Udayavni Special

ಮೋದಿ-ಯಡಿಯೂರಪ್ಪ ರೈತ ವಿರೋಧಿಗಳು


Team Udayavani, Dec 9, 2020, 4:25 PM IST

ಮೋದಿ-ಯಡಿಯೂರಪ್ಪ ರೈತ ವಿರೋಧಿಗಳು

ಚಳ್ಳಕೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತ ವಿರೋಧಿಗಳು  ಎಂಬುದನ್ನು ಸಾಬೀತುಪಡಿಸಿದ್ದಾರೆ. ಕಾರ್ಮಿಕರು ಮತ್ತು ರೈತರ ಹಿತವನ್ನು ಕಡೆಗಣಿಸಿದ್ದಾರೆ ಎಂದುಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಆರೋಪಿಸಿದರು.

ಭಾರತ್‌ ಬಂದ್‌ ನಿಮಿತ್ತ ಇಲ್ಲಿನ ನೆಹರೂ ವೃತ್ತದಲ್ಲಿ ರೈತ ಸಂಘ, ಕಾರ್ಮಿಕ ಸಂಘಟನೆ, ಕಾಂಗ್ರೆಸ್‌, ಜೆಡಿಎಸ್‌ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಿಸುವ, ಎಲ್ಲಾ ವರ್ಗದ ಬಡವರಿಗೆ ಜನ್‌ಧನ್‌ ಮೂಲಕ ಪ್ರತಿ ವರ್ಷ ಹಣ ನೀಡುವ ಭರವಸೆ ನೀಡಿದ್ದ ಪ್ರಧಾನಿ ಅದನ್ನು ಮರೆತಿದ್ದಾರೆ. ರೈತರ ವಿರುದ್ಧ ತೆಗೆದುಕೊಂಡ ನಿರ್ಣಯಗಳ ಫಲವಾಗಿಇಂದು ರೈತರ ಬದುಕು ಬೀದಿಗೆ ಬರುವಂತಾಗಿದೆ. ಎಲ್ಲರೂ ಸಂಘಟಿತರಾಗಿ ಹೋರಾಡಿದಲ್ಲಿ ಮಾತ್ರ ರೈತರಿಗೆ ನ್ಯಾಯ ದೊರಕಿಸಿಕೊಡಬಹುದು ಎಂದರು.

ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಮಾತನಾಡಿ, ರೈತರೇ ನನ್ನ ಉಸಿರು ಎಂದು ಅಧಿಕಾರಕ್ಕೆ ಬಂದ ಬಿ.ಎಸ್‌. ಯಡಿಯೂರಪ್ಪ ಅಧಿಕಾರ ಬಂದ ಕೂಡಲೇ ರೈತರನ್ನೇ ಶೋಷಣೆ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗಳ ಅಣತಿಯಂತೆ ನಡೆಯುವ ಇವರಿಗೆ ರೈತರ ಸಂಕಷ್ಟಗಳ ಬಗ್ಗೆ ಅರಿವೇ ಇಲ್ಲವಾಗಿದೆ. ಸಂಘಟನೆಯ ಬಲ ಕುಗ್ಗುತ್ತಿರುವುದರಿಂದರೈತ ಪರ ಹೋರಾಟಗಳು ವಿಫಲವಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಟಿ. ತಿಪ್ಪೇಸ್ವಾಮಿ ಮಾತನಾಡಿ, ಸುಳ್ಳು ಭರವಸೆಗಳ ಮೂಲಕ ಅಧಿಕಾರ ಪಡೆದ ಬಿಜೆಪಿಗೆ ರೈತರು, ಕಾರ್ಮಿಕರು ಹಾಗೂ ಎಲ್ಲಾ ವರ್ಗದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಹಾಗಾಗಿ ಶೀಘ್ರದಲ್ಲೇ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ರೈತರು, ಕಾರ್ಮಿಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರ ಕಳೆದುಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸಿವೆ ಎಂದರು.

ಎಐಟಿಯುಸಿ ರಾಜ್ಯ ಸಂಚಾಲಕ ಸಿ.ವೈ. ಶಿವರುದ್ರಪ್ಪ ಮಾತನಾಡಿ, ಕಾರ್ಮಿಕರ ಮತ್ತು ರೈತರ ವಿರುದ್ದ ನಿಲುವು ತಾಳಿರುವ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯದೇ ಇದ್ದಲ್ಲಿ ಹೋರಾಟವನ್ನುತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಜೆಡಿಸ್‌ ಮುಖಂಡ ಸಮರ್ಥರಾಯ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಎಸ್‌.ಎಚ್‌. ಸಯ್ಯದ್‌, ನಗರಸಭಾ ಸದಸ್ಯರಾದ ರಮೇಶ್‌ ಗೌಡ, ಮಲ್ಲಿಕಾರ್ಜುನ್‌, ಕಿಸಾನ್‌ ಸಭಾ ಅಧ್ಯಕ್ಷ ದೊಡ್ಡಉಳ್ಳಾರ್ತಿ ಕರಿಯಣ್ಣ, ಟಿ. ಕೃಷ್ಣಮೂರ್ತಿ, ಬೋರಣ್ಣ, ಯುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಆದರ್ಶ, ಎತ್ತಿನಗಾಡಿ ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಗಾಡಿ ತಿಪ್ಪೇಸ್ವಾಮಿ, ಸಿಐಟಿಯು ಅಧ್ಯಕ್ಷ ಕೆ.ವಿ. ವೀರಭದ್ರಪ್ಪ, ಜಿಲ್ಲಾ ಸಂಚಾಲಕ ಟಿ. ತಿಪ್ಪೇಸ್ವಾಮಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ನಾಡು ನುಡಿ ತಂಟೆಗೆ ಬಂದರೆ ಕೈಕಟ್ಟಿ ಕೂರಲು ಕನ್ನಡಿಗರೇನು ಕೈಗೆ ಬಳೆ ತೊಟ್ಟು ಕೂತಿಲ್ಲ!

