ಮೇವು ಬ್ಯಾಂಕ್‌ ಆರಂಭಕ್ಕೆ ನಿರ್ಧಾರ


Team Udayavani, Jan 29, 2019, 9:39 AM IST

cta-1.jpg

ಚಿತ್ರದುರ್ಗ: ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್‌ ಆರಂಭಿಸಲು ನಿರ್ಧರಿಸಲಾಗಿದ್ದು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲಿ ಕೂಡಲೇ ಸ್ಥಳ ಗುರುತಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೊರತೆಯಿಂದ ಬರ ಎದುರಾಗಿದೆ. ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗುವ ಸಾಧ್ಯತೆ ಇದ್ದು, ಮೇವಿನ ಕೊರತೆಯಿಂದ ತೊಂದರೆಯಾಗದ ರೀತಿಯಲ್ಲಿ ನಿರ್ವಹಿಸಲು ಈಗಿನಿಂದಲೇ ಸಿದ್ಧತೆ ಕೈಗೊಳ್ಳಬೇಕಿದೆ. ಜಿಲ್ಲೆಯಲ್ಲಿ ಮೇವು ಬ್ಯಾಂಕ್‌ ಸ್ಥಾಪನೆಗೆ ಈಗಾಗಲೇ ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಟೆಂಡರ್‌ ಪಡೆದ ಸಂಸ್ಥೆಯವರು ಕಾರ್ಯಾದೇಶ ನೀಡಿದ ಕೂಡಲೇ ಮೇವು ಪೂರೈಕೆ ಮಾಡಲು ಸಿದ್ಧರಿದ್ದಾರೆ. ಸದ್ಯ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕಿನಲ್ಲಿ ಮೇವು ಬ್ಯಾಂಕ್‌ ತೆರೆಯಲಾಗುವುದು. ಈ ಮೇವು ಬ್ಯಾಂಕ್‌ನಿಂದ ಸುತ್ತಮುತ್ತಲಿನ ಕನಿಷ್ಠ 5 ಕಿಮೀ ಪ್ರದೇಶದ ರೈತರ ಜಾನುವಾರುಗಳಿಗೆ ಮೇವು ಲಭ್ಯವಾಗಬೇಕು. ಹಾಗಾಗಿ ಈ ಎರಡೂ ತಾಲೂಕುಗಳ ತಹಶೀಲ್ದಾರರು ಪಶುಸಂಗೋಪನೆ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಿ ಮೇವು ಬ್ಯಾಂಕ್‌ ಆರಂಭಿಸಲು ಸ್ಥಳ ಗುರುತಿಸಬೇಕೆಂದರು.

