ಕೋವಿಡ್ ಸೋಂಕು ಹೆಚ್ಚಳ ಅಪಾಯಕಾರಿ
Team Udayavani, May 15, 2021, 4:47 PM IST
ಚಳ್ಳಕೆರೆ: ಎರಡನೇ ಹಂತದ ಕೊರೊನಾ ನಿಯಂತ್ರಣದಲ್ಲಿ ತಾಲೂಕು ಆರೋಗ್ಯ ಇಲಾಖೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಆದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದ್ದರಿಂದ ಕೊರೊನಾ ನಿಯಂತ್ರಿಸಲು ತಾಲೂಕು ಮಟ್ಟದ ಅಧಿಕಾರಿಗಳು ಜಾಗ್ರತರಾಗಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಸೂಚಿಸಿದರು.
ಶುಕ್ರವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಬಸವ ಜಯಂತಿ ನಂತರ ನಡೆದ ಕೊರೊನಾ ನಿಯಂತ್ರಣ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗಗಳಲ್ಲೂ ಕೊರೊನಾದಿಂದ ಮರಣಹೊಂದುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈ ಬೆಳವಣಿಗೆಗೆ ಅಪಾಯ ಮತ್ತು ಆತಂಕಕಾರಿ ಎಂದರು.
ತಾಲೂಕು ಆಕ್ಸಿಜನ್ ಪೂರೈಕೆ ನೋಡಲ್ ಅಧಿಕಾರಿ, ತಾಪಂ ಇಒ ಪ್ರಕಾಶ್ ಮಾತನಾಡಿ, ಗ್ರಾಮೀಣ ಭಾಗದ ಚರಂಡಿ ಹಾಗೂ ರಸ್ತೆಗಳ ಸ್ವತ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಂದು ಗ್ರಾಮದಲ್ಲೂ ಈಗಾಗಲೇ ಸೋಡಿಯಂ ದ್ರಾವಣವನ್ನು ಸಿಂಪಡಿಸಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ್ ಮಾತನಾಡಿ, ನಗರದಲ್ಲಿ ಮೃತಪಟ್ಟ ಕೊರೋನಾ ಪಾಸಿಟಿವ್ ಸೋಂಕಿತರನ್ನು ಗ್ರಾಮೀಣ ಭಾಗಗಳಿಗೆ ಸಾಗಿಸಲು ಸೂಕ್ತ ವ್ಯವಸ್ಥೆ ಇಲ್ಲ. ಈ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಬಾಡಿಗೆ ವಾಹನವನ್ನು ಪಡೆದು ಮೃತಪಟ್ಟವರನ್ನು ಅವರ ಗ್ರಾಮಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಕೃಷ್ಣಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಗೌಡ, ಸದಸ್ಯರಾದ ಚಳ್ಳಕೆರೆಯಪ್ಪ, ವಿರೂಪಾಕ್ಷಿ, ತಾಪಂ ಸದಸ್ಯ ಎಚ್. ಸಮರ್ಥರಾಯ, ಡಿವೈಎಸ್ಪಿ ಕೆ.ವಿ. ಶ್ರೀಧರ್, ಇನ್ಸ್‌ಸ್ಟೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ, ಬಿಇಒ ಕೆ.ಎಸ್. ಸುರೇಶ್, ಪೌರಾಯುಕ್ತ ಪಿ. ಪಾಲಯ್ಯ, ಇಂಜಿನಿಯರ್ ವಿಜಯಭಾಸ್ಕರ್, ನಗರಸಭೆ ಮಾಜಿ ಸದಸ್ಯ ಎಚ್.ವಿ. ಪ್ರಸನ್ನಕುಮಾರ್, ಕೆ.ಎಂ. ಜಗದೀಶ್, ಆರ್. ಪ್ರಸನ್ನಕುಮಾರ್, ಹೂವಿನ ಜಗದೀಶ್, ಸ್ವಾಮಿ, ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್
ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು
ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ಹೊಸ ಸೇರ್ಪಡೆ
ಕರ್ನಾಟಕ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ
ನೀರಿನ ಬಿಲ್ ವಿತರಣೆ ಮತ್ತೆ ಹೊರಗುತ್ತಿಗೆಗೆ!
ಹಿಂದೂ ದೇವತೆಗಳ ಫೋಟೋಗಳಿರುವ ಪೇಪರ್ ಪ್ಯಾಕ್ ನಲ್ಲಿ ಕೋಳಿ ಮಾಂಸ ಮಾರಾಟ, ವ್ಯಕ್ತಿ ಬಂಧನ
ಉಳ್ಳಾಲದಲ್ಲಿ ಮಳೆ ಅವಾಂತರ: 20ಕ್ಕೂ ಅಧಿಕ ಮನೆಗಳು ಜಲಾವೃತ; ಮನೆಗೆ ಮರ ಬಿದ್ದು ಹಾನಿ
ಭಾರತದಲ್ಲಿ 24ಗಂಟೆಯಲ್ಲಿ 13,086 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಹೆಚ್ಚಳ