
ಬಿಜೆಪಿ ತೊರೆದು ಜೆಡಿಎಸ್ ಸೇರಿದ ಚಳ್ಳಕೆರೆ ಮಾಜಿ ಶಾಸಕ
ಜೆಡಿಎಸ್ ಘೋಷಿತ ಅಭ್ಯರ್ಥಿಗೆ ಬೆಂಬಲ...
Team Udayavani, Jan 29, 2023, 5:57 PM IST

ಚಿತ್ರದುರ್ಗ : ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಮುಂದುವರಿದಿದ್ದು,ಚಳ್ಳಕೆರೆಯ ಮಾಜಿ ಶಾಸಕ ಬಸವರಾಜ ಮಂಡಿಮಠ ಅವರು ಭಾನುವಾರ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ಮಂಡಿಮಠ ಮಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾದ್ಯಕ್ಷ ಡಿ.ಯಶೋಧರ್, ಜೆಡಿಎಸ್ ಘೋಷಿತ ಅಭ್ಯರ್ಥಿ ರವೀಶ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.ಜೆಡಿಎಸ್ ಅಭ್ಯರ್ಥಿ ರವೀಶ್ ಅವರನ್ನು ಗೆಲ್ಲಿಸಬೇಕು ಎಂದು ಬಸವರಾಜ ಮಂಡಿಮಠ್ ಕರೆ ನೀಡಿದರು.
ಪರಿಶಿಷ್ಟ ಪಂಗಡಕ್ಕೆ ಮೀಸಲು ಚಳ್ಳಕೆರೆ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ನಡೆದಿದ್ದು, 1999 ರಲ್ಲಿ ಬಸವರಾಜ ಮಂಡಿಮಠ್ ಅವರು ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2013 ಮತ್ತು 2018 ರಲ್ಲಿ ರಘುಮೂರ್ತಿ ಅವರು ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದರು. ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
