ಏಪ್ರಿಲ್‌ ವೇಳೆಗೆ ಭೂ ಸ್ವಾಧೀನ

ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆಯ 827.18 ಎಕರೆ ಭೂಮಿ

Team Udayavani, Jan 10, 2020, 1:24 PM IST

10-January-12

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆಗೆ ಸಂಬಂಧಿಸಿದ 827.18 ಎಕರೆ ಭೂಮಿಯನ್ನು ಏಪ್ರಿಲ್‌ ವೇಳೆಗೆ ಸ್ವಾಧೀನ ಮಾಡಿಕೊಂಡು ಕಾಮಗಾರಿ ಚುರುಕುಗೊಳಿಸುವ ಕುರಿತು ಎಂದು ರೈತರು ಹಾಗೂ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.

ನಗರದ ಭದ್ರಾ ಮೇಲ್ದಂಡೆ ಯೋಜನೆ ಕಚೇರಿ ಸಭಾಂಗಣದಲ್ಲಿ ಗುರುವಾರ ಕಾಮಗಾರಿಗೆ ಸಂಬಂಧಿಸಿದಂತೆ ರೈತರಿಗೆ ಪರಿಹಾರ ಹಾಗೂ ಭೂಸ್ವಾಧೀನ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು. ಎಲ್ಲೆಲ್ಲಿ-ಎಷ್ಟೆಷ್ಟು ಎಕರೆ ಸ್ವಾ ಧೀನ: ಚಿತ್ರದುರ್ಗ ಶಾಖಾ ಕಾಲುವೆಯ 10ನೇ ಪ್ಯಾಕೇಜ್‌ಗೆ ಭರಂಪುರ ವ್ಯಾಪ್ತಿಯಲ್ಲಿ 17 ಎಕರೆ, ಪಾಲವ್ವನಹಳ್ಳಿ- 58.35 ಎಕರೆ, ಮರಡಿದೇವಿಗೆರೆ-74.12, ಚಿಕ್ಕಸಿದ್ದವ್ವನಹಳ್ಳಿ-74.19, ದೊಡ್ಡಸಿದ್ದವ್ವನಹಳ್ಳಿ-28.08. ಪ್ಯಾಕೇಜ್‌ 11ರಲ್ಲಿ ದೊಡ್ಡಸಿದ್ದವ್ವನಹಳ್ಳಿ-111.03, ಕುಂಚಿಗನಾಳ್‌-
17.27, ದ್ಯಾಮವ್ವನಹಳ್ಳಿ-2.05, ಗೋನೂರು 58.25 ಎಕರೆ ಸೇರಿ ಒಟ್ಟು 189.20 ಎಕರೆ ಭೂಸ್ವಾಧೀನಕ್ಕೆ 2018 ರ ಆಗಸ್ಟ್‌ 22ರಂದು ಅಧಿ ಸೂಚನೆ ಹೊರಡಿಸಲಾಗಿದೆ.

ಪ್ಯಾಕೇಜ್‌ 12ರಲ್ಲಿ ಕಲ್ಲೇನಹಳ್ಳಿ-42.05, ಬೆಳಗಟ್ಟ-114.07, ಹಾಯ್ಕಲ್‌-31.03, ಪೇಲೂರ ಹಟ್ಟಿ-77.28, ದ್ಯಾಮವ್ವನಹಳ್ಳಿ-111.39, ಜನ್ನೇನ ಹಳ್ಳಿ-7.20 ಎಕರೆ ಸೇರಿದಂತೆ ಒಟ್ಟು 385.02 ಎಕರೆ ಭೂಸ್ವಾ ಧೀನಕ್ಕೆ 2018 ರ ಆಗಸ್ಟ್‌ 22 ರಂದು
ಅಧಿ ಸೂಚನೆ ಹೊರಡಿಸಿದೆ. ಡೀಮ್ಡ್ ಅರಣ್ಯಕ್ಕೆ ಬೇಕು.

