ವಿದ್ಯಾರ್ಥಿಗಳಿಗೆ ಕೌಶಲ್ಯಯುಕ್ತ ಶಿಕ್ಷಣ ಅಗತ್ಯ


Team Udayavani, Oct 30, 2020, 8:02 PM IST

ವಿದ್ಯಾರ್ಥಿಗಳಿಗೆ ಕೌಶಲ್ಯಯುಕ್ತ ಶಿಕ್ಷಣ ಅಗತ್ಯ

ಚಿತ್ರದುರ್ಗ: ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಕೌಶಲ್ಯವನ್ನೂ ರೂಢಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್‌ ರೆಡ್ಡಿ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಗುರುವಾರ ಹಿಂದಿ ಸೇವಕ್‌ ಬ್ಲಾಗ್‌ ಉದ್ಘಾಟಿಸಿಅವರು ಮಾತನಾಡಿದರು. ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ನಿಮ್ಮ ಮನಸ್ಥಿತಿಗಳನ್ನು ಬದಲಾಯಿಸಿಕೊಳ್ಳಬೇಕು. ಶಿಕ್ಷಕ ವೃತ್ತಿ ಪವಿತ್ರವಾದುದು. ಸ್ವಯಂಕೃತ ಅಪರಾಧಗಳನ್ನು ಯಾವುದೇ ಕಾರಣಕ್ಕೂ ಮಾಡಬೇಡಿ. ಶಿಕ್ಷಣ ಕ್ಷೇತ್ರ ಅತ್ಯಂತ ವಿಸ್ತಾರವಾಗಿರುವುದರಿಂದ ಇಲ್ಲಿ ಕೆಲಸ ಮಾಡಲು ಹೆಮ್ಮೆ ಪಡಬೇಕು ಎಂದರು.

ಮಕ್ಕಳ ಸಮಸ್ಯೆಗಳಿಗೆ ಉತ್ತರ ಕೊಡುವ ಮಾರ್ಗೋಪಾಯಗಳನ್ನು ಬ್ಲಾಗ್‌ನಲ್ಲಿ ಹಾಕಬೇಕಿದೆ. ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಮಾರ್ಗದರ್ಶನ ನೀಡಲು ನಿಮಗೆ ಸುವರ್ಣಾವಕಾಶ ಒದಗಿದೆ. ಸರಿಯಾಗಿ ಬಳಸಿಕೊಳ್ಳಿ. ಹಿಂದಿನ ಕಾಲದಲ್ಲಿ ಗುರುಗಳು ಮಕ್ಕಳಿಗೆ ಕ್ರಮಬದ್ಧವಾದ ಶಿಕ್ಷಣ ನೀಡುತ್ತಿದ್ದರು. ತಿಳಿವಳಿಕೆ, ಜ್ಞಾನ ಇಲ್ಲದಿದ್ದರೆ ನಿಮ್ಮ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಕಿವಿಮಾತು ಹೇಳಿದರು.

ಹಿಂದಿ, ಇಂಗ್ಲಿಷ್‌ ಪ್ರಧಾನ ಭಾಷೆ ಆಗಿರುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಿಗೆ ಹೋದರು ಇವೆರಡು ಭಾಷೆಗಳನ್ನು ಕಲಿತಿರಬೇಕು. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ. ದೊಡ್ಡ ಮನಸ್ಸು ಮಾಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗ ಶಿಕ್ಷಕರುಗಳಾದ ನಿಮಗೆ ಆತ್ಮತೃಪ್ತಿ ಸಿಗುತ್ತದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಕ್ಕಳಿಗೆ ಕೌಶಲ್ಯ ಶಿಕ್ಷಣ ಅತಿ ಮುಖ್ಯ. ಮಹಾಪುರುಷರ ಇತಿಹಾಸವನ್ನು ಮಕ್ಕಳಿಗೆ ಪರಿಚಯಿಸುವ ಕೆಲಸವಾಗಬೇಕು. ಕೋವಿಡ್‌-19 ಸಂಕಷ್ಟ ಕಾಲದಲ್ಲಿ ಶಿಕ್ಷಕರುಗಳು ಆನ್‌ಲೈನ್‌ ಶಿಕ್ಷಣ ನೀಡುತ್ತಿರುವುದು ಸಂತೋಷದ ಸಂಗತಿ. ಎಲ್ಲರೂ ಸುರಕ್ಷತೆ ದೃಷ್ಟಿಯಿಂದ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಿ. ಸ್ಯಾನಿಟೈಸರ್‌ ಬಳಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಮರೆಯಬಾರದು. ಮಕ್ಕಳಿಗೆ ಶಾಲಾ ಕೊಠಡಿಗಳಲ್ಲಿ ಪಾಠ ಮಾಡುವಾಗ ಶಿಕ್ಷಕರು ಹಾಸ್ಯ ಪ್ರವೃತ್ತಿಯನ್ನು ಬೆಳೆಸಿಕೊಂಡಿರಬೇಕು. ನಿಮ್ಮಲ್ಲಿರುವ ಜ್ಞಾನ ಮತ್ತು ತಿಳಿವಳಿಕೆಯನ್ನು ಸಮಾಜಕ್ಕೆ ಕೊಡಿ ಎಂದರು.

