2ನೇ ಹಂತದ ಲಸಿಕಾ ಅಭಿಯಾನಕ್ಕೆ ಚಾಲನೆ


Team Udayavani, Feb 9, 2021, 2:31 PM IST

Drive to the 2nd tier of vaccination campaign

ಚಿತ್ರದುರ್ಗ: ಮಹಾಮಾರಿ ಕೋವಿಡ್‌ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕ ಘಟ್ಟ ತಲುಪಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರ ಎರಡನೇ ಹಂತದ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆಯಿತು.

ಜಿಲ್ಲೆಯ ಆಡಳಿತದ ನೇತೃತ್ವ ವಹಿಸಿಕೊಂಡಿರುವ ಮೂವರು ಮಹಿಳಾ ಅ ಧಿಕಾರಿಗಳಾದ ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾ  ಧಿಕಾರಿ ಜಿ. ರಾಧಿ ಕಾ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ| ಕೆ. ನಂದಿನಿದೇವಿ ಲಸಿಕೆ ಪಡೆದು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬಿದರು.

ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ 17 ಕಡೆಗಳಲ್ಲಿ ಎರಡನೇ ಹಂತದ ಕೊರೊನಾ ರೋಗ ನಿರೋಧಕ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತರಬೇತಿ ಸಂಸ್ಥೆ, ಸಿರಿಗೆರೆ ಸಿಸಿಪಿ, ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಚಳ್ಳಕೆರೆ ತಾಲೂಕು ಆಸ್ಪತ್ರೆ, ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರ, ಪರಶುರಾಮಪುರ ಸಮುದಾಯ ಆರೋಗ್ಯ ಕೇಂದ್ರ, ಹಿರಿಯೂರು ತಾಲೂಕು ಆಸ್ಪತ್ರೆ, ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರ, ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ, ಹೊಳಲ್ಕೆರೆ ತಾಲೂಕಿನ ಬಿ. ದುರ್ಗ ಸಮುದಾಯ ಆರೋಗ್ಯ ಕೇಂದ್ರ, ಹೊಳಲ್ಕೆರೆ ತಾಲೂಕು ಆಸ್ಪತ್ರೆ, ಹೊಸದುರ್ಗ ತಾಲೂಕು ಆಸ್ಪತ್ರೆ, ಕೆ.ಕೆ. ಪುರ ಸಮುದಾಯ ಆರೋಗ್ಯ ಕೇಂದ್ರ-1, ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರ, ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆ, ರಾಂಪುರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕಲಾಯಿತು. ಈ ವೇಳೆ ಜಿಲ್ಲಾಧಿ ಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, ಕೋವಿಡ್‌-19 ಲಸಿಕೆ ತುಂಬಾ ಸುರಕ್ಷಿತವಾಗಿದೆ. ಯಾವುದೇ ಭಯ, ಆತಂಕವಿಲ್ಲದೇ ಕೋವಿಡ್‌ ಲಸಿಕೆ ಪಡೆಯುವಂತೆ ತಿಳಿಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹಂತದ ಕೋವಿಡ್‌ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಆಶಿಸಿದರು.

ಇದನ್ನೂ ಓದಿ:ಇಂದಿನ ಮಹಿಳೆಯರದು ಸೀತಾ ಮಾತೆ ಪಾಡು

ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಕಂದಾಯಇಲಾಖೆ, ಪೊಲೀಸ್‌ ಇಲಾಖೆ, ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್‌ ರಾಜ್‌ ಇಲಾಖೆಹಾಗೂ ಇದರ ಅಡಿಯಲ್ಲಿ ಬರುವ ಸ್ಥಳೀಯಸಂಸ್ಥೆಗಳ ಸಿಬ್ಬಂದಿ ಸೇರಿದಂತೆ ಸೇರಿದಂತೆ ಒಟ್ಟು 2514 ಮಂದಿ ವಾರಿಯರ್ಸ್‌ಗೆ ಸೋಮವಾರ  ಕೋವಿಡ್‌ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು ಎಂದರು.

ನಗರಸಭೆ ಆಯುಕ್ತ ಜೆ.ಟಿ. ಹನಮಂತರಾಜು, ಡಿಎಚ್‌ಒ ಡಾ| ಸಿ.ಎಲ್‌. ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್‌.ಸಿ. ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.