ಪರ್ಯಾಯ ಭೂಮಿ: ದ್ವಾಮವ್ವನಹಳ್ಳಿ ವ್ಯಾಪ್ತಿಯಲ್ಲಿ 33 ಎಕರೆ ಡೀಮ್ಡ್ ಅರಣ್ಯ ಪ್ರದೇಶ ಭೂಸ್ವಾ ಧೀನ ಆಗಬೇಕಿದ್ದು, ಇಷ್ಟೇ
ವಿಸ್ತೀರ್ಣದ ಪರ್ಯಾಯ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದಲ್ಲಿ ಮಾತ್ರ ಡೀಮ್ಡ್ ಅರಣ್ಯ ಪ್ರದೇಶವನ್ನು ಕಾಮಗಾರಿಗೆ ಹಸ್ತಾಂತರಿಸುವ ಬಗ್ಗೆ ಅರಣ್ಯ ಇಲಾಖೆ ಷರತ್ತು ವಿಧಿಸಿದೆ. ಈ ದಿಸೆಯಲ್ಲಿ ಕಂದಾಯ ಇಲಾಖೆಯೊಂದಿಗೆ ಪತ್ರ ವ್ಯವಹಾರ ಮಾಡಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರ ಶ್ರೀಧರ್‌ ತಿಳಿಸಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ರೈತರ ಜಮೀನಿನ ಭೂ ಸ್ವಾಧೀನಕ್ಕೆ ಸಂಬಂ ಧಿಸಿದಂತೆ ಪ್ರಕ್ರಿಯೆ ಜಾರಿಯಲ್ಲಿದ್ದು, ನಿಗಮದಿಂದ ಇನ್ನೂ ಭೂ ಸ್ವಾಧೀನ ಪಡೆಯದೇ ಇರುವ ಸ್ಥಳಗಳಲ್ಲಿ ಗುತ್ತಿಗೆದಾರರು ಸಂಬಂಧಿಸಿದ ರೈತರ ಸಹಮತ ಮತ್ತು ಒಪ್ಪಿಗೆ ಪಡೆದು ಕಾಮಗಾರಿ ನಿರ್ವಹಿಸಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಆ ಪ್ರಕಾರ ಗುತ್ತಿಗೆದಾರರು ರೈತರ ಸಹಮತ ಮತ್ತು ಒಪ್ಪಿಗೆ ಪಡೆದು ಕಾಮಗಾರಿ ನಿರ್ವಹಿಸುತ್ತಿದ್ದಾರೆ. ರೈತರ ಒಪ್ಪಿಗೆ ಮೇರೆಗೆ ರೈತರ ಜಮೀನಿನಲ್ಲಿ ಕಾಮಗಾರಿಗಳು ಮತ್ತು ಭೂ ಸ್ವಾಧೀನ ಕೆಲಸಗಳು ನಡೆಯುತ್ತಿದ್ದು, ರೈತರಿಗೆ ಭೂ ಪರಿಹಾರವನ್ನು ಭೂ ಸ್ವಾಧೀನ ಕಾಯ್ದೆ ಅನ್ವಯ ನೀಡಲಾಗುತ್ತದೆ ಎಂದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ಗುತ್ತಿಗೆದಾರರು, ರೈತರೊಂದಿಗಿನ ಒಪ್ಪಂದದಂತೆ ಬೆಳೆ ಪರಿಹಾರ ಕೊಟ್ಟುಕೊಂಡಿದ್ದಾರೆ. ಇದು ಇಲಾಖೆಯಿಂದ ನೀಡಿದ ಪರಿಹಾರವಲ್ಲ. ಇನ್ನು ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ಕೊಡದೆ, ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದರು.

ಜಮೀನಿನ ದಾಖಲೆಗಳ ಸಂಗ್ರಹವೇ ತ್ರಾಸು: ಕಾಮಗಾರಿಗೆ ಭೂ ಸ್ವಾಧೀನ ಪ್ರಕ್ರಿಯೆ ವಿಳಂಭವಾಗುತ್ತಿದ್ದು, ಇದಕ್ಕೆ ಕಾರಣ ಕೆಲ ಜಮೀನುಗಳ ದಾಖಲೆಗಳೇ ಸಿಗುತ್ತಿಲ್ಲ ಎಂದು ಯೋಜನೆಯ ಕಾರ್ಯಪಾಲಕ ಇಂಜಿನಿಯರ್‌ ಸೋಮಶೇಖರ್‌ ತಿಳಿಸಿದರು.

ಕೆಲ ದರಖಾಸ್ತು ಜಮೀನುಗಳಿಗೆ 1953 ರಿಂದ ದಾಖಲೆ ಸಂಗ್ರಹಿಸಬೇಕಿದೆ. ಆಕರ ಬಂದ್‌ ಪಹಣಿ ಮತ್ತಿತರೆ ದಾಖಲೆಗಳು ಹೊಂದಾಣಿಕೆ ಆಗುತ್ತಿಲ್ಲ. ಕೆಲ ರೈತರ ಜಂಟಿ ಪಹಣಿಗಳಿದ್ದು, ಪ್ರತ್ಯೇಕ ಸರ್ವೇ ಮಾಡಿಸಿ ಸ್ಕೆಚ್‌ ತಯಾರಿಸಿ ಪಹಣಿ ತರಿಸಿಕೊಳ್ಳಬೇಕಾಗಿದೆ. ಈ ಎಲ್ಲಾ ಕೆಲಸಗಳಿಗೆ ಸರ್ವೇ ಅಧಿಕಾರಿಗಳನ್ನು ಪದೇ ಪದೇ ರೈತರ ಜಮೀನಿಗೆ ಕರೆದೊಯ್ಯುವ ಕೆಲಸ ಆಗುತ್ತಿದೆ. ಇನ್ನೂ ಹತ್ತು ಪಹಣಿಗಳು ಸಿಕ್ಕಿದ ತಕ್ಷಣ ಭರಂಪುರದಿಂದ ಪಾಲವ್ವನಹಳ್ಳಿವರೆಗೆ 11/1 ನೋಟಿಫಿಕೇಶನ್‌
ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್‌ ಶಿವಕುಮಾರ್‌, ಅಧಿಕಾರಿಗಳಾದ ಸತ್ಯನಾರಾಯಣ, ಕಲಾವತಿ, ಕುಲಕರ್ಣಿ, ವೆಂಕಟೇಶ್‌, ತಿಪ್ಪೇರುದ್ರಪ್ಪ, ಶ್ರೀಧರ್‌, ರಾಮಚಂದ್ರ, ರೈತ ಮುಖಂಡರಾದ ನುಲೇನೂರು ಎಂ. ಶಂಕ್ರಪ್ಪ, ಕೊಂಚೆ ಶಿವರುದ್ರಪ್ಪ, ಬಸ್ತಿಹಳ್ಳಿ ಸುರೇಶ್‌ ಬಾಬು, ಮಂಜುಳಾ ಡಾ| ಸ್ವಾಮಿ
ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.