ವ್ಯಸನಮುಕ್ತರಾಗಿ ಸದೃಢ ಸಮಾಜ ನಿರ್ಮಿಸಿ


Team Udayavani, Feb 19, 2020, 5:28 PM IST

19-February-29

ಚಿತ್ರದುರ್ಗ: ಇಂದು ಬಹುತೇಕ ಯುವಕರು ಮಾದಕ ವ್ಯಸನಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಹೊರಬಂದು ವ್ಯಸನಮುಕ್ತರಾಗಿ ಭವಿಷ್ಯ ಕಟ್ಟಿಕೊಳ್ಳುವ ಮೂಲಕ ಸದೃಢ ಸಮಾಜ ನಿರ್ಮಿಸಬೇಕು ಎಂದು ಡಯಟ್‌ ಪ್ರಾಚಾರ್ಯ ಕೆ. ಕೋದಂಡರಾಮ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರಿಗೆ ಆಯೋಜಿಸಿದ್ದ ಮಾದಕ ವಸ್ತುವಿನ ನಿಯಂತ್ರಣದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸದೃಢ ಯುವ ಸಮೂಹ ದೇಶದ ಸಂಪನ್ಮೂಲ. ಸುಶಿಕ್ಷಿತ, ವ್ಯಸನಮುಕ್ತ, ದೈಹಿಕ ಸದೃಢತೆ ಹಾಗೂ ಮಾನಸಿಕ ಸದೃಢತೆಯಿಂದ ಉತ್ತಮ ಸಮಾಜವನ್ನು ನಿರ್ಮಿಸಬಹುದು. ಇದರಿಂದ ಕಳ್ಳತನ, ಕೊಲೆ, ದರೋಡೆ ಮತ್ತಿತರ ಸಮಾಜಬಾಹಿರ ಘಟನೆಗಳಿಗೆ ಇತಿಶ್ರೀ ಹಾಡಬಹುದು ಎಂದರು.

ಇಂದು ಹದಿಹರೆಯದವರು ಮಾದಕ ವ್ಯಸನಿಗಳಾಗುತ್ತಿರುವುದು ಬೇಸರ ಸಂಗತಿ. ಹೀಗಾಗಿ ಶಿಕ್ಷಕರಿಗೆ ಈ ಬಗ್ಗೆ ಅರಿವು ಮೂಡಿಸಿದರೆ ಅವರು ಮಕ್ಕಳನ್ನು ಸರಿದಾರಿಗೆ ತರುತ್ತಾರೆ ಎಂಬ ವಿಶ್ವಾಸದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶಿಕ್ಷಕರು ಮಕ್ಕಳಿಗೆ ಜೀವನದ ಪಾಠವನ್ನು ತಿಳಿಸಿಕೊಡಬೇಕು. ಶಿಕ್ಷಕರು ಪಠ್ಯಕ್ರಮದ ಜೊತೆಗೆ ಮಕ್ಕಳಿಗೆ ನೈತಿಕತೆ, ಮಾನವೀಯ ಮೌಲ್ಯಗಳು ಹಾಗೂ ಸಮಾಜದ ಅಭಿವೃದ್ಧಿ ಕಾರ್ಯಗಳನ್ನು ತಿಳಿಸಬೇಕು ಎಂದು ಕರೆ ನೀಡಿದರು.

ತರಬೇತಿ ಕೇಂದ್ರದ ಸಂಯೋಜಕಿ ಶೈಲಶ್ರೀ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಾದ್ಯಂತ 37 ಮಾದಕ ವ್ಯಸನ ಮುಕ್ತ ಕೇಂದ್ರಗಳನ್ನು ಸ್ಥಾಪಿಸಿದ್ದು, ಮಾದಕ ವ್ಯಸನಿಗಳಿಗೆ ತರಬೇತಿ, ಚಿಕಿತ್ಸೆ, ಕೌನ್ಸೆಲಿಂಗ್‌ ಮಾಡಲಾಗುತ್ತಿದೆ. ಶಿಕ್ಷಣ, ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯವರಿಗೆ ಮಾದಕ ವಸ್ತು ನಿಯಂತ್ರಣ ಕುರಿತು ಅರಿವು ಮೂಡಿಸಲಾಗುತ್ತಿದೆ. ಮಾನಸಿಕ, ದೈಹಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಆರೋಗ್ಯದಿಂದ ಉತ್ತಮ ಸಮಾಜವನ್ನು ನಿರ್ಮಿಸಬಹುದು.

ಯುವಕರು ಮೋಜು, ಮಸ್ತಿ ಚಟದಿಂದ ವ್ಯಸನಕ್ಕೆ ಒಳಗಾಗುತ್ತಾರೆ. ಈ ಕುರಿತು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳುವಳಿಕೆ ಹೇಳಬೇಕು ಎಂದರು. ಉಪನ್ಯಾಸಕ ಆರ್‌. ನಾಗರಾಜ್‌ ಮಾತನಾಡಿ, ಮಾದಕ ವ್ಯಸನಿಗಳು ದೇಶಕ್ಕೆ ಮಾರಕ ಹಾಗೂ ಕುಟುಂಬಕ್ಕೆ ಹೊರೆ. ಪಠ್ಯಕ್ರಮದ ಜೊತೆಗೆ ಸ್ವಸ್ಥ ಸಮಾಜ ನಿರ್ಮಿಸಲು ಶಿಕ್ಷಕರು ಸಹಕರಿಸಬೇಕು. ಪ್ರೀತಿಯಿಂದಲೇ ಮಕ್ಕಳನ್ನು ವ್ಯಸನದಿಂದ ಮುಕ್ತಗೊಳಿಸಬೇಕು. ಜೊತೆಗೆ ಅವರಲ್ಲಿ ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಸತ್ಯನಾರಾಯಣ, ದೈಹಿಕ ಶಿಕ್ಷಣ ಪರಿವೀಕ್ಷಕ ಶೇಖರಪ್ಪ, ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾರಾಣಿ ಸೇರಿದಂತೆ ಎಲ್ಲ ತಾಲೂಕುಗಳ ಶಿಕ್ಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.