ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ
Team Udayavani, May 6, 2020, 1:10 PM IST
ಸಾಂದರ್ಭಿಕ ಚಿತ್ರ
ಚಿತ್ರದುರ್ಗ: ಜಿಲ್ಲೆಯಲ್ಲಿ ತುರ್ತಾಗಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಹಾಗೂ ಈರುಳ್ಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರು ಕಾರ್ಯಕರ್ತರು ಮಂಗಳವಾರ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಕ್ವಿಂಟಾಲ್ಗೆ 1760 ರೂ. ನೀಡಿ ಖರೀ ದಿಸುವುದಾಗಿ ಆದೇಶ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ತಕ್ಷಣ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ರೈತರು ಹಿಂಗಾರು ಹಂಗಾಮಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಈಗಾಗಲೇ ಸುಮಾರು 45 ದಿವಸಗಳ ಹಿಂದೆ ಕಟಾವಾಗಿದೆ. ಬೆಲೆ ಕುಸಿತದಿಂದ ಮಾರಾಟವಾಗದೆ ಅರ್ಧದಷ್ಟು ಈರುಳ್ಳಿ ನಾಶವಾಗಿದೆ. ಕೊರೊನಾ ಸಮಸ್ಯೆಯಿಂದ ಯಾವ ಖರೀದಿದಾರರು ಬಂದರೂ ಕನಿಷ್ಠ ಮೊತ್ತಕ್ಕೆ ಕೇಳಿ ವಾಪಸ್ ಹೋಗುತ್ತಿದ್ದಾರೆ. ಆದ್ದರಿಂದ ಈರುಳ್ಳಿಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿ ಈರುಳ್ಳಿ ಖರೀದಿ ಕೇಂದ್ರವನ್ನು ಆರಂಭಿಸಬೇಕು. ಹೂವಿನ ಬೆಳೆಗಾರರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳು ಘೋಷಣೆ ಮಾಡಿ 45 ದಿನ ಕಳೆದಿದೆ. ಇದುವರೆಗೆ ಪರಿಹಾರ ಮೊತ್ತ ಘೋಷಣೆಯಾಗಿಲ್ಲ. ಇದನ್ನೂ ತ್ವರಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