ನೆರೆ ಪರಿಹಾರ: ಮೋದಿ, ಶಾ ಜೊತೆ ಚರ್ಚಿಸಿದ್ದೇನೆ: ಸಚಿವ ಡಿ.ವಿ. ಸದಾನಂದ ಗೌಡ

Team Udayavani, Oct 4, 2019, 7:09 PM IST

ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಕಾರ್ಯ ವಿಳಂಬಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ, ಗೃಹ ಸಚಿವ ಅಮೀತ್ ಶಾ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಚಿತ್ರದುರ್ಗ ಮುರುಘಾ ಮಠದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ ರಜೆ ದಿನ ಬಂದ ಹಿನ್ನಲೆ ಪರಿಹಾರ ಕಾರ್ಯ ವಿಳಂಬವಾಗಿದೆ ಎಂದರು. ವಿಜಯದಶಮಿ ಬಳಿಕ ನೆರೆ ಸಂತ್ರಸ್ತರಿಗೆ ಪರಿಹಾರ ಸಿಗುವ ವಿಶ್ವಾಸವಿದೆ. ಈ ಹಿಂದೆ ನೆರೆ ಬಂದಾಗೆಲ್ಲಾ 3 4 ತಿಂಗಳ ಬಳಿಕ ಪರಿಹಾರ ನೀಡಿದೆ. ಕೇಂದ್ರದಿಂದ ಈ ಹಿಂದೆ ನೆರೆ ಪರಿಹಾರ ನೀಡಿದ್ದರ ಬಗ್ಗೆ ದಾಖಲೆಗಳಿವೆ ಎಂದ ಸದಾನಂದ ಗೌಡರು.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ‌ ಶೋಕಾಸ್‌ ನೋಟಿಸ್‌ ವಿಚಾರಕ್ಕೆ ಪ್ರತಿಕ್ರಿಸಿದ ಅವರು ಈ ಅದರ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದರು.

ರಾಜ್ಯ ಸರ್ಕಾರ‌ದಿಂದ ಅಗತ್ಯ ಪರಿಹಾರ: ಸಚಿವ ಜಗದೀಶ ಶೆಟ್ಟರ್

ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಸರ್ಕಾರ‌ದಿಂದ ಅಗತ್ಯ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಕೂಡ ಶೀಘ್ರದಲ್ಲೇ ಪರಿಹಾರ ನೀಡಲಿದೆ ಎಂದು
ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಸಂತ್ರಸ್ತರಿಗೆ ರಾಜ್ಯದ ‌ಇತಿಹಾಸದಲ್ಲೇ ಹೆಚ್ಚು ಪರಿಹಾರ ನೀಡಲಾಗುತ್ತಿದೆ. ಹತ್ತು ಸಾವಿರ ಹಣ ಸಂತ್ರಸ್ಥರ ಖಾತೆಗೆ ಜಮಾ ಆಗಿದೆ. ನೆರೆಯಲ್ಲಿ ಶೇ. 25 ರಷ್ಟು ನಷ್ಟವಾದ ಮನೆ ಮಾಲೀಕರ ಉಳಿತಾಯ ಖಾತೆಗೆ 25.000ರೂ ಜಮಾ ಆಗಿದೆ ಎನ್ ಡಿಆರ್ ಎಫ್ ನಿಯಮಾನುಸಾರ ಪರಿಹಾರ ನೀಡಲು ಹಣವಿಲ್ಲ ಎಂದು ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು. ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಹೆಚ್ಚಿನ ನಿರೀಕ್ಷೆ ಇದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