ಕಾನೂನು-ಸಂವಿಧಾನದ ಅರಿವು ಅಗತ್ಯ: ನ್ಯಾ| ಪ್ರೇಮಾ

ಕುಗ್ರಾಮಗಳ ಜನರಲ್ಲೂ ಕಾನೂನು ಸಾಕ್ಷರತೆ ಮೂಡಿಸುವುದು ಮುಖ್ಯ ಧ್ಯೇಯ

Team Udayavani, Mar 13, 2020, 5:19 PM IST

13-March-29

ಹೊಳಲ್ಕೆರೆ: ಸಂವಿಧಾನದ ಪರಿಕಲ್ಪನೆ ಹಾಗೂ ಕಾನೂನುಗಳ ಮಹತ್ವದ ಅರಿವಿಲ್ಲದೇ ಇರುವುದರಿಂದ ಗ್ರಾಮೀಣ ಪ್ರದೇಶ ಜನರು ಕಾನೂನುಬದ್ಧವಾಗಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಪ್ರತಿಯೊಬ್ಬರಿಗೂ ಕಾನೂನು ಮತ್ತು ಸಂವಿಧಾನ ಮಹತ್ವಗಳ ಅರಿವು ಮೂಡಿಸುವುದು ಅಗತ್ಯ ಎಂದು ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೇಮಾ ವಸಂತ ರಾವ್‌ ಪವಾರ್‌ ಹೇಳಿದರು.

ತಾಲೂಕಿನ ಬೋರೆನಹಳ್ಳಿ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಕಾನೂನು ಸಾಕ್ಷರತಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನಬದ್ಧವಾಗಿ ಎಲ್ಲರೂ ಸರ್ವ ಸಮಾನರು. ಸಂವಿಧಾನಬದ್ಧವಾಗಿರುವ ಹಕ್ಕುಗಳನ್ನು ಅನುಭವಿಸುವ ನಾವು, ಕರ್ತವ್ಯಗಳನ್ನೂ ತಪ್ಪದೇ ಪಾಲನೆ ಮಾಡಬೇಕೆಂದರು. ಜನರನ್ನು ಅಕ್ಷರಸ್ಥರನ್ನಾಗಿ ಮಾಡಿ ನ್ಯಾಯಿಕ ಸೌಲಭ್ಯಗಳನ್ನು ಮನೆಬಾಗಿಲಿಗೆ ತಲುಪಿಸಬೇಕಿದೆ. ಈ ನಿಟ್ಟಿನಲ್ಲಿ ತಾಲೂಕಿನ ಕುಗ್ರಾಮಗಳಿಗೆ ಕಾನೂನು ಸಾಕ್ಷರತಾ ಅಭಿಯಾನದ ಮೂಲಕ ನ್ಯಾಯಾಧಿಧೀಶರು, ನ್ಯಾಯವಾದಿಗಳು, ಸರ್ಕಾರಿ ಅಧಿಕಾರಿಗಳು ತೆರಳಿ ಜನರಲ್ಲಿ ಕಾನೂನು ಅರಿವು ಮೂಡಿಸುತ್ತಿದ್ದಾರೆ. ಜನನ ಮತ್ತು ಮರಣ, ಐಎಂವಿ, ಅಸ್ತಿ ಹಕ್ಕು, ಜೀವನಾಂಶ, ಮಾಹಿತಿ ಹಕ್ಕು ಅಧಿನಿಯಮ, ಮೂಲಭೂತ ಹಕ್ಕುಗಳು, ನೋಂದಣಿ ಕಾಯ್ದೆ, ಅಳತೆ ಗಡಿ ಗುರುತಿನ ಕಾಯ್ದೆ, ಮಹಿಳಾ ಶೋಷಣೆ, ಮಕ್ಕಳ ಹಕ್ಕುಗಳ ರಕ್ಷಣೆ, ಫೋಕ್ಸೋ, ಪೊಲೀಸ್‌ ಕಾಯ್ದೆ ಸೇರಿದಂತೆ ವಿವಿಧ ಸಾಮಾನ್ಯ ಕಾನೂನುಗಳ ಬಗ್ಗೆ ತಿಳಿಸಿಕೊಡಲಾಗುತ್ತಿದೆ ಎಂದರು.

ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ವಿ. ರವಿಕುಮಾರ್‌ ಮಾತನಾಡಿ, ಕಾನೂನು ಜನರ ಪಾಲಿಗೆ ಕಬ್ಬಿಣದ ಕಡಲೆ ಎನ್ನುವ ಭಾವನೆ ಇದೆ. ಉಳ್ಳವರ ಪರ ನ್ಯಾಯ ಎನ್ನುವ ಕಲ್ಪನೆ ಸರಿಯಲ್ಲ. ನೊಂದ ಪ್ರತಿಯೊಬ್ಬರೂ ನ್ಯಾಯವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಕಾನೂನುಬದ್ಧವಾಗಿ ಜೀವನ ನಡೆಸಲು ಸಾಮಾನ್ಯ ಕಾನೂನಿನ ಅರಿವು ಹೊಂದಿರಬೇಕು ಇಲ್ಲವಾದಲ್ಲಿ ಅನ್ಯಾಯ, ಶೋಷಣೆ, ಅಪರಾಧಗಳಿಗೆ ಸಿಲುಕಿಕೊಂಡು ತೊಂದರೆ ಪಡಬೇಕಾಗುತ್ತದೆ. ಹಾಗಾಗಿ ಯುವಕರು, ಮಹಿಳೆಯರು ಕಾನೂನಿನ ಸಾಮಾನ್ಯ ಜ್ಞಾನ ಪಡೆದುಕೊಳ್ಳಲು ಕಾನೂನು ಸಾಕ್ಷರತಾ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಜಿ.ಈ. ರಂಗಸ್ವಾಮಿ ಮಾತನಾಡಿ, ತಾಲೂಕಿನಲ್ಲಿರುವ ಪ್ರತಿಯೊಬ್ಬರೂ ಕಾನೂನುಬದ್ಧ ಜೀವನ ನಡೆಸಲು ಅನುವಾಗುವಂತೆ ಕಾನೂನು ಸಾಕ್ಷರತೆಯನ್ನು ಬಿತ್ತಲಾಗುತ್ತಿದೆ. ಸಾರ್ವಜನಿಕರು ಸಾಕ್ಷರತಾ ಅಭಿಮಾನದ ಸದುಪಯೋಗ ಪಡೆಯಬೇಕು ಎಂದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಕೆ. ಶಿವಮೂರ್ತಿ ಮಾತನಾಡಿ, ಕಾನೂನಿನ ಅರಿವಿಲ್ಲದೆ ಜನರು ಸಾಕಷ್ಟು ಅಪರಾಧಗಳಲ್ಲಿ ಭಾಗಿಯಾಗುತ್ತಿದ್ದರು. ಇತ್ತೀಚೆಗೆ ಕಾನೂನಿನ ಅರಿವು ಜನರಲ್ಲಿ ಮೂಡುತ್ತಿದೆ. ಮೋಟಾರು ವಾಹನ ಕಾಯ್ದೆಯಡಿ ಬರುವ ವಾಹನಗಳ ಮಾಲೀಕರು ಕಡ್ಡಾಯವಾಗಿ ಡಿಎಲ್‌, ವಿಮೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಜಯಸಿಂಹ, ಹಿರಿಯ ವಕೀಲರಾದ ಜಿ.ಎಚ್‌. ಶಿವಕುಮಾರ್‌, ಆರ್‌.ಎಂ. ಓಂಕಾರಮೂರ್ತಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಆರ್‌. ಜಗದೀಶ್‌, ತಾಪಂ ಸದಸ್ಯ ಪರಮೇಶ್ವರಪ್ಪ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಕೀಲರಾದ ಎಸ್‌. ವೇದಮೂರ್ತಿ, ಬಿ.ಎನ್‌ .ಪ್ರಶಾಂತ್‌, ಕೆ. ಸತ್ಯನಾರಾಯಣ, ರಮೇಶ್‌, ಪಿ.ಆರ್‌. ರವಿ, ಟಿ. ವಿಜಯ್‌, ಪ್ರಕಾಶ್‌, ಎಂ.ಪ್ರಸನ್ನಕುಮಾರ್‌, ಆರ್‌. ಹನುಮಂತಪ್ಪ, ಬಸವರಾಜ್‌ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.