ಕೆಲಸಕ್ಕೆ ಹಿಂಜರಿಯುವ ಕಾಲ ಈಗಿಲ್ಲ

ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಪುರುಷನಷ್ಟೇ ಸಮಾನಳು ಎಂಬ ಸತ್ಯ ಅರಿಯಿರಿ: ವಿಶಾಲಾಕ್ಷಿ

Team Udayavani, Mar 9, 2020, 4:48 PM IST

9-March-21

ಚಿತ್ರದುರ್ಗ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣು ಎಲ್ಲಾ ಕ್ಷೇತ್ರದಲ್ಲೂ ಗಂಡಿನಷ್ಟೇ ಸರಿಸಮನಾಗಿ ಕೆಲಸ ಮಾಡುತ್ತಿದ್ದಾಳೆ. ಚಿತ್ರದುರ್ಗ ಜಿಲ್ಲೆಯ ಬಹುತೇಕ ಇಲಾಖೆಗಳಲ್ಲಿ ಎಲ್ಲಾ ಅಧಿಕಾರಿಗಳು ಮಹಿಳೆಯರೇ ಇರುವುದು ಖುಷಿಯ ವಿಚಾರ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಹೇಳಿದರು.

ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಗರದ ತರಾಸು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ. ಯಾವುದೇ ಕ್ಷೇತ್ರಗಳಲ್ಲಿ ಹೆಣ್ಣು ಕೆಲಸ ಮಾಡುವುದಕ್ಕೆ ಹಿಂಜರಿಯುವ ಕಾಲ ಈಗಿಲ್ಲ. ಪುರುಷರು ನಿರ್ವಹಿಸುವ ಎಲ್ಲ ಕೆಲಸಗಳನ್ನು ಸಮರ್ಪಕವಾಗಿ ಮಾಡುತ್ತಿದ್ದಾರೆ ಎಂದರು.

ಸದ್ಯ ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸೇರಿದಂತೆ ಬಹುತೇಕ ಇಲಾಖೆಗಳಲ್ಲಿ ಮಹಿಳೆಯರೇ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ನಿಜಕ್ಕೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಈ ವಿದ್ಯಮಾನ ಜಿಲ್ಲೆ ಹೆಮ್ಮೆ ಪಡುವಂತೆ ಮಾಡಿದೆ ಎಂದು ಬಣ್ಣಿಸಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಮಹಿಳೆ ಮನೆ ಕೆಲಸಕ್ಕೆ ಮಾತ್ರ ಸೀಮಿತವಲ್ಲ. ಮಹಿಳೆ ಇಡೀ ಜಗತ್ತಿಗೆ ಸರಿಸಾಟಿಯಾಗಿ ಇದ್ದಾಳೆ. ಅಮೆರಿಕಕ್ಕೆ ಸ್ವಾತಂತ್ರ್ಯ ಬಂದು 300 ವರ್ಷವಾದರೂ ಈವರೆಗೆ ಮಹಿಳೆ ಅಧ್ಯಕ್ಷೆಯಾಗಿರುವ ಇತಿಹಾಸ ಇಲ್ಲ. ಆದರೆ ನಮ್ಮ ಭಾರತದಲ್ಲಿ ಪ್ರತಿಭಾ ಪಾಟೀಲ್‌ ರಾಷ್ಟ್ರಪತಿ ಆಗಿದ್ದಾರೆ. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾರೆ ಎಂದರು.

ಜಿಲ್ಲಾಧಿಕಾರಿ ಆರ್‌. ವಿನೊತ್‌ ಪ್ರಿಯಾ ಮಾತನಾಡಿ, ಸಮಾನತೆ ಎನ್ನುವುದು ಮತ್ತೂಬ್ಬರಿಂದ ಪಡೆಯುವುದಲ್ಲ, ನಾವೇ ಪಡೆದುಕೊಳ್ಳುವುದು. ಸಮಾನತೆ ಪಡೆಯಬೇಕು ಎಂದರೆ ಹೆಣ್ಣುಮಕ್ಕಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು. ತಾಯಂದಿರು ಮನೆಯಲ್ಲಿ ಹೆಣ್ಣು ಗಂಡು ಎಂಬ ತಾರತಮ್ಯ ತೋರಬಾರದು. ಮನೆಯಲ್ಲಿ ತಾಯಿಂದಿರು ಮಕ್ಕಳಿಗೆ ಹೆಣ್ಣಿಗೆ ಗೌರವ ಕೊಡುವುದನ್ನು ಕಲಿಸಬೇಕು. ಇದರಿಂದ ಅತ್ಯಾಚಾರ ನಿಲ್ಲಿಸಬಹುದು. ಮನೆಯಲ್ಲಿ ತಾಯಂದಿರು ಹೆಣ್ಣು ಮಕ್ಕಳನ್ನು ಸ್ವಾತಂತ್ರವಾಗಿ ಬೆಳೆಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಹೆಣ್ಣು-ಗಂಡು ಎಂಬ ಭೇದಭಾವ ಹುಟ್ಟುವುದೇ ಮಹಿಳೆ ಗರ್ಭಾವಸ್ಥೆಯಲ್ಲಿ. ಹೆಣ್ಣು ಹುಟ್ಟಿದರೆ ಹೆಚ್ಚು ವೆಚ್ಚವಾಗುತ್ತದೆ ಎಂಬ ಮನೋಭಾವ ಇನ್ನೂ ಇದೆ. ಹೆಣ್ಣನ್ನು ಸ್ವತಂತ್ರವಾಗಿ ಬೆಳೆಸಬೇಕು. ಸಮಾಜಮುಖೀಯಾಗಿ ಬೆಳೆಸಲು ತಂದೆ-ತಾಯಿಯರು ಕೈಜೋಡಿಸಬೇಕು ಎಂದರು.

ರುಡ್‌ಸೆಟ್‌ ನಿರ್ದೇಶಕಿ ಜಿ. ಮಂಜುಳಾ, ನ್ಯಾಯವಾದಿ ಡಿ.ಕೆ. ಶೀಲಾ ಉಪನ್ಯಾಸ ನೀಡಿದರು. ತಾಪಂ ಅಧ್ಯಕ್ಷ ಲಿಂಗರಾಜು, ಜಿಪಂ ಸದಸ್ಯ
ಕೃಷ್ಣಮೂರ್ತಿ, ತಾಪಂ ಉಪಾಧ್ಯಕ್ಷೆ ಶಾಂತಮ್ಮ ರೇವಣಸಿದ್ದಪ್ಪ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷ ಕೊಲ್ಲಿ ಲಕ್ಷ್ಮೀ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.