5 ಕೋಟಿ ವೆಚ್ಚದಲ್ಲಿ ಬೋಕಿಕೆರೆ-ಭಾಗಶೆಟ್ಟಿ ಹಳ್ಳಿ ರಸ್ತೆ ನಿರ್ಮಾಣ

Team Udayavani, Oct 7, 2019, 2:34 PM IST

ಹೊಸದುರ್ಗ: ತಾಲೂಕಿನ ಬೋಕಿಕೆರೆ- ಭಾಗಶೆಟ್ಟಿಹಳ್ಳಿ ರಸ್ತೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಹೇಳಿದರು.

ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ತರೀಕೆರೆ ರಸ್ತೆಯಿಂದ ಭಾಗಶೆಟ್ಟಿಹಳ್ಳಿವರೆಗೆ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 5 ಕೋಟಿ ರೂ. ವೆಚ್ಚದ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ತಾಲೂಕಿನ ಬೋಕಿಕೆರೆ, ಎಂ.ಜಿ. ದಿಬ್ಬ, ಮಾಚೇನಹಳ್ಳಿ, ಅಡವಿಸಂಗೇನಹಳ್ಳಿ, ಕಂಗುವಳ್ಳಿ, ಭಾಗಶೆಟ್ಟಿಹಳ್ಳಿ ಗ್ರಾಮದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚರಿಸಲು ಬಹಳ ಕಷ್ಟ. 5 ಕೋಟಿ ರೂ. ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಈ ಭಾಗದ ಬಹುದಿನದ ಬೇಡಿಕೆ ಈಡೇರಿಸಿದಂತಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆ ಅಡಿ ಅಜ್ಜಂಪುರದ ಬೆಟ್ಟದತಾವರೆಕೆರೆಯಿಂದ ವೇದಾವತಿ ನದಿ ಮೂಲಕ ವಿವಿ ಸಾಗರಕ್ಕೆ ನೀರು ಹರಿಸಲಾಗುವುದು. ಬಹುದಿನಗಳ ಬೇಡಿಕೆಯಾದ ವಿವಿಸಾಗರಕ್ಕೆ ನೀರು ಹರಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ತಾಲೂಕಿನ 44,608 ಹೆಕ್ಟೇರ್‌ ಜಮೀನಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲಾಗುವುದು.

ತಾಲೂಕಿನ 27 ಕೆರೆಗಳಿಗೆ ನೀರು ಹರಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಗೆ ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು. ಜಿಪಂ ಸದಸ್ಯ ಅಜ್ಜಪ್ಪ ಮಾತನಾಡಿ, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ಹರಿದು ಬರಲಿದೆ. ಎಂದರು. ಬೋಕಿಕೆರೆ ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ಮರಿದಿಮ್ಮಪ್ಪ, ಬಿಜೆಪಿ ಮುಖಂಡರಾದ ಶೇಖರ್‌ ಮತ್ತಿತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