Udayavni Special

ನಾಳೆಯಿಂದ ಮಹಾಶಿವರಾತ್ರಿ ಮಹೋತ್ಸವ ಆರಂಭ

ಆರು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಯೋಜನೆ22 ರಂದು ಕೌದಿಪೂಜೆಯೊಂದಿಗೆ ಮಹೋತ್ಸ ವ ಸಂಪನ್ನ

Team Udayavani, Feb 16, 2020, 5:08 PM IST

16-February-32

ಚಿತ್ರದುರ್ಗ: ನಗರದ ಸದ್ಗುರು ಕಬೀರಾನಂದ ಮಠದಲ್ಲಿ ಫೆ. 17 ರಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ ಎಂದು ಶ್ರೀ ಶಿವಲಿಂಗಾನಂದ ಸ್ವಾಮೀಜಿ ತಿಳಿಸಿದರು.

ಶನಿವಾರ ಶ್ರೀಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಸಿದ್ಧಾರೂಢರ ಸಂಕಲ್ಪದಂತೆ ಪ್ರತಿ ವರ್ಷ ಮಹಾಶಿವರಾತ್ರಿ ಮಹೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ನಾಳೆಯಿಂದ 22 ರವರೆಗೆ ಆರು ದಿನಗಳ ಕಾಲ ನಡೆಯುವ ಮಹಾಶಿವರಾತ್ರಿ ಮಹೋತ್ಸವದಲ್ಲಿ ಸಂತರು, ಸಾಹಿತಿಗಳು, ವಿದ್ವಾಂಸರು, ಕಲಾವಿದರು, ರಾಜಕಾರಣಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಮಾಘ ಮಾಸದಲ್ಲಿ ಬರುವ ಶಿವರಾತ್ರಿ ಮಹೋತ್ಸವ ಅತ್ಯಂತ ಪಾವನವಾದುದು. ಎಷ್ಟೋ ರಾತ್ರಿಗಳನ್ನು ಕಳೆಯುವುದು ಮುಖ್ಯವಲ್ಲ. ಮಹಾಶಿವರಾತ್ರಿಯ ರಾತ್ರಿಯಿಡೀ ಶಿವನನ್ನು ಧ್ಯಾನಿಸುವುದು ಅತ್ಯಂತ ಪವಿತ್ರವಾದುದು. ಶ್ರೀ ಸದ್ಗುರು ಕಬೀರಾನಂದ ಸ್ವಾಮಿಗಳು ಚಿತ್ರದುರ್ಗಕ್ಕೆ ಬಂದಿದ್ದೇ ಗೋಶಾಲೆ ಆರಂಭಿಸುವುದಕ್ಕಾಗಿ. ಈ ಹಿನ್ನೆಲೆಯಲ್ಲಿ ಕಾತ್ರಾಳು ಸಮೀಪ ಗೋಶಾಲೆಯನ್ನು ನಿರ್ಮಿಸಿ ಜಾನುವಾರುಗಳಿಗೆ ಮೇವು, ನೀರು ಒದಗಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಮಠದ ಆವರಣದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಶಾಶ್ವತವಾದ ವೇದಿಕೆ ನಿರ್ಮಿಸಿದ್ದು, ಮುಂಭಾಗದಲ್ಲಿ ವಿಶಾಲವಾದ ಮೇಲ್ಛಾವಣಿ ನಿರ್ಮಿಸಲಾಗಿದೆ. ಇದು ಕೇವಲ ಮಹಾಶಿವರಾತ್ರಿ ಮಹೋತ್ಸವಕ್ಕಷ್ಟೆ ಮೀಸಲಿಲ್ಲ. ಬೇರೆ ಬೇರೆ ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ ಎಂದು ಹೇಳಿದರು.

