ಸಾರಿಗೆ ಸಂಸ್ಥೆ ನೌಕರರಿಗೆ ವರ್ಗಾವಣೆ ಶಾಕ್‌

Team Udayavani, Apr 11, 2021, 5:09 PM IST

11-13

ಚಿತ್ರದುರ್ಗ: ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಶನಿವಾರವೂ ಮುಂದುವರೆದಿದ್ದು, ಮುಷ್ಕರನಿರತ ನೌಕರರಿಗೆ ಸಾರಿಗೆ ಇಲಾಖೆ ವರ್ಗಾವಣೆ ಶಾಕ್‌ ನೀಡಿದೆ.

ಕರ್ತವ್ಯಕ್ಕೆ ಹಾಜರಾಗುವಂತೆ ನೀಡಿದ ಕರೆ, ಮನವಿ, ನೋಟಿಸ್‌ ಯಾವುದಕ್ಕೂ ಬಗ್ಗದ ಸಾರಿಗೆ ಇಲಾಖೆ ನೌಕರರಿಗೆ ದಿಢೀರ್‌ ವರ್ಗಾವಣೆ ಮಾಡಿ ಆದೇಶ ಮಾಡುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗದಿಂದ 18 ನೌಕರರನ್ನು ರಾಮನಗರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಇದರಲ್ಲಿ 15 ಮಂದಿ ಚಾಲಕ ಹಾಗೂ ನಿರ್ವಾಹಕರು. ಉಳಿದ ಮೂರು ಜನ ಮೆಕ್ಯಾನಿಕ್‌ಗಳಾಗಿದ್ದಾರೆ. ಬೆಂಗಳೂರಿನಿಂದ ವರ್ಗಾವಣೆ ಆದೇಶ ಬಂದಿದ್ದು, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿರುವ ಸೂಚನಾ ಫಲಕದಲ್ಲಿ ಪ್ರದರ್ಶಿಸಲಾಗಿದೆ. ಇದರೊಟ್ಟಿಗೆ ಪ್ರೊಬೆಷನರಿಯಾಗಿ ತರಬೇತಿ ಪಡೆಯುತ್ತಿರುವ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಮರಳುವಂತೆ ನೋಟಿಸ್‌ ನೀಡಲಾಗಿದೆ.

ಪ್ರೊಬೆಷನರಿ ಹಂತದಲ್ಲಿ ಮುಷ್ಕರ ನಡೆಸುವುದರಿಂದ ನಿಮಗೆ ತೊಂದರೆಯಾಗುತ್ತದೆ ಎಂದು ಎಚ್ಚರಿಸಲಾಗಿದೆ. 18 ಬಸ್‌ ಸಂಚಾರ: ಈ ನಡುವೆ ಚಿತ್ರದುರ್ಗ ವಿಭಾಗದ ವಿವಿಧ ಮಾರ್ಗಗಳಿಗೆ ಸೇರಿದ 18 ಬಸ್‌ಗಳು ಶನಿವಾರ ಪೊಲೀಸ್‌ ಎಸ್ಕಾರ್ಟ್‌ ಭದ್ರತೆಯಲ್ಲಿ ಸಂಚಾರ ನಡೆಸಿವೆ. ಒಟ್ಟು 25 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್‌ ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿ ಕಾರಿ ವಿಜಯಕುಮಾರ್‌ ಮಾಹಿತಿ ನೀಡಿದ್ದಾರೆ.

ಖಾಸಗಿ ಬಸ್‌ ನಿಲ್ದಾಣದಲ್ಲಿ ಜನವೋ ಜನ: ಕೆಎಸ್‌ ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಬಸ್‌ ಸಂಚಾರ ಜೋರಾಗಿದೆ. ಇತ್ತ ಸರ್ಕಾರಿ ಬಸ್‌ ನಿಲ್ದಾಣ ಜನರಲ್ಲದೆಬಣಗುಡುತ್ತಿದ್ದರೆ, ಖಾಸಗಿ ಬಸ್‌ ನಿಲ್ದಾಣ ಜನರಿಂದ ತುಂಬಿ ತುಳುಕುತ್ತಿದೆ.

ಯುಗಾದಿ ಹಬ್ಬದ ಸಂದರ್ಭವಾಗಿರುವುದರಿಂದ ಪ್ರಯಾಣಿಕರು ಊರುಗಳಿಗೆ ತೆರಳಲು, ಖರೀ ದಿ ಮತ್ತಿತರೆ ಕಾರಣಕ್ಕೆ ಒಂದು ಕಡೆಯಿಂದ ಮತ್ತೂಂದು ಕಡೆಗೆ ಓಡಾಡುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಖಾಸಗಿ ಬಸ್‌ಗಳನ್ನು ಸಾರ್ವಜನಿಕರು ಅವಲಂಬಿಸಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.