
ಜೆಡಿಎಸ್ 150 ಸ್ಥಾನ ಗೆದ್ದರೆ ರಾಜ್ಯ ತ್ಯಜಿಸುವೆ: ಜಮೀರ್
Team Udayavani, Apr 10, 2018, 6:25 AM IST

ಹಿರಿಯೂರು: “ನನ್ನ ಅಪ್ಪನ ಮೇಲೆ ಆಣೆ ಮಾಡುತ್ತೇನೆ, ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ 150 ಸ್ಥಾನಗಳನ್ನು ಗೆದ್ದರೆ ಈ
ರಾಜ್ಯವನ್ನೇ ಬಿಟ್ಟು ಹೋಗುತ್ತೇನೆ’.
ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದರೆ ರುಂಡ ಕತ್ತರಿಸಿಕೊಳ್ಳುವುದಾಗಿ ಶಪಥಗೈದಿದ್ದ ಮಾಜಿ ಶಾಸಕ ಜಮೀರ್ ಅಹಮ್ಮದ್, ಸೋಮವಾರ ಹಿರಿಯೂರಿನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾಡಿದ ಮತ್ತೂಂದು ಪ್ರತಿಜ್ಞೆ.
ಸಭೆಯಲ್ಲಿ ಮಾತನಾಡಿದ ಜಮೀರ್, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡುತ್ತಿದ್ದಾರೆ. ಆದರೆ ಇದು ಎಂದಿಗೂ ಸಾಧ್ಯವಿಲ್ಲ.
ಜೆಡಿಎಸ್ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಕೇವಲ 120 ಕೋಟಿ ರೂ., ಬಿಜೆಪಿ ಸರ್ಕಾರದ ಅವಧಿಯಲ್ಲಿ 290 ಕೋಟಿ ರೂ. ಅನುದಾನ ನೀಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸುಮಾರು 3,150 ಕೋಟಿ ರೂ. ಅನುದಾನ ನೀಡಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಬಣ್ಣಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತಿಗೂ ಹುಲಿ. ಸೋಲುವ ಭಯ ಇರುವುದರಿಂದ ಕುಮಾರಸ್ವಾಮಿ ಎರಡು ಕ್ಷೇತ್ರಗಳಿಂದ
ಸ್ಪರ್ಧಿಸುವುದಾಗಿ ಹೇಳುತ್ತಿದ್ದಾರೆಂದು ಲೇವಡಿ ಮಾಡಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ನನ್ನ ರಾಜಕೀಯ ಗುರುಗಳಿದ್ದಂತೆ, ಅವರನ್ನು ಮರೆಯುವುದಿಲ್ಲ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು