Udayavni Special

ಧರ್ಮ ಸಂರಕ್ಷ ಣೆಗೆ ಗಮನ ಕೊಡಿ


Team Udayavani, Apr 19, 2021, 5:26 PM IST

19-12

ಚಿತ್ರದುರ್ಗ: ಧರ್ಮವನ್ನು ನಾವು ರಕ್ಷಣೆ ಮಾಡಿದರೆ, ಆಪತ್ಕಾಲದಲ್ಲಿ ಅದು ನಮ್ಮ ರಕ್ಷಣೆಗೆ ಬರುತ್ತದೆ. ಎಲ್ಲರೂ ಧರ್ಮವನ್ನು ಅರಿತು ಪಾಲನೆ ಮಾಡಬೇಕು ಎಂದು ವೇಣುಕಲ್ಲುಗುಡ್ಡದ ಹಾಲಪ್ಪಯ್ಯ ಸ್ವಾಮಿ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ರಂಗಯ್ಯನಬಾಗಿಲು ಬಳಿ ಇರುವ ಉಜ್ಜಯಿನಿ ಮಠದಲ್ಲಿ ನಡೆದ ಲಿಂಗೈಕ್ಯ ಮರುಳಾರಾಧ್ಯ ಶಿವಾಚಾರ್ಯ ಭಗವತ್ಪಾದರ 26ನೇ ವರ್ಷದ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಜನ ಜಾಗೃತಿ ಕಾರ್ಯಕ್ರಮ ಹಾಗೂ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ರಾಜ್ಯದಲ್ಲಿ ಸರ್ಕಾರ ಮಾಡದಂತಹ ಕೆಲಸಗಳನ್ನು ನಾಡಿನ ವಿವಿಧ ಮಠಗಳು ಮಾಡುತ್ತಿವೆ. ವಿದ್ಯೆ, ಅನ್ನದಾನ ಮಾಡುವ ಮೂಲಕ ಸರ್ಕಾರದ ಹೊರೆಯನ್ನು ಕಡಿಮೆ ಮಾಡಿವೆ ಎಂದರು. ಹಿಂದೆ ರಾಜ-ಮಹಾರಾಜರು ಗುರುಗಳ ಆಜ್ಞೆಯನ್ನು ಮೀರುತ್ತಿರಲಿಲ್ಲ. ಗುರುಗಳ ಅನುಮತಿ ಸಿಕ್ಕಿದ ನಂತರವೇ ಕೆಲಸಕ್ಕೆ ಮುಂದಾಗುತ್ತಿದ್ದರು. ಚಿತ್ರದುರ್ಗದ ಮಹಾರಾಜರು ಸಹ ಮುರುಘಾ ಮಠದ ಶ್ರೀಗಳ ಆಣತಿಯಂತೆ ನಡೆಯುವ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ. ಇಂದಿಗೂ ಗುರುವಿನ ಕಾರುಣ್ಯ ಅತ್ಯಗತ್ಯವಾಗಿದೆ. ಅದಕ್ಕೆ ಈಗಿನ ಸರ್ಕಾರಗಳೂ ಹೊರತಾಗಿಲ್ಲ ಎಂದು ತಿಳಿಸಿದರು.

ಮಾನವನಿಗೆ ಭಗವಂತ ಎಲ್ಲಾ ರೀತಿಯಾದ ಸೌಲಭ್ಯ ನೀಡಿದ್ದಾನೆ. ಗಾಳಿ, ಮಳೆ, ನೀರು, ಬೆಂಕಿಯಂತಹ ವಸ್ತುಗಳನ್ನು ನೀಡಿದ್ದಾನೆ. ಇವುಗಳ ಉಪಯೋಗ ಪಡೆದುಕೊಂಡ ಮಾನವ ದೇವರು ನಮಗೇನು ಕೊಟ್ಟಿದ್ದಾನೆ ಎಂದು ಪ್ರಶ್ನೆ ಮಾಡುವ ಮಟ್ಟಕ್ಕೆ ಬೆಳೆದಿದ್ದಾನೆ ಎಂದು ವಿಷಾದಿಸಿದರು. ಕಾರ್ಯಕ್ರಮದಲ್ಲಿ ಲಕೇಶ್ವರದ ಕರೆವಾಡಿ ಮಠದ ಶ್ರೀ ಮಳೆ ಮಲ್ಲಿಕಾರ್ಜನ ಸ್ವಾಮೀಜಿ, ಮುಸ್ಟೂರಿನ ಓಂಕಾರೇಶ್ವರ ಮಠದ ಶ್ರೀ ರುದ್ರಮುನಿ ಸ್ವಾಮಿಜಿ, ಉಜ್ಜಯನಿ ಮಠದ ನಿಯೋಜತ ಉತ್ತರಾಧಿಕಾರಿಗಳಾದ ಅಭಿಷೇಕ ದೇವರು, ಕಾರ್ಯದರ್ಶಿ ಈಶ್ವರಪ್ರಸಾದ್‌ ಪಾಲ್ಗೊಂಡಿದ್ದರು.

ಎಂಟು ವಟುಗಳಿಗೆ ಲಿಂಗದೀಕ್ಷೆ ನೀಡಲಾಯಿತು. ಶ್ರೀ ಮಠದಲ್ಲಿನ ಬಿಲ್ವವೃಕ್ಷಕ್ಕೆ ಶಿವದೀಕ್ಷೆ, ಲಿಂಗೈಕ್ಯ ಜಗದ್ಗುರುಗಳ ಕತೃì ಗದ್ದುಗೆಗೆ ಹಾಗೂ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ಮಹಾ ರುದ್ರಾಭೀಷೇಕ, ಸಹಸ್ರ ಬಿಲ್ವಾರ್ಚನೆ ಮಹಾಮಂಗಳಾರತಿ ನೆರವೇರವೇರಿದವು. ಲೋಕ ಕಲ್ಯಾಣಕ್ಕಾಗಿ ಗಣಹೋಮ, ನವಗ್ರಹ ಹೋಮ, ಧನ್ವಂತರಿ ಹೋಮ ಮಾಡಲಾಯಿತು.