ಟ್ಯಾಂಕರ್‌ ನೀರು ಪೂರೈಕೆ ಮಾಡುವುದು ತುರ್ತು ಹಾಗೂ ತಾತ್ಕಾಲಿಕ ಕ್ರಮ. ದೀರ್ಘಾವಧಿಗೆ ಟ್ಯಾಂಕರ್‌ ನೀರು ಪೂರೈಕೆಗೆ ಅವಕಾಶವಿಲ್ಲ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳು ಸಭೆಯಲ್ಲಿ ಚರ್ಚೆ ನಡೆಸಬೇಕು. ಖಾಸಗಿ ಕೊಳವೆಬಾವಿಯನ್ನು ಬಾಡಿಗೆಗೆ ಪಡೆಯುವುದು ಅಥವಾ ಇತರೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು. ಹೊಸ ಕೊಳವೆಬಾವಿ ಕೊರೆಸಲು ಜಿಪಿಎಸ್‌ ಕಡ್ಡಾಯ ಮಾಡಲಾಗಿದ್ದು, ವಿಫಲವಾದ ಕೊಳವೆಬಾವಿಗಳ ಮೋಟಾರ್‌ಗಳನ್ನು ಹೊಸ ಬೋರ್‌ವೆಲ್‌ಗ‌ಳಿಗೆ ಬಳಸಬೇಕು. ತಹಶೀಲ್ದಾರರು ಕುಡಿಯುವ ನೀರಿನ ತುರ್ತು ಕಾಮಗಾರಿಗಳ ಕುರಿತು ಮೇಲ್ವಿಚಾರಣೆ ನಡೆಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಬರ ಇರುವುದರಿಂದ ನರೇಗಾದಡಿ ಹೆಚ್ಚೆಚ್ಚು ಕೂಲಿ ಆಧಾರಿತ ಕೆಲಸ ನೀಡಲು ಆದ್ಯತೆ ನೀಡಲಾಗುತ್ತಿದೆ. ಕೆರೆ, ಗೋಕಟ್ಟೆ, ಕಲ್ಯಾಣಿಗಳ ಹೂಳೆತ್ತುವುದು, ಕೆರೆ ಏರಿ ದುರಸ್ತಿ ಕಾಮಗಾರಿ ಸೇರಿದಂತೆ ನೀರು ಮತ್ತು ಮಣ್ಣಿನ ಸಂರಕ್ಷಣೆ ಕಾಮಗಾರಿಗೆ ಸಾಮೂಹಿಕವಾಗಿ ಜನರನ್ನು ತೊಡಗಿಸಿಕೊಳ್ಳುವುದರಿಂದ ಜನರಿಗೆ ಉದ್ಯೋಗ ನೀಡಿದಂತಾಗುತ್ತದೆ. ಇದರಿಂದ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಲು ಅವಕಾಶವಿದ್ದು, ಬರ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಳ್ಳಲು ಅನುಕೂಲವಾಗಲಿದೆ. ಪ್ರತಿ ಗ್ರಾಪಂನಲ್ಲಿ ಕನಿಷ್ಠ ಇಂತಹ ಮೂರು ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಪ್ರತಿ ಕಾಮಗಾರಿಯಲ್ಲಿ 150 ಜನ ಕೂಲಿಕಾರರು ತೊಡಗಿಸಿಕೊಳ್ಳಬೇಕು. ಈ ದಿಸೆಯಲ್ಲಿ ತಹಶೀಲ್ದಾರರು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಕೈಗೊಂಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಬಹುದಾಗಿದೆ ಎಂದು ಜಿಪಂ ಸಿಇಒ ಪಿ.ಎನ್‌. ರವೀಂದ್ರ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಡಿ ನಿರ್ವಹಿಸಲಾಗುವ ವಸತಿ ನಿಲಯಗಳ ಕಟ್ಟಡಗಳಿಗೆ, ಅಂಗನವಾಡಿ ಕಟ್ಟಡಗಳಿಗೆ ಹಾಗೂ ನಾನಾ ಇಲಾಖೆಗಳಿಗೆ ಅಗತ್ಯವಿರುವ ನಿವೇಶನ, ಜಮೀನು ಗುರುತಿಸಲು ತಹಶೀಲ್ದಾರರಿಗೆ ಸೂಚನೆ ನೀಡಲಾಯಿತು. ಜಿಲ್ಲೆಯಲ್ಲಿ ಕಾರ್ಮಿಕ ಭವನ ನಿರ್ಮಾಣಕ್ಕೆ ಕಾರ್ಮಿಕ ಇಲಾಖೆಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್‌, ಎಲ್ಲ ತಾಲೂಕುಗಳ ತಹಶೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಕುಡಿಯುವ ನೀರಿಗೆ 50 ಲಕ್ಷ ರೂ. ಬಿಡುಗಡೆ
ಕುಡಿಯುವ ನೀರಿನ ತುರ್ತು ನಿರ್ವಹಣೆ ಕಾಮಗಾರಿಗಳಿಗಾಗಿ ಸರ್ಕಾರ ಪ್ರತಿ ತಾಲೂಕಿಗೆ ತಲಾ ಒಂದು ಕೋಟಿ ರೂ. ನೀಡುವುದಾಗಿ ಘೋಷಿಸಿದ್ದು, 50 ಲಕ್ಷ ರೂ. ಗಳನ್ನು ಟಾಸ್ಕ್ಪೋರ್ಸ್‌ಗೆ ಬಿಡುಗಡೆ ಮಾಡಿದೆ. ಶಾಸಕರುಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್‌ ಸಭೆ ಮಾಡಬೇಕು. ತುರ್ತು ಕುಡಿಯುವ ನೀರು ಕಾಮಗಾರಿಗಳಿಗೆ ನಿಯಮಾನುಸಾರ ಹಣ ಬಳಕೆ ಮಾಡಬೇಕು. ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದ ನಂತರ ಉಳಿದ 50 ಲಕ್ಷ ರೂ. ಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಅವಿಶ್ವಾಸ ನಿರ್ಣಯ ಮಂಡನೆಗೆ ಮುಹೂರ್ತ ಫಿಕ್ಸ್‌
ಚಿತ್ರದುರ್ಗ:
ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಶೇಷ ಸಭೆ ಕರೆಯುವಂತೆ ಜಿಪಂನ ಒಂದಿಬ್ಬರು ಸದಸ್ಯರು ಸೋಮವಾರ ಉಪಾಧ್ಯಕ್ಷರಿಗೆ ಮನವಿ ಸಲ್ಲಿಸಿದರು. ಜಿಪಂನ ಬಹುತೇಕ ಸದಸ್ಯರು ಗೋವಾ ಪ್ರವಾಸದಲ್ಲಿದ್ದಾರೆ. ಪ್ರವಾಸದಿಂದ ದೂರ ಉಳಿದಿರುವ ಕಾಂಗ್ರೆಸ್‌ ಸದಸ್ಯ ಕೃಷ್ಣಮೂರ್ತಿ ಮತ್ತಿತರರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಜಿಪಂ ಉಪಾಧ್ಯಕ್ಷೆ ಸುಶೀಲಮ್ಮ, ತಕ್ಷಣ ವಿಶೇಷ ಸಭೆ ಕರೆಯುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದ್ದಾರೆ. ಜಿಪಂ ಸಿಇಒ ಪಿ.ಎನ್‌. ರವೀಂದ್ರ ಅವರು ಉಪಾಧ್ಯಕ್ಷರ ಸೂಚನೆ ಮೇರೆಗೆ ಫೆ. 7 ರಂದು ಅವಿಶ್ವಾಸ ನಿರ್ಣಯ ಮಂಡಿಸಲು ವಿಶೇಷ ಸಭೆ ಕರೆದಿದ್ದಾರೆ. ಎಲ್ಲಾ ಸದಸ್ಯರಿಗೆ ವಿಶೇಷ ಸಭೆಗೆ ಆಗಮಿಸುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.