ದೇಶದ ಪ್ರಗತಿಗೆ ಮೌಡ್ಯವೇ ಅಡ್ಡಿ: ನ್ಯಾ| ವಸ್ತ್ರಮಠ


Team Udayavani, Dec 14, 2018, 3:51 PM IST

chikk-2.jpg

ಚಿತ್ರದುರ್ಗ: ಮೌಢ್ಯಾಚರಣೆ ದೇಶದ ಅಭಿವೃದ್ಧಿಗೆ ಕಂಟಕವಾಗಿವೆ. ಬಾಲಕಾರ್ಮಿಕ ಪದ್ದತಿ ಮತ್ತು ಬಾಲ್ಯವಿವಾಹಗಳು ಸಮಾಜದ ಅನಿಷ್ಠ ಪದ್ದತಿಯಾಗಿದ್ದು ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಬಿ. ವಸ್ತ್ರಮಠ ಕರೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವುಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಜಾಗೃತಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು. 

ಮಕ್ಕಳು ದೇಶದ ಸಂಪತ್ತಾಗಿದ್ದು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯಲ್ಲಿ ದೈಹಿಕ ಹಾಗೂ ಮಾನಸಿಕವಾಗಿ ಬೆಳೆಯಬೇಕು. ಈ ವಯೋಮಾನದಲ್ಲಿ ಆಗುವ ಬೆಳವಣಿಗೆಯ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಬಾರದು. ಆದರೆ ಬಾಲ್ಯದಲ್ಲಿಯೇ ಕಾರ್ಮಿಕರಾಗುವುದರಿಂದ ದೈಹಿಕ, ಮಾನಸಿಕ ಹಾಗೂ ಶೈಕ್ಷಣಿಕ ಬೆಳವಣಿಗೆ ಆಗುವುದಿಲ್ಲ. ಇದರಿಂದ ಮಕ್ಕಳ ಮುಂದಿನ ಜೀವನದ ಮೇಲೆ ಪರಿಣಾಮವಾಗಲಿದೆ. ಈ ನಿಟ್ಟಿನಲ್ಲಿ ಮಕ್ಕಳನ್ನು 1 ರಿಂದ 18 ನೇ ವಯಸ್ಸಿನವರೆಗೆ ಯಾವುದೇ ದುಡಿಮೆಗೆ ಕಳುಹಿಸದೆ ಶಿಕ್ಷಣ ಕೊಡಿಸುವಂತಹ ಕೆಲಸವನ್ನು ನಾವು ನೀವೆಲ್ಲರೂ ಮಾಡಬೇಕಾಗಿದೆ ಎಂದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಮಾತನಾಡಿ, ಬಾಲಕಾರ್ಮಿಕ ನಿರ್ಮೂಲನೆ ಮಾಡುವ ಉದ್ದೇಶದಿಂದ ಜಿಲ್ಲೆಯ ಎಲ್ಲ 189 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಪ್ರಚಾರ ಗೀತೆ, ಕರಪತ್ರ, ವಸ್ತುಪ್ರದರ್ಶನದ ಮೂಲಕ ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳನ್ನು ಜನರಿಗೆ ಮನವರಿಕೆ ಮಾಡಲಾಗುವುದು ಎಂದರು. ಉಪವಿಭಾಗಾಧಿಕಾರಿ ವಿಜಯಕುಮಾರ್‌, ವಕೀಲರ ಸಂಘದ ಅಧ್ಯಕ್ಷ ವಿಶ್ವನಾಥ್‌, ಕಾರ್ಮಿಕ ಇಲಾಖೆ ಅಧಿಕಾರಿ ಇಬ್ರಾಹಿಂ, ನಿರೀಕ್ಷಕ ರಾಜಣ್ಣ ಮತ್ತಿತರರು ಇದ್ದರು.

ಬಾಲಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಅಪರಾಧವಾಗಿದೆ. ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗಿದ್ದರೂ ಅಲ್ಲಲ್ಲಿ ಪ್ರಕರಣಗಳು ಕಂಡುಬರುತ್ತಿವೆ. ಆದರೂ
ಇಂತಹ ಪ್ರಕರಣಗಳು ಕಂಡುಬಂದಲ್ಲಿ ದೂರು ನೀಡಬಹುದಾಗಿದೆ. ನ್ಯಾಯಾಲಯ ಸಹ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಬಾಲಕಾರ್ಮಿಕರು, ಕಿಶೋರರು
ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು.
  ಎಸ್‌.ಬಿ. ವಸ್ತ್ರಮಠ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.