ನಾಡು ನುಡಿ ತಂಟೆಗೆ ಬಂದರೆ ಕೈಕಟ್ಟಿ ಕೂರಲು ಕನ್ನಡಿಗರೇನು ಕೈಗೆ ಬಳೆ ತೊಟ್ಟು ಕೂತಿಲ್ಲ!

neene-guru-lyrical-video-song-from-mangalavara-rajaadina

‘ಮಂಗಳವಾರ ರಜಾದಿನ’ ಚಿತ್ರದ ನೀನೆ ಗುರು, ನೀನೆ ಗುರಿ, ನೀನೆ ಗುರುತು ಹಾಡು ಬಿಡುಗಡೆ

ಕಲ್ಲಡ್ಕ‌ ಪ್ರಭಾಕರ್ ಭಟ್

ತಾಕತ್ತಿದ್ದರೆ ಉಳ್ಳಾಲದ ಜನರು ಮುಸ್ಲಿಮೇತರರನ್ನು ಶಾಸಕರಾಗಿ ಮಾಡಿ: ಕಲ್ಲಡ್ಕ‌ ಪ್ರಭಾಕರ್ ಭಟ್

9ನೇ ತರಗತಿ, ಪ್ರಥಮ ಪಿಯುಸಿ ತರಗತಿ ಆರಂಭಕ್ಕೆ ದಿನಾಂಕ ನಿಗದಿ

9ನೇ ತರಗತಿ, ಪ್ರಥಮ ಪಿಯುಸಿ ತರಗತಿ ಆರಂಭಕ್ಕೆ ದಿನಾಂಕ ನಿಗದಿ

suresh-kumar

ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ

ಕೇಳುಗರ ಮನ ಗೆದ್ದ ‘ಸಲಗ’ ಸಾಂಗ್‌

ಕೇಳುಗರ ಮನ ಗೆದ್ದ ‘ಸಲಗ’ ಸಾಂಗ್‌

siddaramaiah

ಇದೊಂದು ಸುಳ್ಳಿನ ಕಂತೆ..ರಾಜ್ಯಪಾಲರ ಭಾಷಣಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2819

ರಾಯಣ್ಣ ಬಲಿದಾನ್‌ ದಿವಸ್‌ ಆಚರಣೆ

28-18

ಡಿವೈಎಸ್ಪಿ ಶ್ರೀಧರ್‌ಗೆ ಸಿಎಂ ಪದಕ-ಅಭಿನಂದನೆ

28-17

ವಾಲ್ಮೀಕಿ ಜಾತ್ರೆ ಯಶಸ್ವಿಗೊಳಿಸಿ: ತಿಪ್ಪೇಸ್ವಾಮಿ

28-16

31ರಿಂದ ಪೋಲಿಯೋ ಲಸಿಕೆ ಅಭಿಯಾನ

28-15

ಗುರುಭವನಕ್ಕೆ ಸೌಲಭ್ಯ ಕಲ್ಪಿಸಿ

MUST WATCH

udayavani youtube

ಕೃಷಿಕ ಪ್ರತಿಭಟನೆ – ಗೊಂದಲ, ಘರ್ಷಣೆ , ವಿಶ್ಲೇಷಣೆ

udayavani youtube

ಮಂಗಳೂರು: ಜ. 30ರಿಂದ ಕಂಬಳ ನಡೆಸಲು ಅನುಮತಿ

udayavani youtube

ಕೃಷಿ ಕಾಯಿದೆ; ಕೃಷಿಕನ ಅಭಿಪ್ರಾಯ ಕ್ಕೆ ಕಿವಿಯಾಗೋಣ ಬನ್ನಿ

udayavani youtube

Udupiಯ ಜನತೆಗೆ ಕಲೆಯಿಂದ ಜನಜಾಗೃತಿ ಮೂಡಿಸಿದ ಕಲಾವಿದ KAMIL RAZA,

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

ಹೊಸ ಸೇರ್ಪಡೆ

28-27

ಕೃಷಿ ಕಾಯ್ದೆ ಹಿಂಪಡೆಯದಿದ್ದ ರೆ ಸಂಸತ್‌ ಬಜೆಟ್‌ ಕಲಾಪಕ್ಕೆ ಅಡ್ಡಿ

28-26

ಬೇಂದ್ರೆ ಕನ್ನಡ ಸಾಹಿತ್ಯದ ಮೇರು ಶಿಖರ

28-25

ಬುಡಾ ಅಧ್ಯಕ್ಷ ದಿಢೀರ್‌ ಬದಲಾವಣೆ

ಮೂಲ ಸೌಲಭ್ಯದೊಂದಿಗೆ ಶೈಕ್ಷಣಿಕ ಪ್ರಗತಿಗೆ ಆದ್ಯತೆ

ಮೂಲ ಸೌಲಭ್ಯದೊಂದಿಗೆ ಶೈಕ್ಷಣಿಕ ಪ್ರಗತಿಗೆ ಆದ್ಯತೆ

28-24

ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.