ಫೆ. 17ರಂದು ಸಂಜೆ 6:30ಕ್ಕೆ ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿಚುಂಚನಗಿರಿ
ಮಠದ ಪೀಠಾಧ್ಯಕ್ಷ ಡಾ| ನಿರ್ಮಲಾನಂದನಾಥ ಸ್ವಾಮೀಜಿ, ರಾಮದುರ್ಗದ ಗಾಳೇಶ್ವರ ಮಹಾಸಂಸ್ಥಾನ ಮಠದ ಶ್ರೀ ವೆಂಕಟೇಶ್ವರ ಮಹಾರಾಜ್‌, ಹುಬ್ಬಳ್ಳಿ ಜಡಿಸಿದ್ದೇಶ್ವರ ಮಠದ ಶ್ರೀ ರಾಮಾನಂದ ಭಾರತೀ ಸ್ವಾಮೀಜಿ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಟಿ. ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್‌, ಮಾಜಿ ಸಚಿವ ಎಚ್‌. ಆಂಜನೇಯ, ಮಾಜಿ ಸಂಸದ ಬಿ.ಎನ್‌. ಚಂದ್ರಪ್ಪ ಮತ್ತಿತರರು ಭಾಗವಹಿಸುವರು.

ಫೆ. 18ರಂದು ಹುಬ್ಬಳ್ಳಿ-ಬಿಜಾಪುರ ಶಾಂತಾಶ್ರಮ ಷಣ್ಮುಖಾರೂಢ ಮಠದ ಶ್ರೀಮದಭಿನವ ಶಿವಪುತ್ರ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠಗಳ ಹಾಸನದ ಶ್ರೀ ಶಂಭುನಾಥ ಸ್ವಾಮೀಜಿ, ಶೃಂಗೇರಿಯ ಶ್ರೀ ಗುಣಾನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರದ ಶ್ರೀ ಮಂಗಳನಾಥ ಸ್ವಾಮೀಜಿ, ಮಂಗಳೂರಿನ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಕಬಳಿಯ ಶ್ರೀ ಶಿವಪುತ್ರನಾಥ ಸ್ವಾಮೀಜಿ, ಮೈಸೂರು ಚುಂಚನಕಟ್ಟೆಯ ಶ್ರೀ ಶಿವಾನಂದ ಸ್ವಾಮೀಜಿ, ದಸರಿಘಟ್ಟದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ವಿವರಿಸಿದರು.

ಫೆ. 19 ರಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಬಾಗಲಕೋಟೆ ಕೌದೀಶ್ವರ ಮಠದ ಶ್ರೀ ಮಾಧವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸದ ಎ. ನಾರಾಯಣಸ್ವಾಮಿ, ಕುವೆಂಪು ವಿವಿ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ, ಕುಲಸಚಿವ ಪ್ರೊ| ಎಸ್‌.ಎಸ್‌. ಪಾಟೀಲ್‌, ಶಿವಮೊಗ್ಗ ವಿಧಾನ ಪರಿಷತ್‌ ಸದಸ್ಯ ರುದ್ರೇಗೌಡ್ರು, ಅಂತಾರರಾಷ್ಟ್ರೀಯ ಖ್ಯಾತಿಯ ಜಾದೂಗಾರ ಮಂಗಳೂರಿನ ಕುದ್ರೋಳಿ ಗಣೇಶ್‌ ಮತ್ತಿತರರು ಭಾಗವಹಿಸುವರು. ಫೆ.20 ರಂದು ಹೊಸದುರ್ಗ ಮಧುರೆ ಭಗೀರಥ ಮಹಾಸಂಸ್ಥಾನದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ತೀರ್ಥಕಟೂ°ರು ನೇರ್ಲಗಿ ವಿರಕ್ತಮಠದ ಶ್ರೀ ಚನ್ನಬಸವದೇಶಿಕೇಂದ್ರ ಸ್ವಾಮೀಜಿ, ಚಿತ್ರದುರ್ಗ ಉದಯಗಿರಿ ಸದ್ಗುರು ಸೇವಾಶ್ರಮದ ಶ್ರೀಕಾಂತ ಗುರೂಜಿ ಸಾನ್ನಿಧ್ಯ ವಹಿಸುವರು. ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌, ಕಾಂಗ್ರೆಸ್‌ ಮುಖಂಡ ಹನುಮಲಿ ಷಣ್ಮುಖಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಮತ್ತಿತರರು ಭಾಗವಹಿಸುವರು.

