ಕೋಟೆನಾಡಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಪರೀಕ್ಷೆಗೆ ಹಾಜರಾಗಲಿದ್ದಾರೆ 22,615 ವಿದ್ಯಾರ್ಥಿಗಳು 371 ವಲಸೆ ವಿದ್ಯಾರ್ಥಿಗಳಿಗೂ ಅವಕಾಶ

Team Udayavani, Jun 24, 2020, 3:35 PM IST

24-June-13

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಿತ್ರದುರ್ಗ: ಜಿಲ್ಲೆಯ 87 ಪರೀಕ್ಷಾ ಕೇಂದ್ರಗಳಲ್ಲಿ 22,615 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಡಿಡಿಪಿಐ ಕೆ. ರವಿಶಂಕರ ರೆಡ್ಡಿ ತಿಳಿಸಿದ್ದಾರೆ. ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಲು ಸರ್ಕಾರದ ಸೂಚನೆಯಂತೆ ಹೆಚ್ಚುವರಿಯಾಗಿ 12 ಬ್ಲಾಕ್‌ಗಳನ್ನು ಮಾಡಲಾಗಿದೆ. ಪರೀಕ್ಷೆ ವೇಳೆ ಕಂಟೇನ್ಮೆಂಟ್‌ ವಲಯ ಘೋಷಣೆಯಾದಲ್ಲಿ ಪರ್ಯಾಯ ವ್ಯವಸ್ಥೆಗಾಗಿ ಪ್ರತಿ ತಾಲೂಕಿನಲ್ಲಿ ತಲಾ ಎರಡು ಪರೀಕ್ಷಾ ಕೇಂದ್ರಗಳನ್ನು ಕಾಯ್ದಿರಿಸಲಾಗಿದೆ ಎಂದಿದ್ದಾರೆ.

371 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಜಿಲ್ಲೆಯಲ್ಲಿ ವ್ಯಾಸಂಗ ಮಾಡಿ, ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 248. ಸಾರಿಗೆ ವ್ಯವಸ್ಥೆ ಇಲ್ಲದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯ 197 ವಾಹನಗಳನ್ನು ಬಳಸಿಕೊಳ್ಳುವ ಮೂಲಕ ಒಟ್ಟು 215 ಮಾರ್ಗಗಳನ್ನು ಗುರುತಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ ತಲಾ ಎರಡು ಮಾಸ್ಕ್ ಗಳನ್ನು ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ದಾನಿಗಳಿಂದ ಪಡೆದು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೋವಿಡ್‌-19 ಲಕ್ಷಣಗಳುಳ್ಳ ವಿದ್ಯಾರ್ಥಿಗಳಿಗೆ ಎನ್‌-95 ಮಾಸ್ಕ್ ಗಳನ್ನು ವಿತರಿಸಿ ಪ್ರತಿ ಕೇಂದ್ರಕ್ಕೆ ತಲಾ 10 ಮಾಸ್ಕ್ ಗಳನ್ನು ಕಾಯ್ದಿರಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ 6 ಲೀಟರ್‌ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ 2 ರಿಂದ 3 ಥರ್ಮಲ್‌ ಸ್ಕ್ಯಾನರ್‌ಗಳನ್ನು ಮಂಡಳಿಯಿಂದ ಸರಬರಾಜು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಅಂತರ ಕಾಪಾಡುವ ಸಂಬಂಧ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ 2-3 ಅಭ್ಯರ್ಥಿಗಳನ್ನು ಪ್ರತಿ ಪರೀಕ್ಷಾ ಕೇಂದ್ರಕ್ಕೆ ನಿಯೋಜನೆ ಮಾಡಲಾಗಿದೆ. ಭದ್ರತಾ ದೃಷ್ಟಿಯಿಂದ ಹಾಗೂ ಅಕ್ರಮ ತಡೆಗಟ್ಟಲು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಗತ್ಯವಿರುವ ಕಡೆ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ 200 ವಿದ್ಯಾರ್ಥಿಗಳಿಗೆ ಒಂದರಂತೆ ಹೆಲ್ತ್‌ಕೌಂಟರ್‌ ಗಳನ್ನು ಸ್ಥಾಪಿಸುವ ಮೂಲಕ ಪ್ರತಿ ವಿದ್ಯಾರ್ಥಿಯ ಹಾಗೂ ಸಿಬ್ಬಂದಿಯ ಆರೋಗ್ಯ ತಪಾಸಣೆ ಮಾಡಲು ಕ್ರಮ ವಹಿಸಲಾಗಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜಿಸಲಾಗಿದೆ. ಅಂತಾರಾಜ್ಯದಿಂದ 27 ವಿದ್ಯಾರ್ಥಿಗಳು ಗಡಿ ಪ್ರದೇಶದ ಪರೀಕ್ಷಾ ಕೇಂದ್ರಗಳಿಗೆ ಬರಲಿದ್ದು, ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಅವಶ್ಯಕತೆ ಇರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.