ಹಿರೇಕೆರೆ ಕಾವಲಿನಲ್ಲಿ ಸರಳ ಸಿಡಿ ಆಚರಣೆ

ನಾಯಕನಹಟ್ಟಿ: ಹಿರೇಕೆರೆ ಕಾವಲಿನಲ್ಲಿ ಸಿಡಿ ಉತ್ಸವ ಜರುಗಿತು.

Team Udayavani, Feb 25, 2021, 3:54 PM IST

25-12

ನಾಯಕನಹಟ್ಟಿ: ಹಿರೇಕೆರೆ ಕಾವಲಿನಲ್ಲಿ ಚೌಡೇಶ್ವರಿ ರಥೋತ್ಸವದ ಅಂಗವಾಗಿ ಬುಧವಾರ ಸಿಡಿ ಉತ್ಸವ ಜರುಗಿತು. ಸರಕಾರ ಸಿಡಿ ನಿಷೇಧಿಸಿರುವ ಹಿನ್ನೆಲೆಯಲ್ಲಿ ಉತ್ಸವನ್ನು ಸಾಂಪ್ರದಾಯಿಕ ರೂಪದಲ್ಲಿ ಆಚರಿಸಲಾಯಿತು. ಭಕ್ತರು ಸಿಡಿ ಮರವನೇರಿ ಸಿಡಿಯಾಡುವ ನಿಷೇಧ ಹಿನ್ನೆಲೆಯಲ್ಲಿ ಸರಳವಾಗಿ ಆಚರಣೆ ಜರುಗಿತು. ಚೌಡೇಶ್ವರಿ ಮೂರ್ತಿಯ ಬೃಹತ್‌ ಪಂಚಲೋಹದ ವಿಗ್ರಹವನ್ನು ಮೆರವಣಿಗೆಯ ಮೂಲಕ ತಂದು ಸಿಡಿಯಾಡುವ ಪ್ರದೇಶದಲ್ಲಿ ಪ್ರತಿಷ್ಠಾಪಿಸಲಾಯಿತು.ಸಿಡಿಯಾಡುವ ವ್ಯಕ್ತಿಯನ್ನು ಸಿಡಿ ಮರಕ್ಕೆ ಕಟ್ಟದೆ ಸಿಡಿ ಆಚರಣೆ ನಡೆಸಲಾಯಿತು.

ವ್ಯಕ್ತಿಗೆ ಬದಲಾಗಿ ಕೇವಲ ಸಿಡಿ ಕಂಬವನ್ನು ಸುತ್ತಿಸಲಾಯಿತು. ಅದರಡಿಯಲ್ಲಿ ಎತ್ತಿನ ಗಾಡಿಯಲ್ಲಿ ಸಿಡಿಯಾಡುವ ವ್ಯಕ್ತಿಯನ್ನು ವೃತ್ತಾಕಾರವಾಗಿ ಸುತ್ತಿಸಲಾಯಿತು. ಸಿಡಿ ಉತ್ಸವದಲ್ಲಿ ಎತ್ತಿನಹಟ್ಟಿ ಗೊಲ್ಲಹಳ್ಳಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದವರು ಸಿಡಿಯಾಡುವುದು ವಿಶೇಷವಾಗಿದೆ. ಸಿಡಿ ಮರದ ಕೆಳಗಿದ್ದ ದಲಿತ ಸಮುದಾಯದ ಯುವಕ ಭಂಡಾರ ಬೇವಿನಸೊಪ್ಪ ಹೂವುಗಳನ್ನು ಭಕ್ತರ ಮೇಲೆ ಎಸೆದರು. ಸಿಡಿ ಕಂಬವನ್ನು ಮೂರು ಬಾರಿ ಪ್ರದಕ್ಷಿಣೆ ಹಾಕಲಾಯಿತು. ಪ್ರದಕ್ಷಿಣೆ ವೇಳೆ ಭಕ್ತರು ಬಾಳೆಹಣ್ಣು, ಮಂಡಕ್ಕಿ, ಹೂವುಗಳನ್ನು ಸಿಡಿಗಾರನಿಗೆ ಎಸೆದು ಹರಕೆ ಸಲ್ಲಿಸಿದರು.

ಸುತ್ತಲಿನ ಗ್ರಾಮಗಳು ಸೇರಿದಂತೆ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಜಾತ್ರಾ ಪ್ರದೇಶದಲ್ಲಿ ನೀರು, ನೆರಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿತ್ತು. ದೇವಾಲಯ ಸಮಿತಿ ಅಧ್ಯಕ್ಷ ಪಟೇಲ್‌ ಜಿ.ಎಂ. ತಿಪ್ಪೇಸ್ವಾಮಿ, ಪಪಂ ಅಧ್ಯಕ್ಷ ಎನ್‌. ಮಹಾಂತಣ್ಣ, ಸದಸ್ಯರಾದ ಬಸಣ್ಣ, ಹನುಮಣ್ಣ, ದೇವರಾಜ್‌ ಮತ್ತಿತರರು ಇದ್ದರು. ಎರಡು ದಿನಗಳ ಚೌಡೇಶ್ವರಿ ರಥೋತ್ಸವ, ಸಿಡಿ ಉತ್ಸವದೊಂದಿಗೆ ಸಂಪನ್ನಗೊಂಡಿತು.

ಓದಿ : ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.