ಮತ್ತೆ ಮೂವರಿಗೆ ಕೋವಿಡ್
Team Udayavani, Jun 27, 2020, 12:36 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೋವಿಡ್-19 ಸೋಂಕು ತಗುಲಿರುವುದು ಶುಕ್ರವಾರದ ವರದಿಯಲ್ಲಿ ದೃಢಪಟ್ಟಿದೆ.
ಹಿರಿಯೂರು ನಗರದ 48 ವರ್ಷದ ಪುರುಷ, ಹೊಳಲ್ಕೆರೆ ಪಟ್ಟಣದ 25 ವರ್ಷದ ಯುವಕ ಹಾಗೂ ಚಳ್ಳಕೆರೆ ಪಟ್ಟಣದ 24 ವರ್ಷದ ಯುವಕ ಸೇರಿದಂತೆ ಒಟ್ಟು ಮೂವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮೂವರನ್ನು ಚಿತ್ರದುರ್ಗ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ 63 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು, 29 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 33 ಜನರ ವರದಿ ಬರುವುದು ಬಾಕಿ ಇದೆ. ಸದ್ಯ ಜಿಲ್ಲೆಯಲ್ಲಿ 2104 ಜನ ಹೋಂ ಕ್ವಾರಂಟೈನ್ನಲ್ಲಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, ಈ ಪೈಕಿ 43 ಜನ ಈಗಾಗಲೆ ಗುಣಮುಖರಾಗಿದ್ದಾರೆ. ಈವರೆಗೆ 4746 ಜನರ ಮಾದರಿ ಸಂಗ್ರಹಿಸಲಾಗಿದ್ದು, 4531 ಜನರ ವರದಿ ನೆಗೆಟಿವ್ ಬಂದಿದೆ. ಉಳಿದ 134 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