ಸಮರ್ಪಕ ವಿದ್ಯುತ್‌ ಪೂರೈಕೆಗೆ ಆಗ್ರಹ

ಬೆಳೆಗಳಿಗೆ ಸರಿಯಾಗಿ ನೀರುಣಿಸದ್ದರಿಂದ ಬೆಳೆ ಹಾನಿಯಾಗಿ ಅಪಾರ ನಷ್ಟದ ಭೀತಿ

Team Udayavani, Apr 27, 2022, 3:40 PM IST

protest

ಚಿತ್ರದುರ್ಗ: ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್‌ ಪೂರೈಕೆ ಮಾಡಬೇಕು ಹಾಗೂ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್‌ ಸಂಪರ್ಕ ಕಡಿತ ಮಾಡಬಾರದು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬೇಸಿಗೆಯಲ್ಲಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್‌ ಪೂರೈಸದೇ ಇರುವ ಕಾರಣ ಫಸಲುಗಳು ಒಣಗಿ ನಷ್ಟವಾಗುತ್ತಿವೆ. ತೋಟಗಳಿಗೆ ನೀರು ಹಾಯಿಸಲು ಸಾಧ್ಯವಾಗದೆ ರೈತರು ಕೈಚೆಲ್ಲುವಂತಹ ಪರಿಸ್ಥಿತಿಯನ್ನು ಬೆಸ್ಕಾಂ ಸಿಬ್ಬಂದಿಗಳು ಸೃಷ್ಟಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2019-2020 ಹಾಗೂ 2020-2021ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಅಪಾರ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಪರಿಹಾರ ಬೆಳೆ ವಿಮೆ ಪಾವತಿಸಿದ ರೈತರಿಗೆ ವಿತರಣೆಯಾಗಿಲ್ಲ. ಅಂತಹವರಿಗೆ ಇನ್‌ಫುಟ್‌ ಸಬ್ಸಿಡಿಯನ್ನು ತೆಲಂಗಾಣ ಸರ್ಕಾರದ ಮಾದರಿಯಲ್ಲಿ ನೀಡಬೇಕು. ಕೃಷಿ ಪರಿಕರಗಳ ಮೇಲಿನ ಜೆಎಸ್‌ಟಿ ತೆರಿಗೆಯಿಂದ ಸಂಪೂರ್ಣ ವಿನಾಯಿತಿ ಮಾಡಬೇಕು. ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಟೆಂಡರ್‌ ಆದ ಕಂಪನಿಗಳಿಗೆ ಹಣ ಮಂಜೂರು ಮಾಡಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸಬೇಕು ಮತ್ತು ಭೂಮಿ ನೀಡಿರುವ ರೈತರಿಗೆ ಕೂಡಲೇ ಪರಿಹಾರದ ಹಣವನ್ನು ಪಾವತಿಸಬೇಕು ಎಂದು ಒತ್ತಾಯಿಸಿದರು.

ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದ್ದು, ರೈತರು ಜೀವನ ನಡೆಸಲು ಸಾಧ್ಯವಾಗದ ಕಾರಣ ಬೆಲೆ ಏರಿಕೆ ನಿಯಣತ್ರಿಸಬೇಕು. ರಸಗೊಬ್ಬರ, ಬೀಜ, ಕ್ರಿಮಿನಾಶಕ, ಬೆಲೆ ಏರಿಕೆಯಾಗಿದ್ದು ರಿಯಾಯಿತಿ ದರದಲ್ಲಿ ವಿತರಣೆ ಮಾಡಬೇಕು. ಭೂಸಾಗುವಳಿ ಮಾಡುತ್ತಿರುವ ರೈತರಿಗೆ ಆಕ್ರಮ-ಸಕ್ರಮ ಯೋಜನೆಯಡಿ ವಿಳಂಬ ಮಾಡದೇ ಭೂ ಸಾಗುವಳಿ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್‌ಬಾಬು, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕರಪ್ಪ, ಮುಖಂಡರಾದ ಬೇಡರೆಡ್ಡಿಹಳ್ಳಿ ಬಸವ ರೆಡ್ಡಿ, ಕೆ.ಸಿ. ಹೊರಕೇರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಎಂ.ಆರ್. ಪುಟ್ಟಸ್ವಾಮಿ, ಹಂಪಯ್ಯನಮಾಳಿಗೆ ಧನಂಜಯ, ಚಂದ್ರಪ್ಪ, ರವಿ ಕೋಗುಂಡೆ, ರವಿ, ಡಿ. ಮಲ್ಲಿಕಾರ್ಜುನ, ಶಿವಕುಮಾರ್‌, ರವಿ ಮೊಳಕಾಲ್ಮೂರು, ಅಣ್ಣಪ್ಪ, ವಿರುಪಾಕ್ಷಪ್ಪ ಮತ್ತಿತರರು ಭಾಗವಹಿಸಿದ್ದರು.

ಸರ್ಕಾರದಿಂದ ರೈತರ ನಿರ್ಲಕ್ಷ್ಯ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ರೈತರನ್ನು ನಿರ್ಲಕ್ಷಿಸಿವೆ ರೈತ ವಿರೋಧಿ ಆಡಳಿತ ನಡೆಸುತ್ತಾ ರೈತರಿಗೆ ಮಾರಕವಾಗುವ ನೀತಿಗಳನ್ನು ಜಾರಿ ಮಾಡುವ ಮೂಲಕ ರೈತರನ್ನು ನಾಶ ಮಾಡಲು ಹೊರಟಿದ್ದಾರೆ. ಕರ್ನಾಟಕದಲ್ಲಿ ಭತ್ತ, ರಾಗಿ, ಜೋಳ, ಮುಸುಕಿನ ಜೋಳ ಇತ್ಯಾದಿ ದವಸ ಧಾನ್ಯಗಳನ್ನು ಎಂಎಸ್‌ಪಿ ಬೆಲೆಗಿಂತಲೂ ಕಡಿಮೆ ಬೆಲೆಗೆ ರೈತರಿಂದ ಖರೀದಿಸಿ ಲೂಟಿ ಮಾಡಲಾಗುತ್ತಿದೆ. ಸರ್ಕಾರ ಖರೀದಿ ಕೇಂದ್ರಗಳ ಮುಖಾಂತರ ಖರೀದಿ ಮಾಡುತ್ತಿರುವ ರಾಗಿ ಮತ್ತು ಭತ್ತವನ್ನು ಸಂಪೂರ್ಣವಾಗಿ ಖರೀದಿಸದೆ ಮೋಸ ಮಾಡುತ್ತಾ ಕನಿಷ್ಠ ಬೆಂಬಲ ಬೆಲೆ ನೀತಿಗೆ ಅರ್ಥವಿಲ್ಲದಂತೆ ಮಾಡಿದೆ. ಇದರಿಂದ ರೈತರು ಬಂಡವಾಳವನ್ನು ವಾಪಸ್‌ ಪಡೆಯಲಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.