ಫೆ. 21 ರಂದು ಮಧ್ಯಾಹ್ನ 3ಕ್ಕೆ ನಗರದ ರಾಜಬೀದಿಗಳಲ್ಲಿ ಶ್ರೀಮಠದ ಪೀಠಾಧ್ಯಕ್ಷ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಅವರ ಪಲ್ಲಕ್ಕಿ ಉತ್ಸವ ಹಾಗೂ ಜಾನಪದ ಉತ್ಸವ ನಡೆಯಲಿದ್ದು, ಜೆಡಿಎಸ್‌ ಮುಖಂಡ ಕೆ.ಸಿ. ವೀರೇಂದ್ರ ಉದ್ಘಾಟಿಸುವರು. ಫೆ. 21ರಂದು ಸಂಜೆ 7 ಗಂಟೆಗೆ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಕೊರಟಗೆರೆ ಕುಂಚಿಟಿಗರ ಮಹಾಸಂಸ್ಥಾನದ ಶ್ರೀ ಹನುಮಂತನಾಥ ಸ್ವಾಮೀಜಿ, ಕೂಸನೂರು ತಿಪ್ಪಯ್ಯಸ್ವಾಮಿ ಮಠದ ಶ್ರೀ ಜ್ಯೋತಿರ್ಲಿಂಗಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಪಂಚಾಯತ್‌ರಾಜ್‌ ಮತ್ತು
ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಂ. ಚಂದ್ರಪ್ಪ, ವಿಧಾನ ಪರಿಷತ್‌ ಸದಸ್ಯೆ ಜಯಮ್ಮ
ಬಾಲರಾಜ್‌, ಬಿಜೆಪಿ ಮುಖಂಡ ಮಾನಪ್ಪ ವಜ್ಜಲ್‌, ಕಾಂಗ್ರೆಸ್‌ ಮುಖಂಡ ಭೀಮಸಮುದ್ರದ ಜಿ.ಎಸ್‌. ಮಂಜುನಾಥ್‌ ಮತ್ತಿತರರು ಭಾಗವಹಿಸುವರು. ಫೆ. 22 ರಂದು ಸಂಜೆ 5ಕ್ಕೆ ಕೌದಿ ಪೂಜೆಯೊಂದಿಗೆ ಶಿವರಾತ್ರಿ ಮಹೋತ್ಸವ ಸಂಪನ್ನಗೊಳ್ಳಲಿದೆ ಎಂದು ಶ್ರೀಗಳು ತಿಳಿಸಿದರು. ಮುಖಂಡರಾದ ವಿ.ಎಲ್‌.ಪ್ರಶಾಂತ್‌, ವಿ.ಎಲ್‌.ಪ್ರವೀಣ್‌ ಸುದ್ದಿಗೋಷ್ಠಿಯಲ್ಲಿದ್ದರು.

ಗೋ ಸಂಪತ್ತಿಗಿಂತ ಮಿಗಿಲಾದುದು ಬೇರೆ ಯಾವುದೂ ಇಲ್ಲ. ಯಾಂತ್ರಿಕ ಉಪಕರಣದ ಮೇಲೆ ಇಂದಿನ ಕೃಷಿ ನಿಂತಿರುವುದರಿಂದ ಜಾನುವಾರುಗಳನ್ನು ಬಳಸುವವರೇ ಕಡಿಮೆಯಾಗಿದ್ದಾರೆ.
ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಅದಕ್ಕಾಗಿ 2006ರಲ್ಲಿ ಗೋಶಾಲೆ ನಿರ್ಮಿಸಿ ಅನೇಕ ಜಾನುವಾರುಗಳನ್ನು ಸಲಹಲಾಗುತ್ತಿದೆ.
ಶ್ರೀ ಶಿವಲಿಂಗಾನಂದ ಸ್ವಾಮೀಜಿ

