ನಷ್ಟ ಪರಿಹಾರ ಸಿಗದಿದ್ರೆ ರೈತರು ವಿಷ ಕುಡೀಬೇಕಾ?

Team Udayavani, Jan 28, 2019, 9:55 AM IST

cta-1.jpg

ಚಿತ್ರದುರ್ಗ: ನರೇಗಾ ಯೋಜನೆಯಡಿ 2017-18ನೇ ಸಾಲಿನಲ್ಲಿ 6.22 ಕೋಟಿ ರೂ., 2018-19ನೇ ಸಾಲಿನಲ್ಲಿ 97.90 ಕೋಟಿ ರೂ.ಗಳ ಕಾರ್ಮಿಕರ ಕೂಲಿ ಬಾಕಿ, ಸಾಮಗ್ರಿಗಳ ಬಾಕಿ ಹಣ ನೀಡಿಲ್ಲ. ಕಳೆದ 55 ದಿನಗಳಿಂದ ಕೂಲಿ ಹಣ ಕೊಡದಿದ್ದರೆ ಕಾರ್ಮಿಕರು ಹೇಗೆ ಜೀವನ ನಡೆಸಬೇಕು, ಕೂಲಿ ಕೊಡದಿದ್ದರೆ ಮತ್ತೆ ಹೇಗೆ ಕೂಲಿ ಕೆಲಸಕ್ಕೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ನಿರ್ವಹಣೆ ಕುರಿತು ಭಾನುವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಇಡೀ ರಾಜ್ಯದಲ್ಲೇ ಚಿತ್ರದುರ್ಗ ತೀವ್ರ ಬರ ಎದುರಿಸುತ್ತಿದೆ. ಕಳೆದ ಐದಾರು ವರ್ಷಗಳಿಂದಲೂ ಬರ ಇದ್ದು, ರೈತರ ಪರಿಸ್ಥಿತಿ ಗಂಭೀರವಾಗಿದೆ. ಫಸಲ್‌ ಬಿಮಾ ಯೋಜನೆ ಅಡಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡದಿದ್ದರೆ ರೈತರು ವಿಷ ಕುಡಿಯಬೇಕಾಗುತ್ತದೆ. ಫಸಲ್‌ ಬಿಮಾ ಯೋಜನೆಯಲ್ಲಿ ವಿಮಾ ಕಂಪನಿಗಳು ರೈತರಿಗೆ ತೊಂದರೆ ನೀಡುತ್ತಿದ್ದರೆ ಲೋಪವನ್ನು ಸರಿಪಡಿಸಬೇಕು. ಆದರೆ ಅಧಿಕಾರಿಗಳು ಆ ಕೆಲಸ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿದೆ. ಟ್ಯಾಂಕರ್‌ ನೀರು ಕೊಟ್ಟರೆ ಸಾಲದು, ಪೈಪ್‌ಲೈನ್‌ ಮೂಲಕ ನೀರು ಪೂರೈಕೆ ಮಾಡಬೇಕು. ನರೇಗಾ ಅಡಿ ಕೆರೆ ಕಟ್ಟೆಗಳ ಹೂಳೆತ್ತುವ ಕೆಲಸ ಮಾಡಬೇಕು. ಜನರು ಗುಳೆ ತಡೆಗಟ್ಟಲು ಉದ್ಯೋಗ ನೀಡಬೇಕು. ಜಾನುವಾರುಗಳಿಗೆ ಮೇವು ಪೂರೈಕೆ ಮಾಡಿ ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆಗಳನ್ನು ತೆರೆಯುವುದು, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ 3.58 ಲಕ್ಷ ಹೆಕ್ಟೇರ್‌ ಗುರಿ ಪೈಕಿ 30.30 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಶೇ. 85 ರಷ್ಟು ಬೆಳೆ ಹಾನಿಯಾಗಿ 191.06 ಕೋಟಿ ರೂ. ನಷ್ಟವಾಗಿದೆ. 37,883 ಹೆಕ್ಟೇರ್‌ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದು, 54.49 ಕೋಟಿ ರೂ. ಇನ್‌ಪುಟ್ ಸಬ್ಸಿಡಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಂದ 245.56 ಕೋಟಿ ರೂ.ಗಳ ಬೆಳೆ ಹಾನಿ ಪರಿಹಾರದ ಇನ್‌ಪುಟ್ ಸಬ್ಸಿಡಿಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂಗಾರು ಹಂಗಾಮಿನಲ್ಲಿ 56,166 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿ 38.17 ಕೋಟಿ ರೂ. ಮತ್ತು 10,648 ಹೆಕ್ಟೇರ್‌ ತೋಟಗಾರಿಕೆ ಬೆಳೆಗಳು ಹಾನಿಯಾಗಿ 18.96 ಕೋಟಿ ರೂ. ನಷ್ಟ ಸಂಭವಿಸಿದೆ. ಅದರ ಇನ್‌ಪುಟ್ ಸಬ್ಸಿಡಿಗೆ ಮನವಿ ಸಲ್ಲಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆಯಿಂದ ಒಟ್ಟು 57.14 ಕೋಟಿ ರೂ.ಗಳ ಬೆಳೆ ಹಾನಿಯಾಗಿದೆ ಎಂದರು.

ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಎಚ್.ಆರ್‌. ತಿಮ್ಮಯ್ಯ ಮಾತನಾಡಿ, ದಾಳಿಂಬೆ, ಈರುಳ್ಳಿ, ತೆಂಗು, ಅಡಿಕೆ, ಶೇಂಗಾ, ರಾಗಿ ಮತ್ತಿತರ ಬೆಳೆ ಹಾನಿಯಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್‌, ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಪೂರ್ಣಿಮಾ ಶ್ರೀನಿವಾಸ್‌, ಗೂಳಿಹಟ್ಟಿ ಶೇಖರ್‌, ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಸಭೆಯಲ್ಲಿ ಜಿಪಂ ಸಿಇಒ ರವೀಂದ್ರ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್‌ ಸೇರಿದಂತೆ ಜಿಲ್ಲೆಯ ತಹಶೀಲ್ದಾರ್‌ಗಳು, ತಾಪಂ ಇಒಗಳು, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಡಾ| ಜಿ. ಸವಿತಾ ಮತ್ತಿತರರು ಇದ್ದರು.

ತೆಂಗು ಪರಿಹಾರ ಸಾಲದು
ಜಿಲ್ಲೆಯಲ್ಲಿ ಲಕ್ಷಾಂತರ ತೆಂಗು, ಅಡಿಕೆ ಮರಗಳು ಒಣಗಿ ಹೋಗಿವೆ. ತೆಂಗಿಗೆ ಮಾತ್ರ 400 ರೂ. ಪರಿಹಾರ ನೀಡಲು ಸರ್ಕಾರ ಸೂಚಿಸಿದೆ. ಭಿಕ್ಷುಕರಿಗೆ ಹಾಕಿದಂತೆ ಒಂದು ತೆಂಗಿನ ಮರಕ್ಕೆ ಪರಿಹಾರ ನೀಡಿದರೆ ಹೇಗೆ, ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುತ್ತದೆ. ತೆಂಗಿನ ಪರಿಹಾರ ಹಣವನ್ನು ಕೂಡಲೇ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಯಡಿಯೂರಪ್ಪ ಸೂಚನೆ ನೀಡಿದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.