ಜಿಲ್ಲೆಯಲ್ಲಿ ತಂಬಾಕು ನಿಷೇಧ ಕಾಯ್ದೆ ಪರಿಣಾಮಕಾರಿ ಜಾರಿಯಾಗಲಿ: ಡಿಸಿ

Team Udayavani, Sep 17, 2019, 2:24 PM IST

ಚಿತ್ರದುರ್ಗ: ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಚಿತ್ರದುರ್ಗ: ಜಿಲ್ಲೆಯನ್ನು ತಂಬಾಕು ನಿಷೇಧ ಕಾಯ್ದೆಯ ಉನ್ನತ ಅನುಷ್ಠಾನ ಕೇಂದ್ರವನ್ನಾಗಿ ಮಾಡಲು ಮುಂದಾಗಿದ್ದು, ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿಯ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸೇರಿದಂತೆ ಕಾಯ್ದೆಯ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ತಪ್ಪಿತಸ್ಥರಿಗೆ ದಂಡ ವಿಧಿಸಿ ದೂರು ದಾಖಲಿಸಬೇಕು. ಯಾವುದೇ ಪ್ರಕರಣಗಳನ್ನು ಕೇವಲ ದಂಡದಲ್ಲಿ ಮುಕ್ತಾಯ ಮಾಡಬಾರದು. ಜಿಲ್ಲೆಯಾದ್ಯಂತ ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳು ದಾಳಿ ನಡೆಸಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ನಿಲ್ದಾಣಗಳ ಆವರಣದಲ್ಲಿ ತಂಬಾಕು ನಿಷೇಧದ ಫಲಕವನ್ನು ಅಳವಡಿಸಬೇಕು ಎಂದರು.

ದಾಳಿ ನಡೆಸದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ತಂಬಾಕು ನಿಯಂತ್ರಣ ಕಾಯ್ದೆ ಅನ್ವಯ ಯಾವುದೇ ಶಾಲೆ, ಕಾಲೇಜು ಶಿಕ್ಷಣ ಸಂಸ್ಥೆ ಆವರಣದಿಂದ 100 ಮೀಟರ್‌ ಅಂತರದಲ್ಲಿ ಸಿಗರೇಟ್, ಬೀಡಿ ಅಥವಾ ಇತರೆ ಯಾವುದೇ ಬಗೆಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘನೆಯಾದಲ್ಲಿ ಶಿಕ್ಷಾರ್ಹ ಅಪರಾಧವಾಗುತ್ತದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಗೋಡೆಗಳ ಮೇಲೆ ಎಚ್ಚರಿಕೆ ಸಂದೇಶವನ್ನು ಬರೆಸಬೇಕು. ಎಲ್ಲ ಶಾಲಾ- ಕಾಲೇಜುಗಳ ಗೋಡೆಗಳ ಮೇಲೆ ಗೋಡೆಬರಹ ಬರೆಸಿದ ಕುರಿತು ಫೋಟೋ ಸಹಿತ ವರದಿಯನ್ನು ಡಿಡಿಪಿಐ ಹಾಗೂ ಡಿಡಿಪಿಯು ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಕಾಯ್ದೆ ಉಲ್ಲಂಘನೆಯಾಗದ ರೀತಿ ಜಾಗ್ರತೆ ವಹಿಸುವುದು ಆಯಾ ಶಾಲಾ-ಕಾಲೇಜುಗಳ ಮುಖ್ಯಸ್ಥರ ಹೊಣೆ. ತಪ್ಪಿದಲ್ಲಿ ಆಯಾ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರನ್ನೇ ಹೊಣೆಯಾಗಿಸಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಇದುವರೆಗೆ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ತಂಬಾಕು ತನಿಖಾ ದಳದಿಂದ 778 ಪ್ರಕರಣಗಳನ್ನು ದಾಖಲಿಸಿ 62,220 ರೂ. ದಂಡ ವಸೂಲಿ ಮಾಡಲಾಗಿದೆ. ಪೊಲೀಸ್‌ ಇಲಾಖೆಯಿಂದ ಈ ವರ್ಷ 6389 ಪ್ರಕರಣಗಳನ್ನು ದಾಖಲಿಸಿ 4.30 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಪಿ. ರೇಣುಪ್ರಸಾದ್‌, ಜಿಲ್ಲಾ ಸಲಹೆಗಾರ ಪ್ರಭುದೇವ್‌, ತಾಲೂಕು ವೈದ್ಯಾಧಿಕಾರಿ ಡಾ| ಸಿ. ಕಂಬಾಳಿ, ಜಿಪಂ ಉಪ ಕಾರ್ಯದರ್ಶಿ ಮಹಮ್ಮದ್‌ ಮುಬೀನ್‌, ತಹಶೀಲ್ದಾರ್‌ ವೆಂಕಟೇಶಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ತಂಬಾಕು ಮುಕ್ತವಾಗಿಸಲು ಗುಲಾಬಿ ಆಂದೋಲನ:

ಗ್ರಾಮ-ನಗರಗಳನ್ನು ತಂಬಾಕು ಮುಕ್ತವಾಗಿಸಲು ತಂಬಾಕು ಉತ್ಪನ್ನಗಳ ಬಳಕೆ ಕುರಿತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ‘ಗುಲಾಬಿ ಆಂದೋಲನ’ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಆಂದೋಲನದ ವಿಭಾಗೀಯ ಸಂಯೋಜಕ ಮಹಾಂತೇಶ್‌ ತಿಳಿಸಿದರು. ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿ ಒಂದೇ ದಿನದಂದು ಏಕಕಾಲಕ್ಕೆ ವಿದ್ಯಾರ್ಥಿಗಳಿಂದ ಜಾಥಾ ಏರ್ಪಡಿಸಲಾಗುವುದು. ವಿದ್ಯಾರ್ಥಿಗಳು ಅಂಗಡಿಯವರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ವಿನಂತಿಸಿ ಗುಲಾಬಿ ಹೂವು ನೀಡಿದರೆ, ಧೂಮಪಾನ ಮಾಡುವ ಸಾರ್ವಜನಿಕರಿಗೆ ಗುಲಾಬಿ ಹೂವು ನೀಡಿ ತಂಬಾಕು ಉತ್ಪನ್ನಗಳ ಸೇವನೆ ಮಾಡದಂತೆ ಮನವಿ ಮಾಡುವರು ಎಂದು ಮಾಹಿತಿ ನೀಡಿದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

  • „ಎಚ್‌.ಬಿ. ನಿರಂಜನ ಮೂರ್ತಿ ಭರಮಸಾಗರ: ತರಕಾರಿ ಬೆಳೆ ಎಲೆಕೋಸನ್ನು ನೀರಾವರಿ ಮತ್ತು ಮಳೆ ಆಶ್ರಯದಲ್ಲಿ ಬೆಳೆದಿರುವ ಚಿತ್ರದುರ್ಗ ಮತ್ತು ದಾವಣಗೆರೆ ತಾಲೂಕಿನ ಹಲವು...

  • ರಾಯಚೂರು: ಸಮಗ್ರ ಕೆರೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಬೃಹತ್‌ ಕೆರೆಯೊಂದನ್ನು ಮಾದರಿ ಕೆರೆಯನ್ನಾಗಿ ಅಭಿವೃದ್ಧಿಪಡಿಸುವಂತೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ...

  • ನಾಯಕನಹಟ್ಟಿ: ಮಧ್ಯ ಕರ್ನಾಟಕದ ಪ್ರಮುಖ ದೇವಾಲಯವಾಗಿರುವ ತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ಮಂಗಳವಾರ ಹುಂಡಿ ಎಣಿಕಾ ಕಾರ್ಯ ನಡೆಯಿತು. ಒಟ್ಟು 38.50 ಲಕ್ಷ ರೂ....

  • ಚಿತ್ರದುರ್ಗ: ಐತಿಹಾಸಿಕ ನಗರಿ ಚಿತ್ರದುರ್ಗದಲ್ಲಿರುವ ಜಿಲ್ಲೆಯ ಆಡಳಿತ ಕಚೇರಿ ಜಿಲ್ಲಾಡಳಿತ ಭವನಕ್ಕೆ ಬರೋಬ್ಬರಿ 150 ವಸಂತಗಳ ಸಂಭ್ರಮ. 1869ರಲ್ಲಿ ನಿರ್ಮಾಣವಾದ...

  • ಭರಮಸಾಗರ: ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ ನಿರ್ಮಾಣವಾಗಿ ಹತ್ತು ವರ್ಷ ಕಳೆದಿವೆ. ಆದರೆ ನಿಲ್ದಾಣದ ಒಳಗೆ ಬಂದು ಹೋಗಬೇಕಾದ ಬಸ್‌ಗಳು ಬಾರದೇ ಹೊರಗಿನಿಂದಲೇ...

ಹೊಸ ಸೇರ್ಪಡೆ