ಆರೋಗ್ಯಪೂರ್ಣ ದೇಶ ನಿರ್ಮಾಣಕ್ಕೆ ಪಣ ತೊಡಿ

ಲಸಿಕಾ ಅಭಿಯಾನ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ವಿಶಾಲಾಕ್ಷಿ ನಟರಾಜ್‌

Team Udayavani, Jan 20, 2020, 3:24 PM IST

20-January-14

ಚಿತ್ರದುರ್ಗ: ಭಾರತ ಪೋಲಿಯೋ ಮುಕ್ತವಾಗಿದ್ದರೂ, ಸಂಭವನೀಯ ಪೋಲಿಯೋ ತಡೆಗಟ್ಟುವ ಉದ್ದೇಶದಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬುದ್ಧನಗರದ ನಗರಆರೋಗ್ಯ ಕೇಂದ್ರದಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇಂದಿನಿಂದ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಅಭಿಯಾನ ಆರಂಭವಾಗಿದೆ. ಎಲ್ಲಾ ತಾಯಂದಿರು ಮಕ್ಕಳನ್ನು ಲಸಿಕಾ ಬೂತ್‌ಗೆ ಕರೆದೊಯ್ದು ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಆರೋಗ್ಯವಂತರನ್ನಾಗಿ ಮಾಡಬೇಕು. ಸಾರ್ವಜನಿಕರು ಈ ಕುರಿತು ತಾಯಂದಿರಲ್ಲಿ ಅರಿವು ಮೂಡಿಸಿ ಲಸಿಕಾ ಅಭಿಯಾನ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು. ಈ ಮೂಲಕ ಪೋಲಿಯೋ ರೋಗವನ್ನು ದೇಶದಿಂದ ಶಾಶ್ವತವಾಗಿ ನಿರ್ಮೂಲನೆ ಮಾಡಿ ಆರೋಗ್ಯಪೂರ್ಣ ಭಾರತ ನಿರ್ಮಿಸೋಣ ಎಂದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಮಾತನಾಡಿ, 5 ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು. ಈ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಗಮನಹರಿಸಬೇಕು ಎಂದು ತಿಳಿಸಿದರು.

ದೇಶ ಈಗಾಗಲೇ ಪೋಲಿಯೋ ಮುಕ್ತವಾಗಿದೆ. ಈ ಗೆಲುವನ್ನು ಮುಂದುವರಿಸೋಣ. ಪೋಲಿಯೋ ಲಸಿಕೆ ಬಗ್ಗೆ ಈಗಾಗಲೇ ಸಾರ್ವಜನಿಕರಲ್ಲಿ ಅರಿವು ಇದೆ. ಪೋಲಿಯೋ ಕಾರ್ಯಕ್ರಮದ ನಿಮಿತ್ತ ಆರೋಗ್ಯ ಇಲಾಖೆ ಸಿಬ್ಬಂದಿಗಳು ಜ. 20 ರಿಂದ 22 ರವರೆಗೆ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಿದ್ದಾರೆ.

ಸಾರ್ವಜನಿಕರು ಇದರ ಪ್ರಯೋಜನ ಪಡೆದು ಭಾರತಕ್ಕೆ ಮತ್ತೆ ಪೋಲಿಯೋ ಕಾಲಿಡದಂತೆ ಎಚ್ಚರ ವಹಿಸಬೇಕೆಂದರು. ಜಿಲ್ಲಾ ನೋಡಲ್‌ ಅ ಧಿಕಾರಿ ಡಾ| ಜಗದೀಶ್‌ ಮಾತನಾಡಿ, ಕಳೆದ 2011 ರಿಂದ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣ ದಾಖಲಾಗಿಲ್ಲ. ಆದರೂ ಪೋಲಿಯೋ ಕಾರ್ಯಕ್ರಮ ಚಾಲ್ತಿಯಲ್ಲಿದೆ. ನೆರೆಯ ಪಾಕಿಸ್ತಾನ ಹಾಗೂ ಅಪಾಘಾನಿಸ್ತಾನ ರಾಷ್ಟ್ರಗಳು ಇನ್ನೂ ಪೋಲಿಯೋ ಮುಕ್ತವಾಗಿಲ್ಲ. 2019ರಲ್ಲಿ ಪಾಕಿಸ್ತಾನದಲ್ಲಿ 128 ಪೋಲಿಯೋ ಪ್ರಕರಣಗಳು ಪತ್ತೆಯಾಗಿವೆ. ಪೋಲಿಯೋ ಬಹುಬೇಗನೇ ಹರಡುವ ಸಾಧ್ಯತೆಯಿದೆ. ಆದ್ದರಿಂದ ಮುಂದಾಗುವ ಅನಾಹುತ ತಪ್ಪಿಸಲು ಮುಂಜಾಗ್ರತೆಯಿಂದ ದೇಶದಲ್ಲಿ ಪ್ರತಿ ವರ್ಷ ಪೋಲಿಯೋ ಲಸಿಕೆ ಹಾಕಲಾಗುತ್ತದೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಪಾಲಾಕ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾ ನಾಯಕ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.