ಟಾಪ್ ನ್ಯೂಸ್

16-6

ಅಪೂರ್ವ ಅನುಭೂತಿಯನ್ನು ನೀಡುವ ಆತ್ಮಕಥನ ‘ಕಾಲ ಉರುಳಿ ಉಳಿದುದು ನೆನಪಷ್ಟೇ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

Bjp chief jp nadda discussed the precaution and relief work with the lawmakers to help states hit by cyclone tauktae

ತೌಖ್ತೇ ಚಂಡಮಾರುತವನ್ನು ಎದುರಿಸಲು ಜನರ ಬೆನ್ನೆಲುಬಾಗಿರಿ : ಕಾರ್ಯಕರ್ತರಿಗೆ ನಡ್ಡಾ ಕರೆ

cats

ಕೋವಿಡ್-ಉಪಚುನಾವಣೆ ವೇಳೆ ಮೃತಪಟ್ಟ ಶಿಕ್ಷಕರ ಕುರಿತು ವಿವರ ಕೇಳಿದ ಸಚಿವ ಸುರೇಶ್ ಕುಮಾರ್‌

cats

‘ಸಾಯೋರು ಎಲ್ಲಾದರೂ ಸಾಯಲಿ’ : ಶಾಸಕ ಚಂದ್ರಪ್ಪ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

ಕುಷ್ಟಗಿಯಲ್ಲಿ ಸೇವೆ ಸಲ್ಲಿಸಿದ್ದ ತಹಸೀಲ್ದಾರ ಕೋವಿಡ್ ಗೆ ಬಲಿ

THoukthe Cyclone Effect in Goa, High allert announced by CM

ತೌಖ್ತೇ ಚಂಡಮಾರುತ : ಗೋವಾ ಕಡಲ ತೀರದಲ್ಲಿ ಅವಾಂತರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cats

‘ಸಾಯೋರು ಎಲ್ಲಾದರೂ ಸಾಯಲಿ’ : ಶಾಸಕ ಚಂದ್ರಪ್ಪ

cats

ಸಂಕಷ್ಟದ ಸಮಯದಲ್ಲಿ ರಾಜಕಾರಣ ಸರಿಯಲ್ಲ : ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

ಚಿತ್ರದುರ್ಗ: ಹಿರಿಯೂರು ಕೋವಿಡ್ ಆಸ್ಪತ್ರೆಯಲ್ಲಿ ಸಂಗೀತ ಸಂಜೆ

ಚಿತ್ರದುರ್ಗ: ಹಿರಿಯೂರು ಕೋವಿಡ್ ಆಸ್ಪತ್ರೆಯಲ್ಲಿ ಸಂಗೀತ ಸಂಜೆ

ಕೋವಿಡ್ ಸೋಂಕು ಹೆಚ್ಚಳ ಅಪಾಯಕಾರಿ

ಕೋವಿಡ್ ಸೋಂಕು ಹೆಚ್ಚಳ ಅಪಾಯಕಾರಿ

14-20

ಬೆಡ್‌ ಸಿಗದೇ ವೃದ್ಧ ಸಾವು; ಆರೋಪದ ವಿಡಿಯೋ ವೈರಲ್‌

MUST WATCH

udayavani youtube

ಪುತ್ತೂರು ಮಹಾಲಿಂಗೇಶ್ವರ ದೇಗುಲದ ಸಭಾಂಗಣ ಸದ್ಯಕ್ಕೆ COVID CARE CENTRE

udayavani youtube

ಕನ್ನಡ ಶಾಲೆಯ ವಿಭಿನ್ನ ಇಂಗ್ಲೀಷ್ ಕ್ಲಾಸ್

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

ಹೊಸ ಸೇರ್ಪಡೆ

15gadag 4

ಔಷಧ-ಹಾಸಿಗೆ-ಆಕ್ಸಿಜನ್‌ ಕೊರತೆಯಾಗದಂತೆ ನೋಡಿಕೊಳ್ಳಿ : ಡಿಸಿ ಸುಂದರೇಶ್‌ ಬಾಬು

16-6

ಅಪೂರ್ವ ಅನುಭೂತಿಯನ್ನು ನೀಡುವ ಆತ್ಮಕಥನ ‘ಕಾಲ ಉರುಳಿ ಉಳಿದುದು ನೆನಪಷ್ಟೇ

15hvr1

ಧರ್ಮಸ್ಥಳದಿಂದ ಬಂತು ಆಕ್ಸಿಜನ್‌ ಟ್ಯಾಂಕರ್‌

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

ಮಂಗಳೂರು ದೋಣಿ ನಾಪತ್ತೆ : ನೌಕಾ ಸೇನಾ ಹೆಲಿಕಾಪ್ಟರ್ ಬಳಸಿ ಕಾರ್ಯಚರಣೆಗೆ ಸಿದ್ಧತೆ

Bjp chief jp nadda discussed the precaution and relief work with the lawmakers to help states hit by cyclone tauktae

ತೌಖ್ತೇ ಚಂಡಮಾರುತವನ್ನು ಎದುರಿಸಲು ಜನರ ಬೆನ್ನೆಲುಬಾಗಿರಿ : ಕಾರ್ಯಕರ್ತರಿಗೆ ನಡ್ಡಾ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.