­ಅಧಿಕಾರಿಗಳು ಜನರಲ್ಲಿ ವಿಪತ್ತು -ರಕ್ಷಣೆ ಅರಿವು ಮೂಡಿಸಲಿ: ಡಿಸಿ ಕವಿತಾ

ವಿಫಲ ಕೊಳವೆಬಾವಿ ಬಳಸಿದ್ರೆ ಕ್ರಮ

Team Udayavani, Feb 24, 2021, 7:57 PM IST

DC Kavita

ಚಿತ್ರದುರ್ಗ: ವಿಪತ್ತು ಸಂಭವಿಸಿದಾಗ ಅದರಿಂದ ಹೇಗೆ ರಕ್ಷಣೆ ಪಡೆಯಬಹುದು ಎನ್ನುವ ಬಗ್ಗೆ ಆಯಾ ಇಲಾಖೆಗಳು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾ ಧಿಕಾರದ ಸಭೆಯಲ್ಲಿ ಮಾತನಾಡಿದರು. ವಿಪತ್ತು ಸಂಭವಿಸದಂತೆ ಹಾಗೂ ವಿಪತ್ತು ಸಂಭವಿಸಿದಾಗ ಅದನ್ನು ಯಾವ ರೀತಿಯಾಗಿ ತಡೆಗಟ್ಟಬಹುದು ಮತ್ತು ಇದರ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಇಲಾಖೆಗಳು ಮೂಲ ಸೌಕರ್ಯಗಳ ವೃದ್ಧಿಗಾಗಿ ಕ್ರಿಯಾ ಯೋಜನೆ ರೂಪಿಸಿ ಎಂದರು.

ಜಿಲ್ಲೆಯಲ್ಲಿ ವಿಫಲವಾದ ಕೊಳವೆಬಾವಿಗಳನ್ನು ಯಾವುದೇ ಕಾರಣಕ್ಕೂ ತೆರೆಯಕೂಡದು. ಕೂಡಲೇ ವಿಫಲವಾದ ಕೊಳವೆಬಾವಿಗಳನ್ನು ಮುಚ್ಚಬೇಕು. ಯಾವುದಾದರೂ ಅನಾಹುತ ಸಂಭವಿಸಿದರೂ ಕೊಳವೆಬಾವಿಗಳ ಮಾಲೀಕರು ಹಾಗೂ ಅದನ್ನು ಕೊರೆದ ರಿಗ್‌ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚನೆ ಮಾಡಬೇಕು. ಸ್ಥಳೀಯ ಗ್ರಾಮ ಪಂಚಾಯಿತಿಗಳ ಅವಶ್ಯಕತೆಗೆ ಅನುಗುಣವಾಗಿ ಗ್ರಾಮಮಟ್ಟದಲ್ಲಿ ವಿಪತ್ತು ನಿರ್ವಹಣಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ತಾಪ ನಿಯಂತ್ರಣಕ್ಕೆ ಸೂಚನೆ: ಬೇಸಿಗೆಯಲ್ಲಿ ಬಿಸಿಲಿನ ತೀವ್ರತೆ ಅಧಿ ಕವಾಗಿರುವುದರಿಂದ ಎನ್‌ ಆರ್‌ಇಜಿ ಸೇರಿದಂತೆ ಸರ್ಕಾರದ ಪ್ರಾಯೋಜಿತ ಕಾಮಗಾರಿಗಳ ಸ್ಥಳದಲ್ಲಿ ಕಾರ್ಮಿಕರಿಗೆ ಸೂಕ್ತ ನೆರಳು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬಿಸಿಲಿನ ತೀವ್ರತೆಯಿಂದಾಗಿ ತೊಂದರೆಗೊಳಗಾಗುವವರ ತುರ್ತು ಆರೈಕೆಗಾಗಿ ವೈದ್ಯಕೀಯ ಸಾಮಗ್ರಿಗಳು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಸಕಾಲದಲ್ಲಿ ದೊರೆಯುವ ಬಗ್ಗೆ ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯಾ ಧಿಕಾರಿಗೆ ಸೂಚಿಸಿದರು.

