ಕೆರೆಯಾಗಲಹಳ್ಳಿಯಲ್ಲಿ ಕೋವಿಡ್ ಪ್ರಕರಣ ಪತ್ತೆ
Team Udayavani, Jul 3, 2020, 12:53 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಳಲ್ಕೆರೆ: ತಾಲೂಕಿನ ಕೆರೆಯಾಗಲಹಳ್ಳಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್-19 ವೈರಸ್ ಸೋಂಕು ಪತ್ತೆಯಾಗಿದೆ.
ದಾವಣಗೆರೆ ಮೂಲದ ವ್ಯಕ್ತಿಯೊಬ್ಬ ತುಮಕೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಂಗಿಯನ್ನು ನೋಡಿಕೊಂಡು ಹೋಗುವ ನಿಟ್ಟಿನಲ್ಲಿ ಕೆರೆಯಾಗಲಹಳ್ಳಿಗೆ ಬಂದಾಗ ಅನಾರೋಗ್ಯಕ್ಕೀಡಾಗಿದ್ದ. ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ವೈರಸ್ ಸೋಂಕಿರುವುದು ದೃಢಪಟ್ಟಿದೆ ಎನ್ನಲಾಗಿದೆ.
ಆ ವ್ಯಕ್ತಿಯ ಮನೆಯಲ್ಲಿದ್ದ 9 ಜನರನ್ನು ಉಪ್ಪರಿಗೇನಹಳ್ಳಿಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿದೆ ಹಾಗೂ ಮನೆ ಇರುವ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್