ಸಮರ್ಪಕವಾಗಿ ಬಳಕೆಯಾಗದ ಅನುದಾನ: ಜಿಪಂ ಅಧ್ಯಕ್ಷೆ ಬೇಸರ

Team Udayavani, Jul 7, 2020, 5:20 PM IST

ಸಮರ್ಪಕವಾಗಿ ಬಳಕೆಯಾಗದ ಅನುದಾನ: ಜಿಪಂ ಅಧ್ಯಕ್ಷೆ ಬೇಸರ

ಮೊಳಕಾಲ್ಮೂರು: ಬರಪೀಡಿತ ಹಿಂದುಳಿದ ತಾಲೂಕಿನ ಅಭಿವೃದ್ಧಿಗೆ ಕಲ್ಪಿಸಿರುವ 6 ಕೋಟಿ ರೂ.ಅನುದಾನವನ್ನು ಇಲಾಖಾಧಿಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳದೆ ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ ಎಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಪಂಚಾಯತ್‌ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಪಂ ಪಿ.ಆರ್‌.ಇ.ಡಿ ಯೋಜನೆಯಲ್ಲಿಯೇ ಸುಮಾರು 40 ಲಕ್ಷಕ್ಕೂ ಅಧಿಕ ಅನುದಾನವನ್ನು ಸರ್ಕಾರಕ್ಕೆ ವಾಪಸ್‌ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಸುಮಾರು 25 ಕೋಟಿ ರೂ.ಗಿಂತ ಹೆಚ್ಚಿನ ಅನುದಾನ ಲ್ಯಾಪ್ಸ್‌ ಆಗಿದೆ. ಇಲಾಖಾಧಿಕಾರಿಗಳು ಯಾವುದೇ ಕಾರಣ ನೀಡದೆ ಜವಾಬ್ದಾರಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ತ್ವರಿತವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು ಎಂದು ಸೂಚಿಸಿದರು.

ಜಿಪಂ ಎಇಇ ನಾಗರಾಜ್‌ ಮಾತನಾಡಿ, ಖಜಾನೆಗೆ ಬಿಲ್‌ಗ‌ಳನ್ನು ತಡವಾಗಿ ಕಳುಹಿಸಿದ್ದರಿಂದ ಅನುದಾನ ಲ್ಯಾಪ್ಸ್‌ ಆಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ತಡವಾಗಿದೆ. 8.65 ಕೋಟಿ ರೂ. ಅನುದಾನದಲ್ಲಿ 123 ಕಾಮಗಾರಿಗಳನ್ನು ಪೂರ್ಣಗೊಳಿಸಿ 2.30 ಕೋಟಿ ರೂ. ಬಿಲ್‌ ಮಾಡಲಾಗಿದೆ. ಉಳಿದ ಸುಮಾರು 6 ಕೋಟಿ ರೂ.ಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದರು.

ಜಿಪಂ ಸದಸ್ಯ ಡಾ| ಬಿ. ಯೋಗೇಶ್‌ಬಾಬು ಮಾತನಾಡಿ, ಜಿಪಂ ಸದಸ್ಯರ ಗಮನಕ್ಕೆ ತಾರದೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವಲ್ಲಿ ವಿಫಲರಾಗಿದ್ದೀರಿ. ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾಹಿತಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ತಾಕೀತು ಮಾಡಿದರು. ಜಿಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಮುಂಡ್ರಿಗಿ ನಾಗರಾಜ್‌ ಮಾತನಾಡಿ, ಹಾನಗಲ್‌ ಜಿಪಂ ಕ್ಷೇತ್ರದಲ್ಲಿ ಸುಮಾರು 5 ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿರುವುದು ಸೇರಿದಂತೆ ಇನ್ನಿತರ ಕಡೆಗಳಲ್ಲಿ 27 ಘಟಕಗಳು ಸ್ಥಗಿತವಾಗಿದೆ. ಕೂಡಲೇ ದುರಸ್ತಿಗೊಳಿಸಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.

ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್‌ಬಾಬು ಮಾತನಾಡಿ ಕೋವಿಡ್‌-19 ಪರಿಣಾಮ ತಾಲೂಕಿನಲ್ಲಿ ಎಷ್ಟು ಪಾಸಿಟಿವ್‌ ಇದೆ ಎಂಬುದನ್ನು ಪತ್ತೆ ಹಚ್ಚಿ ಕೋವಿಡ್ ಹರಡದಂತೆ ಜಾಗ್ರತೆ ವಹಿಸಬೇಕೆಂದರು.  ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ ಮಾತನಾಡಿ, ತಾಲೂಕು ಆಸ್ಪತ್ರೆಗೆ ಆ್ಯಂಬ್ಯುಲೆನ್ಸ್‌ ಮತ್ತು ಎಕ್ಸ್‌ರೇ ಮಿಷನ್‌ ಗಳು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದರು. ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಜಿಪಂ ಉಪಾಧ್ಯಕ್ಷೆ ಎನ್‌

.ಪಿ. ಸುಶೀಲಮ್ಮ, ತಾಪಂ ಅಧ್ಯಕ್ಷೆ ಬೋರಮ್ಮ, ಉಪಾಧ್ಯಕ್ಷೆ ಚನ್ನಮ್ಮ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರೇಷ್ಮೆ ವೀರೇಶ್‌, ತಾಪಂ ಇಒ ಪ್ರಕಾಶ್‌, ವಿವಿಧ ಇಲಾಖಾಧಿಕಾರಿಗಳು ಮತ್ತು ಪಿಡಿಒಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.