ಟಾಪ್ ನ್ಯೂಸ್

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಕೆ.ಜಿ.ಹಳ್ಳಿ: ನಿರ್ಮಾಣದ ಹಂತದ ಕಟ್ಟಡದ ಸಂಪ್ ಗೆ ಬಿದ್ದು 14 ವರ್ಷದ ಬಾಲಕ ಸಾವು

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

ಅಸಹಾಯಕತೆಯಿಂದ ಅಸಂಬದ್ಧ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ: ಸಚಿವ ಸುನೀಲ್ ಕುಮಾರ್

virat kohli k l rahul ishan kishan

ಇಶಾನ್, ರಾಹುಲ್, ವಿರಾಟ್: ಟಿ20 ವಿಶ್ವಕಪ್ ನಲ್ಲಿ ಭಾರತದ ಆರಂಭಿಕ ಆಟಗಾರ ಯಾರು?

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸಟೇಬಲ್ ಅನ್ನೇ ಅಪಹರಿಸಿದ!

ಕಾರಿನ ದಾಖಲೆ ತೋರಿಸಲು ಕೇಳಿದ ಟ್ರಾಫಿಕ್ ಕಾನ್ಸ್ ಟೇಬಲ್ ಅನ್ನೇ ಅಪಹರಿಸಿದ!

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ಹಿಂದೂಗಳ ವಿರುದ್ಧ ದ್ವೇಷ: ದೇವಾಲಯ ಧ್ವಂಸ, ಬಾಂಗ್ಲಾ ಪೊಲೀಸರಿಂದ 450 ಮಂದಿ ಬಂಧನ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chitrdurga news

ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಜನ ಜಾಗೃತಿ

ಚಿತ್ರದುರ್ಗದಲ್ಲಿ ಕೈಗಾರಿಕಾ ಟೌನ್‌ಶಿಪ್‌ ನಿರ್ಮಾಣ

ಚಿತ್ರದುರ್ಗದಲ್ಲಿ ಕೈಗಾರಿಕಾ ಟೌನ್‌ಶಿಪ್‌ ನಿರ್ಮಾಣ

ಆಟೋ ಚಾಲಕನ ಕೊಂದಿದ್ದವಗೆ ಜೀವಾವಧಿ ಶಿಕ್ಷೆ

ಆಟೋ ಚಾಲಕನ ಕೊಂದಿದ್ದವಗೆ ಜೀವಾವಧಿ ಶಿಕ್ಷೆ

ನಾಯಕ ಸಮಾಜಕ್ಕೆ ತಿಪ್ಪೇಸ್ವಾಮಿ ಕೊಡುಗೆ ಅಪಾರ

ನಾಯಕ ಸಮಾಜಕ್ಕೆ ತಿಪ್ಪೇಸ್ವಾಮಿ ಕೊಡುಗೆ ಅಪಾರ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

MUST WATCH

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

udayavani youtube

ದಾಂಡೇಲಿ ನಗರ ಸಭೆಯಲ್ಲಿ ಮಾಹಿತಿ ಹಕ್ಕು ಅಧಿನಿಯಮ ಉಲ್ಲಂಘನೆ ಅಕ್ರಂ ಖಾನ್ ಆರೋಪ

ಹೊಸ ಸೇರ್ಪಡೆ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

chikkamagalore news

ಕುಗ್ರಾಮ ಕಾರ್ಲೆಗೆ ಬೇಕಿದೆ ಮೂಲ ಸೌಲಭ್ಯ

ballari news

ಕರಿಬೇವು ಬೆಳೆದು ಕೈತುಂಬ ಆದಾಯ

davanagere news

ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ

26

ಪ್ರಶಸ್ತಿಯಿಂದ ಸಾಧಕನ ಜವಾಬ್ದಾರಿ ವೃದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.