ಗುತ್ತಿಗೆ ನೌಕರರ ಸಮಸ್ಯೆ ಬಗೆಹರಿಸಲು ಒತ್ತಾಯ


Team Udayavani, Feb 5, 2020, 3:44 PM IST

5-Febrauary-19

ಚಿತ್ರದುರ್ಗ: ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಡಿ ಗ್ರೂಪ್‌ ಹಾಗೂ ನಾನ್‌ ಕ್ಲಿನಿಕಲ್‌ ಕೆಲಸ ಮಾಡುತ್ತಿದ್ದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಇದರಿಂದ ನಮ್ಮ ಕುಟುಂಬ ಬೀದಿಗೆ ಬಿದ್ದಿವೆ ಎಂದು ಮಂಗಳವಾರ ಜಿಲ್ಲಾಕಾರಿ ಕಚೇರಿ ಎದುರು ಸಿಬ್ಬಂದಿ ಅಳಲು ವ್ಯಕ್ತಪಡಿಸಿದರು.

ಫೆ. 1 ರಿಂದ ಗುತ್ತಿಗೆ ನೌಕರರನ್ನು ವಜಾಗೊಳಿಸಿದ್ದೇವೆ ಎಂದು ಖಾಸಗಿ ಏಜೆನ್ಸಿಯವರು ಪತ್ರದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಅವರು ಜಿಲ್ಲಾಸ್ಪತ್ರೆಗೆ ವಾಸ್ತವ್ಯಕ್ಕಾಗಿ ಆಗಮಿಸಿದ್ದಾಗ ಮನವಿ ಸಲ್ಲಿಸಿದ್ದೆವು. ಇದಕ್ಕೆ ಸ್ಪಂದಿಸಿದ್ದ ಸಚಿವರು ಯಾರನ್ನೂ ಕೆಲಸದಿಂದ ತೆಗೆದು ಹಾಕದೆ ಮುಂದುವರೆಸಲು ಸೂಚಿಸುತ್ತೇನೆ ಎಂದಿದ್ದರು. ಆದರೆ ಮರುದಿನ ಕೆಲಸಕ್ಕೆ ಹೋದರೆ ಆದೇಶ ಪತ್ರ ತನ್ನಿ ಎನ್ನುತ್ತಿದ್ದಾರೆ ಎಂದು ದುಃಖ ತೋಡಿಕೊಂಡರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದವರನ್ನು ಮುಂದುವರಿಸಿದ್ದಾರೆ. ಆದರೆ ಇತರೆ ಆಸ್ಪತ್ರೆಗಳಲ್ಲಿರುವವರನ್ನು ಬಿಟ್ಟುಕೊಳ್ಳುತ್ತಿಲ್ಲ. 600 ರೂ.ಗಳಿಂದ 10 ಸಾವಿರ ರೂ. ವೇತನ ಸಿಗುವವರೆಗೆ ಸುಮಾರು 20 ವರ್ಷಗಳಿಂದ ಕೆಲಸ ಮಾಡುತ್ತಿದ್ದೇವೆ. ಇದನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಈಗ ಏಕಾಏಕಿ ತೆಗೆದು ಹಾಕಿದರೆ ನಮ್ಮ ಬದುಕು ಹೇಗೆ ಎಂದು ಪ್ರಶ್ನಿಸಿದರು.

ಸಮಸ್ಯೆ ಆಲಿಸದ ಜಿಲ್ಲಾಧಿಕಾರಿ: ಕೆಲಸ ಕಳೆದುಕೊಂಡ ಸುಮಾರು 20 ಮಂದಿ ಸಿಬ್ಬಂದಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುಮಾರು ಎರಡು ತಾಸು ಜಿಲ್ಲಾಧಿಕಾರಿಗಳಿಗಾಗಿ ಕಾಯುತ್ತಿದ್ದರು. ಅಷ್ಟರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸುಮಾರು ಒಂದು ತಾಸು ಸಭೆ ನಡೆಸಿದರು. ಇಷ್ಟೆಲ್ಲಾ ಮುಗಿಯುವವರೆಗೆ ಕಾದು ಕುಳಿತಿದ್ದವರು ಸಭೆ ಮುಗಿಸಿ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೊರ ಬರುತ್ತಿದ್ದಂತೆ ಮನವಿ ಪತ್ರಗಳನ್ನು ಹಿಡಿದು ನಮ್ಮನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ, ಸಚಿವರು ಮುಂದುವರಿಸುವಂತೆ ಸೂಚಿಸಿದ್ದಾರೆ. ದಯವಿಟ್ಟು ನಮಗೆ ನ್ಯಾಯ ಕೊಡಿಸಿ ಎಂದು ಬೇಡಿಕೊಂಡರು. ಆದರೆ ಜಿಲ್ಲಾಧಿಕಾರಿ ಮಾತ್ರ ಯಾವುದನ್ನೂ ಕೇಳಿಸಿಕೊಳ್ಳದೇ ತಮ್ಮ ಕಚೇರಿಗೆ ತೆರಳಿದರು. ಇದರಿಂದ ಬೇಸರಗೊಂಡ “ಡಿ’ ಗ್ರೂಪ್‌ ಸಿಬ್ಬಂದಿಗಳು ನಮ್ಮ ನೋವನ್ನು ಯಾರ ಮುಂದೆ ಹೇಳಿಕೊಳ್ಳಬೇಕು. ಬೆಂಗಳೂರಿಗೆ ಹೋಗಿ ಪ್ರತಿಭಟಿಸುತ್ತೇವೆ ಎಂದರು.

ಹಿರಿಯೂರು ತಾಲೂಕು ಧರ್ಮಪುರ, ಮರಡಿಹಳ್ಳಿ, ಚಳ್ಳಕೆರೆ ತಾಲೂಕಿನ ಪರಶುರಾಮಪುರ, ನಾಯಕನಹಟ್ಟಿ, ಚಳ್ಳಕೆರೆ, ಮೊಳಕಾಲ್ಮೂರು ಸೇರಿದಂತೆ ವಿವಿಧ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿದ್ದ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.