Udayavni Special

ಧರ್ಮಸ್ಥಳ ಸಂಸ್ಥೆ ಸೇವೆ ಸ್ತುತ್ಯರ್ಹ


Team Udayavani, Jan 20, 2021, 7:44 PM IST

Dharmasthala Organization Service

ಮೊಳಕಾಲ್ಮೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ತಾಲೂಕಿನ ತುಮಕೂರ‌್ಲಹಳ್ಳಿ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಸಿದ್ದಯ್ಯನಕೋಟೆ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ತುಮಕೂರ‌್ಲಹಳ್ಳಿ ಗ್ರಾಮದ ಸುಮಾರು 24.16 ಎಕರೆ ವಿಸ್ತೀರ್ಣದ ಕೆರೆಯನ್ನು 14.26 ಲಕ್ಷ ರೂ. ವೆಚ್ಚದಲ್ಲಿ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. ಗ್ರಾಮೀಣ ಜನತೆಯ ಬದುಕನ್ನು ಹಸನು ಮಾಡುವ ಗುರಿಯನ್ನು ಧರ್ಮಸ್ಥಳ ಸಂಸ್ಥೆ ಹೊಂದಿದೆ. ಧರ್ಮಸ್ಥಳ ಧರ್ಮಾಧಿ ಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸಾದ “ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದ ಅಡಿಯಲ್ಲಿ ಕರ್ನಾಟಕದಾದ್ಯಂತ ಹೂಳು ತುಂಬಿದ ಕೆರೆಗಳನ್ನು ಪುನಶ್ಚೇತನಗೊಳಿಸಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ:ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

ತುಮಕೂರ‌್ಲಹಳ್ಳಿ ಕೆರೆಯನ್ನು 295ನೇ ಕೆರೆಯಾಗಿ ಡಾ| ವೀರೇಂದ್ರ ಹೆಗ್ಗಡೆಯವರು ಆಯ್ಕೆ ಮಾಡುವ ಮೂಲಕ ಗ್ರಾಮಾಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಗಳೂರು ಜಿಲ್ಲಾ ಕಚೇರಿ ನಿರ್ದೇಶಕ ಜನಾರ್ದನ ಮಾತನಾಡಿ, ಮನುಷ್ಯರು ಹಾಗೂ ಜೀವರಾಶಿಗಳು ಉಸಿರಾಡಲು ಆಮ್ಲಜನಕ ಎಷ್ಟು ಮುಖ್ಯವೋ ಒಂದು ಗ್ರಾಮಕ್ಕೆ ಕೆರೆ ಕೂಡ ಅಷ್ಟೇ ಮುಖ್ಯ. ನಮ್ಮ ಮನೆಗಳಲ್ಲಿ ಸಿಂಟೆಕ್ಸ್‌, ತೊಟ್ಟಿ, ಡ್ರಮ್‌, ಕೊಡಗಳಲ್ಲಿ ಹೇಗೆ ನೀರನ್ನು ಶೇಖರಿಸಿ ಬಳಕೆ ಮಾಡಲಾಗುತ್ತಿದೆಯೋ ಅದೇ ರೀತಿ ನಮ್ಮ ಊರಿನ ಕೆರೆಯಲ್ಲಿ ನೀರು ಶೇಖರಣೆಯಾದಲ್ಲಿ ವ್ಯವಸಾಯ ಮಾಡಲು ರೈತರಿಗೆ, ಬಳಕೆ ಮಾಡಲು ಊರಿನ ಜನರಿಗೆ, ಕುಡಿಯಲು ಜಾನುವಾರು ಪಶು-ಪಕ್ಷಿಗಳಿಗೆ ತುಂಬಾ ಸಹಾಯವಾಗಲಿದೆ. ಗ್ರಾಮ ಪಂಚಾಯತ್‌ ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಧರ್ಮಸ್ಥಳ ಸಂಸ್ಥೆಯು ಕಾಮಗಾರಿ ಆರಂಭಿಸಲಿದೆ ಎಂದರು.

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಬೋರಮ್ಮ, ಇಂಜಿನಿಯರ್‌. ಮಂಜುನಾಥ, ಧರ್ಮಸ್ಥಳ ಸಂಸ್ಥೆ ಯೋಜನಾಧಿಕಾರಿ ಕೊರಗಪ್ಪ ಪೂಜಾರಿ, ಗ್ರಾಪಂ ಸದಸ್ಯ ಬಸಣ್ಣ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಣ್ಣ, ಪಿಡಿಒ ಹೊನ್ನೂರಪ್ಪ ಭಾಗವಹಿಸಿದ್ದರು

ಟಾಪ್ ನ್ಯೂಸ್

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

Untitled-1

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದ ಶಿವಮೊಗ್ಗದ ಅದೃಷ್ಟವಂತ!

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Request of members to supply drinking water

ಕುಡಿಯುವ ನೀರು ಪೂರೈಸಲು ಸದಸ್ಯರ ಮನವಿ

Kaneni, who moved to Sakrebile

ಸಕ್ರೆಬೈಲಿಗೆ ತೆರಳಿದ ಕನೇನಿ

Tippareddi

ವರ್ಷಾಂತ್ಯದೊಳಗೆ ನಿವಾಸಿಗಳಿಗೆ ಹಕ್ಕು ಪತ್ರ

DC Balakrishna

ಬಾಕಿ ಅರ್ಜಿ ವಿಲೇವಾರಿಗೆ ತಾಕೀತು

MLA CHandrappA

ಕೆರೆ ನಿರ್ಮಾಣಕ್ಕೆ ಒತ್ತು : ಚಂದ್ರಪ್ಪ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.