ಬಿಸಿಯೂಟ ತಯಾರಕರ ವೇತನ ಹೆಚ್ಚಿಸಿ

•ಒಂದೂವರೆ ದಶಕದಿಂದ ಕೆಲಸ ಮಾಡುತ್ತಿದ್ದರೂ ಬೇಡಿಕೆ ಈಡೇರಿಕೆಗೆ ಸರ್ಕಾರದ ನಿರ್ಲಕ್ಷ್ಯ

Team Udayavani, Aug 4, 2019, 12:56 PM IST

cd-tdy-1

ಚಿತ್ರದುರ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಚಿತ್ರದುರ್ಗ: ಬಿಸಿಯೂಟ ವ್ಯವಸ್ಥೆಯನ್ನು ಖಾಸಗಿಯವರಿಗೆ ವಹಿಸುವುದನ್ನು ವಿರೋಧಿಸಿ ಹಾಗೂ ಬಿಸಿಯೂಟ ತಯಾರಕರಿಗೆ ಕನಿಷ್ಠ ವೇತನ ಜಾರಿಗೊಳಿಸಲು ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಮುಖ್ಯ ರಸ್ತೆಯಿಂದ ಮೆರವಣಿಗೆ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ ತಲುಪಿದ ಬಿಸಿಯೂಟ ತಯಾರಕರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಒಂದೂವರೆ ದಶಕದಿಂದ ಕೆಲಸ ಮಾಡುತ್ತಿದ್ದಾರೆ. ಅಡುಗೆ ತಯಾರಕರಿಗೆ ಮಾಸಿಕ 2,700 ರೂ. ಹಾಗೂ ಸಹಾಯಕಿಯರಿಗೆ 2,600 ರೂ. ಗೌರವಧನ ನೀಡಲಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ತುಂಬಾ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.

ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟ ಪೂರೈಕೆಯನ್ನು ಇಸ್ಕಾನ್‌ ಹಾಗೂ ಇತರೆ ಖಾಸಗಿ ಸಂಸ್ಥೆಗಳಿಗೆ ಕೊಡುವ ನಿರ್ಧಾರ ಕೈಬಿಡಬೇಕು. ಬಿಸಿಯೂಟ ತಯಾರಕರಿಗೆ ಕೆಲಸದ ಭದ್ರತೆ ಒದಗಿಸಬೇಕು. ಜತೆಗೆ ಶಾಲಾ ಸಿಬ್ಬಂದಿಯಾಗಿ ಪರಿವರ್ತಿಸಬೇಕು. ನಮ್ಮನ್ನು ಕಾರ್ಮಿಕರಾಗಿ ಪರಿಗಣಿಸಿ ಕಾರ್ಮಿಕ ಕಾಯ್ದೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಎಐಟಿಯುಸಿ ಮುಖಂಡರಾದ ಬಿ. ಬಸವರಾಜಪ್ಪ, ಜಿ.ಸಿ. ಸುರೇಶ್‌ಬಾಬು, ಟಿ.ಆರ್‌. ಉಮಾಪತಿ, ಕೆ.ಇ. ಸತ್ಯಕೀರ್ತಿ, ಗಣೇಶ್‌, ಸುವರ್ಣಮ್ಮ, ರಜೀಯಾ, ಪರ್ವೀನ್‌ ತಾಜ್‌, ಶಾರದಮ್ಮ, ಲತಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಮುಖ ಬೇಡಿಕೆಗಳು: ಬಿಸಿಯೂಟ ತಯಾರಕರಿಗೆ ಪಿಎಫ್‌-ಇಎಸ್‌ಐ ಸೌಲಭ್ಯ ಜಾರಿಗೆ ತರಬೇಕು. ಬಿಸಿಯೂಟ ಯೋಜನೆ ಬದಲಿಗೆ ಬಿಸಿಯೂಟ ನಿರಂತರ ಕಾರ್ಯಕ್ರಮವಾಗಿ ಬದಲಿಸಬೇಕು. 60 ವರ್ಷ ದಾಟಿದ ಬಿಸಿಯೂಟ ತಯಾರಕರನ್ನು ಕೆಲಸದಿಂದ ಬಿಡುಗಡೆಗೊಳಿಸಿದಾಗ 2 ಲಕ್ಷ ರೂ. ಇಡಿಗಂಟು ನೀಡಬೇಕು. ಜತೆಗೆ ಮಾಸಿಕ 3 ಸಾವಿರ ರೂ. ಪಿಂಚಣಿ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು. ನಾಲ್ಕು ತಿಂಗಳಿನಿಂದಲೂ ವೇತನ ಇಲ್ಲದೇ ಜೀವನ ನಿರ್ವಹಣೆ ಕಷ್ಟಕರವಾಗಿದ್ದು, ಕೂಡಲೇ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.