ಮೇವು ಬ್ಯಾಂಕ್‌ ಆರಂಭಕ್ಕೆ ಒತ್ತಾಯ

Team Udayavani, Sep 17, 2019, 2:20 PM IST

cd-tdy-1

ಚಳ್ಳಕೆರೆ: ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ಅವರು ರೈತ ಸಂಘದ ಮುಖಂಡರ ಅಹವಾಲು ಆಲಿಸಿದರು.

ಚಳ್ಳಕೆರೆ: ಕಳೆದ ಹಲವಾರು ವರ್ಷಗಳಿಂದ ಮಳೆಯಾಗದ ಹಿನ್ನೆಲೆಯಲ್ಲಿ ಮೇವು ಹಾಗೂ ನೀರಿನ ಕೊರತೆ ಹೆಚ್ಚಾಗಿದೆ. ತಾಲೂಕಿನ ಎಂಟು ಗೋಶಾಲೆಗಳಲ್ಲಿ ಸಾವಿರಾರು ಜಾನುವಾರುಗಳಿಗೆ ಸರ್ಕಾರ ಆಶ್ರಯ ನೀಡಿದೆ. ಅದೇ ರೀತಿ ಗ್ರಾಮಾಂತರ ಪ್ರದೇಶಗಳಲ್ಲೂ ಮೇವು ಬ್ಯಾಂಕ್‌ ಆರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ನಂಜುಂಡಸ್ವಾಮಿ ಬಣ) ವತಿಯಿಂದ ಸೋಮವಾರ ತಾಲೂಕು ಕಚೇರಿ ಎದುರು ಧರಣಿ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ತಳಕು ಹೋಬಳಿ ವ್ಯಾಪ್ತಿಯ ದೊಡ್ಡಉಳ್ಳಾರ್ತಿ ಮತ್ತು ಕಾಲುವೇಹಳ್ಳಿ ಗ್ರಾಮಗಳಲ್ಲಿ ಗೋಶಾಲೆ ಇದೆ. ತಳಕು ಸುತ್ತಮುತ್ತಲಿನ ಗ್ರಾಮಗಳಾದ ಗಿರಿಯಮ್ಮನಹಳ್ಳಿ, ವಲಸೆ, ತಿಮ್ಮನಹಳ್ಳಿ, ಹೊಸೂರು, ಮನ್ನೇಕೋಟೆ, ಹಿರೇಹಳ್ಳಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಆದ್ದರಿಂದ ಸರ್ಕಾರ ಈ ಭಾಗದಲ್ಲಿ ಗೋಶಾಲೆ ಆರಂಭಿಸಲು ಸಾಧ್ಯವಾಗದಿದ್ದಲ್ಲಿ ಮೇವು ಬ್ಯಾಂಕ್‌ ಆರಂಭಿಸಬೇಕೆಂದು ಒತ್ತಾಯಿಸಿ ಹತ್ತು ದಿನಗಳ ಹಿಂದೆ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಮೇವು ಬ್ಯಾಂಕ್‌ ಆರಂಭವಾಗಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಜಾನುವಾರುಗಳಿಗೆ ಪ್ರತಿನಿತ್ಯ ಮೇವು ಒದಗಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ.

ಸುತ್ತಮುತ್ತಲಿನ ಪ್ರದೇಶದಲ್ಲಿ ಯಾವುದೇ ಕೆರೆ ಕಟ್ಟೆಗಳಲ್ಲಿ, ಬಾವಿಗಳಲ್ಲಿ ನೀರಿಲ್ಲದ ಕಾರಣ ಮೇವು ಸಹ ಬೆಳೆದಿಲ್ಲ. ಇದರಿಂದ ಜಾನುವಾರುಗಳು ಮೇವಿಲ್ಲದೆ ಉಪವಾಸದಿಂದ ಬಳಲುವಂತಾಗಿದೆ. ಆದ್ದರಿಂದ ಸರ್ಕಾರ ಕಡೇ ಪಕ್ಷ ಹಿರೇಹಳ್ಳಿ ಮತ್ತು ತಳಕು ಗ್ರಾಮಗಳಲ್ಲಾದರೂ ಮೇವು ಬ್ಯಾಂಕ್‌ ಪ್ರಾರಂಭಿಸಬೇಕು. ರೈತರು ತಮ್ಮ ಜಾನುವಾರುಗಳನ್ನು ರಕ್ಷಿಸಿಕೊಳ್ಳಲು ಮೇವು ಬ್ಯಾಂಕ್‌ ಮೂಲಕವಾದರೂ ಮೇವು ಖರೀದಿಸಬಹುದು. ಆದ್ದರಿಂದ ಕೂಡಲೇ ಮೇವು ಬ್ಯಾಂಕ್‌ ಆರಂಭಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರವಿಕುಮಾರ್‌ ಮಾತನಾಡಿ, ಮೇವು ಬ್ಯಾಂಕ್‌ ಸ್ಥಾಪನೆ ಕುರಿತಂತೆ ಪಶುವೈದ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಈಗಾಗಲೇ ವರದಿ ನೀಡಲಾಗಿದೆ. ಮೇವು ಲಭ್ಯವಿರುವ ಕಡೆ ಖರೀದಿಸಬೇಕಿದ್ದು, ಇಲಾಖೆಯಿಂದ ಆದೇಶ ಬಂದ ಕೂಡಲೇ ಮೇವು ಬ್ಯಾಂಕ್‌ ಆರಂಭವಾಗಲಿದೆ ಎಂ.ದು ತಿಳಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ತಿಪ್ಪೇಸ್ವಾಮಿ, ರಾಜಣ್ಣ, ಮಹಲಿಂಗಪ್ಪ, ತಮ್ಮಣ್ಣ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.