ಓಬವ್ವನ ನಾಡಿನಲ್ಲಿ ವನಿತೆಯರ ಪಾರಮ್ಯ!


Team Udayavani, Feb 2, 2020, 3:21 PM IST

2-Febraury-19

ಚಿತ್ರದುರ್ಗ: ಗಂಡು ಮೆಟ್ಟಿದ ನಾಡು ಚಿತ್ರದುರ್ಗ ಜಿಲ್ಲೆಯ ಇಡೀ ಆಡಳಿತ ವ್ಯವಸ್ಥೆ ಈಗ ಮಹಿಳಾ ಅಧಿಕಾರಿಗಳ ಕೈ ತುದಿಯಲ್ಲಿದೆ. ಈವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಮಾತ್ರ ಪ್ರಮುಖ ಮಹಿಳಾ ಅಧಿಕಾರಿಗಳಿದ್ದರು. ಆದರೆ, ಈಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಮಹಿಳಾ ಅಧಿಕಾರಿಯೇ ಅಧಿಕಾರ ಸ್ವೀಕರಿಸಿದ್ದು, ಇಡೀ ಜಿಲ್ಲಾಡಳಿತ ವನಿತೆಯರ ಕೈ ಸೇರಿದಂತಾಗಿದೆ.

ಜ.31 ರಾತ್ರಿ ರಾಜ್ಯ ಸರ್ಕಾರ ಹೊರಡಿಸಿದ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶದಲ್ಲಿ ಚಿತ್ರದುರ್ಗದ ಎಸ್ಪಿ ಡಾ|ಕೆ. ಅರುಣ್‌ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ವಿಭಾಗಕ್ಕೆ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಜಿ. ರಾಧಿಕಾ ಬೆಂಗಳೂರಿನಿಂದ ಬಂದು ಅಧಿಕಾರ ವಹಿಸಿಕೊಂಡಿದ್ದಾರೆ. ರಾಧಿಕಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂಬ ಆದೇಶ ಹೊರ ಬೀಳುತ್ತಲೇ ಸೋಶಿಯಲ್‌ ಮೀಡಿಯಾಗಳಲ್ಲಿ ಓಬವ್ವನ ನಾಡಿನಲ್ಲಿ ವನಿತೆಯರ ಪಾರಮ್ಯ ಎಂಬರ್ಥದಲ್ಲಿ ನೂರಾರು ಕಮೆಂಟ್‌, ಮೀಮ್ಸ್‌ ಓಡಾಡುತ್ತಿವೆ. ಜಿಲ್ಲೆಯ ಕೆಲ ಮಹಿಳಾ ಮುಖಂಡರಂತು ಯಾವೆಲ್ಲಾ ಇಲಾಖೆಗಳಲ್ಲಿ ಮಹಿಳಾ ಅಧಿಕಾರಿಗಳಿದ್ದಾರೆ ಎಂಬ ಪಟ್ಟಿ ಮಾಡಿ ವಾಟ್ಸ್‌ಆ್ಯಪ್‌ ಸ್ಟೇಟಸ್‌ಗೆ ಹಾಕಿ ಸಂಭ್ರಮಿಸುತ್ತಿದ್ದಾರೆ.

ಹೆಣ್ಣು ಅಡುಗೆ ಮನೆಗೆ ಸೀಮಿತ ಎಂಬ ಮಾತುಗಳಿದ್ದವು. ಆದರೆ, ಈಗ ಇಡೀ ಚಿತ್ರದುರ್ಗ ಜಿಲ್ಲಾಡಳಿತದ ಆಡಳಿತ ವ್ಯವಸ್ಥೆ ಇರುವುದು ಮಹಿಳೆಯರ ಕೈಯಲ್ಲಿ ಅನ್ನೋದು ವಿಶೇಷವಾಗಿದೆ.

ಮಹಿಳಾ ಅಧಿಕಾರಿಗಳ ಪಟ್ಟಿ: ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಜಿಪಂ ಸಿಇಒ ಸಿ. ಸತ್ಯಭಾಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಭಾರತಮ್ಮ, ಸಂಚಾರಿ ಠಾಣೆ ವೃತ್ತ ನಿರೀಕ್ಷಕಿ ರೇವತಿ, ಜಿಲ್ಲಾ ವಿಕಲಚೇತನ ಕಲ್ಯಾಣಾಧಿ ಕಾರಿ ವೈಶಾಲಿ, ನಗರಸಭೆ ವ್ಯವಸ್ಥಾಪಕಿ ಮಂಜುಳಾ, ಜಿಲ್ಲಾ ಕಾರಾಗೃಹ ಅಧೀಕ್ಷಕಿ ಅಪೇಕ್ಷಾ ಸೇರಿದಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ, ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ, ಅಬಕಾರಿ ನಿರೀಕ್ಷಕಿ ಹೀಗೆ ಸಾಲು ಸಾಲು ಮಹಿಳಾ ಅಧಿಕಾರಿಗಳ ಪಟ್ಟಿಯೇ ಸೋಶಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಜನಪ್ರತಿನಿಧಿಗಳೂ ಇದ್ದಾರೆ: ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಆಯ್ಕೆಯಾದ ಮಹಿಳಾ ಶಾಸಕಿ ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್‌, ವಿಧಾನ ಪರಿಷತ್‌ ಸದಸ್ಯೆ ಜಯಮ್ಮ ಬಾಲರಾಜ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಕೂಡಾ ಪ್ರಮುಖ ಸ್ಥಾನಗಳಲ್ಲಿದ್ದಾರೆ.

ಮೂವರು ಮಹಿಳಾ ಅಧಿಕಾರಿಗಳಿಂದ ಜಿಲ್ಲೆ ಸುಭದ್ರವಾಗಿರುತ್ತೆ. ಇದೊಂದು ಬೆಸ್ಟ್‌ ಆಫ್‌ ದಿ ಬೆಸ್ಟ್‌ ಟೈಮ್‌ ಎನ್ನುವಂತೆ ಕೆಲಸ ಮಾಡುತ್ತೇವೆ.
. ಜಿ. ರಾಧಿಕಾ, ಎಸ್ಪಿ, ಚಿತ್ರದುರ್ಗ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.