗೂ ಕೆರೆಗಳಲ್ಲಿ ಮಳೆ ಬಂದರೂ ನೀರು ನಿಲ್ಲದಂತೆ ಹೊರಗೆ ಹೋಗಲು ಬಿಡುತ್ತಿರುವ ಬಗ್ಗೆ ಗಮನಿಸಲು ಅ ಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಧಿಕಾರಿಗಳು, ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಲು ಕ್ರಮ ವಹಿಸಬೇಕು. ಕೆರೆಗಳ ಸಂರಕ್ಷಣೆಗೆ ಒತ್ತು ನೀಡಿ, ಕೆರೆಗಳಿಗೆ ಮಲಿನ ನೀರು ಸೇರದಂತೆ ರಕ್ಷಣೆ ಮಾಡಬೇಕು. ಈ ನಿಟ್ಟಿನಲ್ಲಿ ಅಧಿ ಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿ ಕಾರದ ಜಿಲ್ಲಾ ಕಾರ್ಯನಿರ್ವಹಣಾ ಧಿಕಾರಿ ದೇಶಮುಖ್‌ ಮಾತನಾಡಿ, ಜಲಮೂಲಗಳಿಗೆ ತೊಂದರೆ ಉಂಟಾಗುವ ಒತ್ತುವರಿ ತೆರವುಗೊಳಿಸುವುದು, ಘನತ್ಯಾಜ್ಯಗಳನ್ನು ಸುರಿಯುವುದನ್ನು ಪ್ರತಿಬಂಧಿ ಸುವುದು, ಮಲಿನ ನೀರು ಜಲಮೂಲಗಳಿಗೆ ಸೇರುವುದನ್ನು ತಡೆಯುವುದು ಸಮಿತಿಯ ಉದ್ದೇಶವಾಗಿದೆ ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್‌ ರೆಡ್ಡಿ, ಪ್ರಾದೇಶಿಕ ಅರಣ್ಯ ಅ ಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರು, ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು, ತಹಶೀಲ್ದಾರರು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿ ಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು ಇದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.