ಶಿಕ್ಷಕ ಜಿ.ಬಿ. ಪಂಚಾಕ್ಷರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಬಿ.ಎಸ್‌. ಸುರೇಶ್‌ ನಾಯ್ಕ, ಚಳ್ಳಕೆರೆ ಕ್ಷೇತ್ರ ಶಿಕ್ಷಣಾ ಧಿಕಾರಿ ಕೆ.ಎಸ್‌. ಸುರೇಶ್‌, ನಾಗಭೂಷಣ, ನಿವೃತ್ತ ಶಿಕ್ಷಕ ಕೆ. ಮಂಜುನಾಥ ನಾಯ್ಕ, ಶಿಕ್ಷಕ ಚಂದ್ರ ನಾಯ್ಕ, ವಿಷಯ ಪರಿವೀಕ್ಷಕ ಮಹಲಿಂಗಪ್ಪ ವೇದಿಕೆಯಲ್ಲಿದ್ದರು. ಶಿಕ್ಷಕಿ ಶಿಲ್ಪಾ ಪ್ರಾರ್ಥಿಸಿದರು. ಶಿಕ್ಷಕ ಶ್ರೀನಿವಾಸ ರೆಡ್ಡಿ ಸ್ವಾಗತಿಸಿದರು.

ಟಾಪ್ ನ್ಯೂಸ್

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ ಭವಿಷ್ಯ ನುಡಿದ ಅಠಾವಳೆ

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ: ಭವಿಷ್ಯ ನುಡಿದ ಅಠಾವಳೆ

cm

ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ

1-asads

ಕೋವಿಡ್ ರೂಪಾಂತರ: ಮಹಿಳಾ ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳು ರದ್ದು

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾನ ಕಾನೂನು-ನ್ಯಾಯ ಕಲ್ಪಿಸಿದ ಸಂವಿಧಾನ

ಸಮಾನ ಕಾನೂನು-ನ್ಯಾಯ ಕಲ್ಪಿಸಿದ ಸಂವಿಧಾನ

ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ

hiriyooru news

ಉಡುವಳ್ಳಿ ಕೆರೆಗೆ ಮಾಜಿ ಸಚಿವ ಸುಧಾಕರ್‌ ಬಾಗಿನ ಅರ್ಪಣೆ

hosapete news

ಪ್ರಕಾಶ ನಗರದಲ್ಲಿ ಸ್ಪಚ್ಚತೆ ಮರೀಚಿಕೆ-ಆಕ್ರೋಶ

chitradurga news

ಜಂತುಹುಳು ಬಾಧೆ ನಿವಾರಣೆಗೆ ಶ್ರಮಿಸಿ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ಬಂಟ್ವಾಳ : ಇತ್ತಂಡಗಳ ಹೊಡೆದಾಟ, ನಾಲ್ವರು  ಪೋಲೀಸರ ವಶಕ್ಕೆ

ಬಂಟ್ವಾಳ : ಇತ್ತಂಡಗಳ ನಡುವೆ ಹೊಡೆದಾಟ, ನಾಲ್ವರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.