ಕೋವಿಡ್‌ ನಿರ್ಲಕ್ಷ್ಯದಿಂದ ಜೀವಕ್ಕೆ  ಅಪಾಯ

Team Udayavani, Jul 3, 2021, 1:24 PM IST

Untitled-1

ಚಿತ್ರದುರ್ಗ: ಪದವಿ ಕಾಲೇಜು ಆರಂಭಕ್ಕೆ ಮುನ್ನಾ ವಿದ್ಯಾರ್ಥಿಗಳಿಗೆ ಕೋವಿಡ್‌ ಪರೀಕ್ಷೆ ಹಾಗೂ ಕೊರೊನಾ ವಿರುದ್ಧ ಲಸಿಕೆ ಹಾಕುವ ಅಭಿಯಾನಕ್ಕೆ ನಗರದ ಎಸ್‌ಜೆಎಂ ಚಂದ್ರವಳ್ಳಿ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು.ಕಾಲೇಜಿನ ಜಯದೇವ ಸಭಾಂಗಣದಲ್ಲಿ ನಡೆದಕೋವಿಡ್‌ ಲಸಿಕೆ ಅಭಿಯಾನ ಕಾರ್ಯಕ್ರಮಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ.ರಂಗನಾಥ್‌ ಮಾತನಾಡಿ,ವಿದ್ಯಾರ್ಥಿಗಳು ಹಾಗೂ ಯುವಜನರುಕೋವಿಡ್‌ ಬಗ್ಗೆ ನಿರ್ಲಕ್ಷ್ಯ ವಹಿಸಿ, ಜೀವಕ್ಕೆಅಪಾಯ ತಂದುಕೊಳ್ಳುತ್ತಿರುವುದು ದುರಂತದ ಸಂಗತಿ ಎಂದರು.

ಕೋವಿಡ್‌ ಮೂರನೇ ಅಲೆ ಬರುವ ಸಂಭವವಿದ್ದು, ಮುನ್ನೆಚ್ಚರಿಕೆ ಅಗತ್ಯ. ಆದರೆ,ಅನಗತ್ಯವಾಗಿ ಭಯಪಟ್ಟುಕೊಳ್ಳದೆ ಕೊರೊನಾಲಸಿಕೆ ಹಾಕಿಸಿಕೊಂಡು ಸುರಕ್ಷಿತವಾಗಿರಬಹುದು.ಮೂರನೇ ಅಲೆ ಬರೀ ಮಕ್ಕಳಿಗೆ ಮಾತ್ರಬರುವುದಿಲ್ಲ ದೊಡ್ಡವರಿಗೂ ಬರುತ್ತದೆ ಎಂದು ಎಚ್ಚರಿಸಿದರು.

ಕೋವಿಡ್‌ ಕಡಿಮೆಯಾಗಿದೆ ಎಂಬಮನೋಭಾವ ಬಿಡಿ ಮುಂದಿನಎರಡು ವರ್ಷಗಳವರೆಗೆ ಕೋವಿಡ್‌ನಿರಂತರವಾಗಿರುತ್ತದೆ. ಕೊರೊನಾದ ಜತೆಯಲ್ಲೇ ನಾವು ಜೀವಿಸಬೇಕು. ನಿರ್ಲಕ್ಷ್ಯವೇ ಸಾವಿಗೆ ಕಾರಣವಾಗುತ್ತದೆ. ಯಾವ ಕಾರಣಕ್ಕೂ ಕೋವಿಡ್‌ ಕಡಿಮೆಯಾಗಿದೆ ಎಂದು ನಿರ್ಲಕ್ಷಿಸಬೇಡಿ ಎಂದು ಸಲಹೆ ನೀಡಿದರು.

ಲಸಿಕಾ ಅಭಿಯಾನದ ಅಧ್ಯಕ್ಷತೆ ವಹಿಸಿದ್ದಎಸ್‌ಜೆಎಂ ಕಾಲೇಜು ಪ್ರಾಚಾರ್ಯ ಡಾ|ಕೆ.ಸಿ. ರಮೇಶ್‌ ಮಾತನಾಡಿ, ಕೋವಿಡ್‌ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಪಾಠ ಕಲಿಸಿದೆ. ವಿದ್ಯಾರ್ಥಿಗಳು ಸ್ವಚ್ಛತೆ ಹಾಗೂ ಸುಂದರ ಪರಿಸರಕ್ಕೆ ಆದ್ಯತೆ ನೀಡಿ ಸದೃಢತೆ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕೋವಿಶೀಲ್ಡ್‌ ಹಾಗೂ ಕೋವ್ಯಾಕ್ಸಿನ್‌ಲಸಿಕೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಪ್ರತಿವಿದ್ಯಾರ್ಥಿಯೂ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆಹಾಕಿಸಿಕೊಳ್ಳದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ.ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಸಾಮಾಜಿಕಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದುಹೇಳಿದರು. ಕಾಲೇಜಿನ ಉಪ ಪ್ರಾಚಾರ್ಯಎಚ್‌.ಕೆ.ಶಿವಪ್ಪ, ನ್ಯಾಕ್‌ ಸಂಯೋಜಕ ಡಾ|ಆರ್‌.ವಿ. ಹೆಗಡಾಳ್‌ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ| ರೇವಣ್ಣ ಕಾರ್ಯಕ್ರಮ ನಿರೂಪಿಸಿದರು.

ಆನಂತರ ನಡೆದಲಸಿಕಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳುಹಾಗೂ ಸಾರ್ವಜನಿಕರು ಸೇರಿದಂತೆ 358 ಮಂದಿ ಲಸಿಕೆ ಪಡೆದರು. ಕೆಲ ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಳ್ಳದೆ ತಿರಸ್ಕರಿಸಿದ ಪ್ರಸಂಗವೂ ನಡೆಯಿತು. ಈ ವೇಳೆ ಪ್ರಾಚಾರ್ಯ ಕೆ.ಸಿ. ರಮೇಶ್‌ ಅವರು ಲಸಿಕೆ ಕುರಿತು ಮಾಹಿತಿ ನೀಡಿ ಮನವೊಲಿಸಿದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.