ಗ್ರಾಮೀಣ ರಸ್ತೆ ಮತ್ತು ದುರಸ್ತಿಗಾಗಿ 18.44 ಲಕ್ಷ ರೂ., ಪ್ರಾಥಮಿಕ ಶಾಲೆಗಳ ದುರಸ್ತಿಗಾಗಿ 12.85 ಲಕ್ಷ ರೂ. ಹಾಗೂ ಅಂಗನವಾಡಿ ಕಟ್ಟಡಗಳ ದುರಸ್ತಿಗಾಗಿ 29.64 ಲಕ್ಷ ರೂ.ಅನುದಾನ ಹಂಚಿಕೆಯಾಗಿದ್ದು, ಮೂಲ ಸೌಕರ್ಯಗಳಿಗೆ ಸಂಬಂಧಿ ಸಿದಂತೆ ಕ್ರಿಯಾ ಯೋಜನೆ ತಯಾರಿಸಿ ವರದಿ ನೀಡಬೇಕು. ನಿಗ ದಿತ ಶುಲ್ಕ ಪಾವತಿಸಿ ತಮ್ಮ ಇಲಾಖೆ ಹಂತದಲ್ಲಿ ಫೈರ್‌ ಆಡಿಟ್‌ ಮಾಡಿಸಿಕೊಳ್ಳುವಂತೆ ಅ ಧಿಕಾರಿಗಳಿಗೆ ಸೂಚಿಸಿದರು.

ನೀರಿನ ಸಮಸ್ಯೆಯಾಗದಂತೆ ಕ್ರಮ: ಬೇಸಿಗೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ  ಸಮಸ್ಯೆ ಉಂಟಾಗುತ್ತವೆ ಎನ್ನುವುದನ್ನು ಸಮೀಕ್ಷೆ ಮಾಡಿ, ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪರ್ಯಾಯ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ಪಾಸ್‌ ಆದಾಗ ನೀರು ಸರಬರಾಜಿಗೆ ಕ್ರಮವಹಿಸಬೇಕು. ಬೇಸಿಗೆ ಸಂದರ್ಭದಲ್ಲಿ ನೀರು ಸರಬರಾಜು ಮಾಡಿ ನಂತರ ಬಿಲ್‌ ಪಾವತಿಗೆ ಸಮಸ್ಯೆ ಆಗಬಾರದು ಎಂದು ಸೂಚನೆ ನೀಡಿದರು.

ಮೇವಿನ ಸಮಸ್ಯೆ ಇಲ್ಲ: ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಿಲ್ಲೆಯಲ್ಲಿ ಜಾನುವಾರಿಗಳಿಗೆ ಯಾವುದೇ ಮೇವಿನ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ| ಕೃಷ್ಣಪ್ಪ ಸಭೆಗೆ ಮಾಹಿತಿ ನೀಡಿದರು. ಮುಂಬರುವ ಮೇ ಹಾಗೂ ಜೂನ್‌ ತಿಂಗಳವರೆಗೂ ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಮೇವಿನ ಸಮಸ್ಯೆ ಆಗುವುದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಅಪರ ಜಿಲ್ಲಾ ಧಿಕಾರಿ ಈ.ಬಾಲಕೃಷ್ಣ, ಉಪವಿಭಾಗಾ ಧಿಕಾರಿ ಪ್ರಸನ್ನ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಫಾಲಾಕ್ಷ, ನಗರಾಭಿವೃದ್ಧಿ ಕೋಶದ ಯೋಜನಾ ಧಿಕಾರಿ ಸತೀಶ್‌ರೆಡ್ಡಿ ಸೇರಿದಂತೆ ಜಿಲ್ಲಾ ಮಟ್ಟದ ಅ ಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.