ಭಾರತದ ಕಣ ಕಣದಲ್ಲಿದೆ ದೈವತ್ವಅಂಶ

ಶ್ರೀಮಂತ ಪರಂಪರೆ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಉಜ್ಜಯಿನಿ ಶ್ರೀ

Team Udayavani, Jan 31, 2020, 1:07 PM IST

31-Janauary-12

ಚಿತ್ರದುರ್ಗ: ಮಠ, ಮಂದಿರ, ಗುರುಗಳಿಲ್ಲದ ಭಾರತವನ್ನು ಊಹಿಸಲಾಗದು. ಈ ದೇಶದ ಮಣ್ಣಿನ ಕಣ ಕಣದಲ್ಲೂ ದೈವತ್ವವಿದೆ ಎಂದು ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಜೆ.ಎನ್‌. ಕೋಟೆ ಗ್ರಾಮದಲ್ಲಿ ನಡೆದ ಶ್ರೀ ಕರಿಯಮ್ಮದೇವಿ ದೇವಾಲಯ ಕಳಶ ಸ್ಥಾಪನೆ ಹಾಗೂ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಆಚಾರ, ವಿಚಾರ, ಕಲೆ, ಸಂಸ್ಕೃತಿ, ಮಠ, ಮಂದಿರ ಹಾಗೂ ಗುರುಗಳು ಭಾರತೀಯರ ಜೀವನದಲ್ಲಿ ಹಾಸುಹೊಕ್ಕಾಗಿವೆ. ದೇವಸ್ಥಾನವಿಲ್ಲದ ಗ್ರಾಮಗಳೇ ಇಲ್ಲ ಎಂದರು.

ಹಿಂದೆ ನ್ಯಾಯಾಲಯಗಳಿಲ್ಲದ ಸಂದರ್ಭದಲ್ಲಿ ದೇವಸ್ಥಾನಗಳೇ ಕೋರ್ಟ್‌ನಂತೆ ಕೆಲಸ ಮಾಡಿವೆ. ಮಠ, ಮಂದಿರಗಳಿಂದಾಗಿ ಅಪರಾಧ ಮನೋಭಾವ ಕಡಿಮೆಯಾಗಿತ್ತು. ಇಂದಿಗೂ ಭಾರತೀಯರು ಉಪವಾಸ, ಉರುಳು ಸೇವೆ, ವ್ರತಾಚರಣೆ, ಜಾತ್ರೆ ಮಹೋತ್ಸವಗಳನ್ನು ಕೈಬಿಟ್ಟಿಲ್ಲ. ಮಾತಿಗೆ ತಪ್ಪಿ ಎಂದು ನಡೆಯುತ್ತಿರಲಿಲ್ಲ. ಸತ್ಯವೇ ತಂದೆ, ತಾಯಿ, ಸತ್ಯವೇ ದೇವರು ಎನ್ನುವ ಮನಃಸ್ಥಿತಿ ಭಾರತೀಯರಲ್ಲಿತ್ತು ಎಂದು ತಿಳಿಸಿದರು.

ದೇಶದ ಅಧ್ಯಾತ್ಮ ಪರಂಪರೆ ಮೇಲೆ ಅನೇಕ ವಿದೇಶಿಯರ ದಾಳಿ ನಡೆದರೂ ಇಲ್ಲಿನ ಸನಾತನ ಪರಂಪರೆಗೆ ಕಿಂಚಿತ್ತೂ ಧಕ್ಕೆಯಾಗಿಲ್ಲ. ಯಾರು ಬಂದು ಯಾವ ಸಂಸ್ಕೃತಿ ಹರಡಿದರೂ ಇಲ್ಲಿನ ಜನತೆ ಭೂಮಿ, ನೀರು, ಆಹಾರ, ಪರಿಸರವನ್ನು ಇಂದಿಗೂ ದೇವರೆಂದು ಪೂಜಿಸುತ್ತಿದ್ದಾರೆ. ಅತ್ಯಂತ ಶ್ರೀಮಂತವಾಗಿರುವ ಈ ಪರಂಪರೆಯನ್ನು ಮುಂದುವರೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಸಾಹಿತಿ ನಿರಂಜನ ದೇವರಮನೆ ವಿಶೇಷ ಉಪನ್ಯಾಸ ನೀಡಿ, ಆಧುನಿಕತೆಯ ನಾಗಾಲೋಟದಲ್ಲಿ ನಮ್ಮ ಸಂಸ್ಕೃತಿ ಜರ್ಜರಿತವಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮದ ಆಚಾರ, ವಿಚಾರಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಇಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು. ದುಶ್ಚಟ, ದುರ್ಗುಣ, ಕೆಟ್ಟ ಭಾವನೆಗಳನ್ನು ತೊರೆದು ಸಾತ್ವಿಕ ಮನೋಭಾವ ಬೆಳೆಸಲು, ಸಾಮರಸ್ಯ, ಸದ್ಭಾವನೆಯನ್ನು ಬೆಳೆಸುವುದು ನಮ್ಮ ಸಂಸ್ಕೃತಿಯ ಆಚರಣೆಗಳ ಉದ್ದೇಶ ಎಂದು ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಮಾತನಾಡಿ, ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಈ ನಿಟ್ಟಿನಲ್ಲಿ ಉಜ್ಜಯಿನಿ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧಾರ್ಮಿಕ ಸಭೆ ಒಳ್ಳೆಯ ಕಾರ್ಯಕ್ರಮ. ನಮ್ಮ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ತಾಪಂ ಸದಸ್ಯೆ ಸಿದ್ದಮ್ಮ, ಗ್ರಾಪಂ ಅಧ್ಯಕ್ಷೆ ಪಾಪಮ್ಮ, ಮಾಜಿ ಅಧ್ಯಕ್ಷ ಗುರುಸಿದ್ದಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.