ಡಿವೈಎಸ್ಪಿ ಪಾಂಡುರಂಗಪ್ಪ ಅಮಾನತಿಗೆ ಒತ್ತಾಯ

Team Udayavani, Apr 23, 2021, 7:25 PM IST

23-14

ಚಿತ್ರದುರ್ಗ: ದಲಿತರಿಗೆ ಅನ್ಯಾಯವಾದರೆ ಮೊದಲು ಹೋಗುವುದೇ ಪೊಲೀಸರ ಬಳಿಗೆ. ಆದರೆ ಅಲ್ಲಿಯೇ ನ್ಯಾಯ ಸಿಗಲಿಲ್ಲ ಎಂದರೆ ಎಲ್ಲಿಗೆ ಹೋಗಬೇಕು ಎಂದು ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಪ್ರಶ್ನಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಉಪವಿಭಾಗದ ಡಿವೈಎಸ್ಪಿ ಪಾಂಡುರಂಗಪ್ಪ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಕೂಡಲೇ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಒಳಿತಿಗಾಗಿ ಇರುವ ದೌರ್ಜನ್ಯ ತಡೆ ಕಾಯ್ದೆಯನ್ನು ಡಿವೈಎಸ್‌ಪಿ ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. 2016ರಲ್ಲಿ ದಲಿತ ಮಹಾಗಣಪತಿ ಪ್ರತಿಷ್ಠಾಪನೆ ಮಾಡಿದ ಕಾರಣಕ್ಕೆ ಸಮುದಾಯದ ಬಾಳೆಕಾಯಿ ಶ್ರೀನಿವಾಸ್‌ ವಿರುದ್ಧ ಪ್ರಕರಣ ದಾಖಲಿಸಿ ರೌಡಿ ಪಟ್ಟಿಗೆ ಸೇರಿಸಲಾಗಿದೆ. ಪೊಲೀಸ್‌ ಇಲಾಖೆ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಒಬ್ಬ ಅಧಿಕಾರಿಯಿಂದ ಇಲಾಖೆಗೆ ಕೆಟ್ಟ ಹೆಸರು ಬರಬಾರದು ಎಂದರು.

ಬಾಳೆಕಾಯಿ ಶ್ರೀನಿವಾಸ್‌ಗೆ ಛಲವಾದಿ ಗುರುಪೀಠದಲ್ಲಿ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷ ಸ್ಥಾನ ನೀಡಿದ್ದೇವೆ. ವಿನಾಕಾರಣ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಗಡಿಪಾರು ಮಾಡುವ ಸಿದ್ಧತೆ ನಡೆಸುತ್ತಿದ್ದಾರೆ. ಇದು ಸಂವಿಧಾನ ಬಾಹಿರ. ಡಿವೈಎಸ್‌ಪಿ ಅವರು ಸಂವಿಧಾನಕ್ಕೆ ಬದ್ಧವಾಗಿ ನಡೆದುಕೊಳ್ಳಲಿ. ಇಲ್ಲದಿದ್ದರೆ ಪಾಂಡುರಂಗಪ್ಪ ವಿರುದ್ಧ ನಾನೇ ಅಟ್ರಾಸಿಟಿ ಪ್ರಕರಣ ದಾಖಲಿಸುತ್ತೇನೆ ಎಂದು ಸ್ವಾಮೀಜಿ ಎಚ್ಚರಿಸಿದರು.

ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಹಿಂಬಾಲಕರಾಗಿ ಡಿವೈಎಸ್‌ಪಿ ಪಾಂಡುರಂಗಪ್ಪ ಕೆಲಸ ಮಾಡುತ್ತಿದ್ದಾರೆ. ಸಂಘ ಪರಿವಾರದಲ್ಲಿ ಆಸಕ್ತಿ ಇದ್ದರೆ ಸಂಘಕ್ಕೆ ಸೇರಿಕೊಳ್ಳಿ. ಬಿಜೆಪಿ ಸರ್ಕಾರದ ಪರವಾಗಿ ಕರ್ತವ್ಯ ನಿರ್ವಹಿಸುವುದಾದರೆ ಕೆಲಸಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ರಾಜಕೀಯ ಪ್ರವೇಶಿಸಿ. ಅದನ್ನು ಬಿಟ್ಟು ಕರ್ತವ್ಯದಲ್ಲಿದ್ದು, ಸಂವಿಧಾನ ವಿರೋ ಧಿಯಾಗಿ ನಡೆದುಕೊಳ್ಳುವುದು ಸರಿಯಲ್ಲ. ಇನ್ನಾದರೂ ವರ್ತನೆ ಬದಲಿಸಿಕೊಳ್ಳಿ. ಇಲ್ಲವಾದರೆ ಹೋರಾಟಕ್ಕೆ ಸಿದ್ಧವಾಗಬೇಕಾಗುತ್ತದೆ ಎಂದು ಗುಡುಗಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಧನಂಜಯ, ಮಹಾಲಿಂಗಪ್ಪ ಕುಂಚಿಗನಹಾಳ್‌, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್‌ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಎಸ್‌.ಕೆ. ಮಹಂತೇಶ್‌ ಇದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.