ಕಾಡುಗೊಲ್ಲ- ಮ್ಯಾಸಬೇಡರ ಸಂಸ್ಕೃತಿ ವಿಶಿಷ್ಟ

Team Udayavani, Mar 10, 2022, 5:47 PM IST

ಕಾಡುಗೊಲ್ಲ- ಮ್ಯಾಸಬೇಡರ ಸಂಸ್ಕೃತಿ ವಿಶಿಷ್ಟ

ಪರಶುರಾಂಪುರ: ಕಾಡುಗೊಲ್ಲ-ಮ್ಯಾಸಬೇಡ ಬುಡಕಟ್ಟು ಜನರು ತಮ್ಮದೇ ಆಚಾರ ವಿಚಾರ ಹಾಗೂ ಶ್ರೀಮಂತಸಂಸ್ಕೃತಿ ಹೊಂದಿದ್ದಾರೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.

ಗ್ರಾಮದ ಬಸ್‌ ನಿಲ್ದಾಣ ಬಳಿಯ ಕರಡೇರಗೊಲ್ಲರಹಟ್ಟಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಚಿತ್ರದುರ್ಗ ಜಿಲ್ಲೆ ಬುಡಕಟ್ಟು ಜನರ ತವರೂರು. ಬುಡಕಟ್ಟು ಜನರು ವರ್ಷ, ಐದು ವರ್ಷಕ್ಕೊಮ್ಮೆ ತಮ್ಮ ಕುಲದೇವರುಗಳ ಉತ್ಸವ ನೆರವೇರಿಸುತ್ತಿರುವುದು ಉತ್ತಮ ಪರಂಪರೆ. ಕೇವಲ ಉತ್ಸವ ಆಚರಿಸಿದರೆ ಸಾಲದು, ಅನಾದಿ ಕಾಲದ ಸಾಂಸ್ಕೃತಿಕ ವೀರರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಜನವಸತಿ ಪ್ರದೇಶದ ಶಾಲಾ-ಕಾಲೇಜುಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ದೇವಸ್ಥಾನ ಸಮಿತಿ ಪದಾಧಿಕಾರಿ ಕೆ. ಓಬಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ಚಳ್ಳಕೆರೆ ಕ್ಷೇತ್ರದ ಶಾಸಕರು ಗೊಲ್ಲರಹಟ್ಟಿಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಈ ಮೂಲಕ ನಮ್ಮ ಐತಿಹಾಸಿಕ ನೆಲೆಗಳು ಮತ್ತು ಸಾಸ್ಕೃತಿಕ ವೀರರ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಆರ್ಥಿಕ ನೆರವು ನೀಡಬೇಕು ಎಂದರು.

ಗ್ರಾಪಂ ಸದಸ್ಯ ದೊಡ್ಡಗೊಲ್ಲರಹಟ್ಟಿ ಕೃಷ್ಣಪ್ಪ ಮಾತನಾಡಿ, ಕರಡೇರ ಗೊಲ್ಲರ ಗುಡಿಕಟ್ಟೆಯ ಅಣ್ಣ ತಮ್ಮಂದಿರ ಮತ್ತು ನೆಂಟರಿಷ್ಟರ ಧಾರ್ಮಿಕ ಕಾರ್ಯಗಳಿಗೆ ಅನುಕೂಲವಾಗಲು ಗ್ರಾಮದ ದೇವಸ್ಥಾನ ಹಾಗೂ ಕರಿಯಣ್ಣನ ಮರಡಿಗೆ ಸುತ್ತಲೂ ಕಾಂಪೌಂಡ್‌, ಮೂಲ ಸೌಕರ್ಯ ಒದಗಿಸಿಕೊಡಬೇಕು. ಹೋಬಳಿ ಕೇಂದ್ರದಲ್ಲಿ ಎರಡು ಎಕರೆ ಸರ್ಕಾರಿ ಭೂಮಿಯನ್ನು ಗೊಲ್ಲರಿಗೆ ನೀಡಬೇಕು. ಗೊಲ್ಲ ಸಮುದಾಯದವರಿಗೆ ಕಲ್ಯಾಣಮಂಟಪ ನಿರ್ಮಿಸಿಕೊಳ್ಳಲು ಅವಕಾಶ ಕಲ್ಪಿಸಬೇಕೆಂದರು.

ಕರ್ನಾಟಕ ಹಾಗೂ ಆಂಧ್ರಪ್ರದೇಶದಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಉಂಡೆ ಮಂಡೆ, ಕಾಣಿಕೆ, ಧನ ಕನಕಗಳನ್ನು ದೇವರಿಗೆ ಅರ್ಪಿಸಿದರು. ಹರಕೆ ಹೊತ್ತ ಭಕ್ತರು ಕರಿಕಂಬಳಿ ಹಾಸಿ ಬಾಳೆಹಣ್ಣು, ಸಕ್ಕರೆ, ತುಪ್ಪದ ಮಿಶ್ರಣ ಮಾಡಿ ಮಣೇವು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಟ್ಟಿಗೌಡ ಬೋರಪ್ಪ, ಯಜಮಾನ ಈರಣ್ಣ, ಗ್ರಾಪಂ ಅಧ್ಯಕ್ಷರಾದ ಚೌಳೂರು ಚಿಕ್ಕಣ್ಣ, ಅನಿತಾ ವೆಂಕಟೇಶ, ಜಿಪಂ ಮಾಜಿ ಸದಸ್ಯ ಆರ್‌. ರಂಗಸ್ವಾಮಿ, ಎಸ್‌. ಚನ್ನಕೇಶವ, ರುದ್ರೇಶ, ಚಿತ್ತಪ್ಪ, ಗ್ರಾಪಂ ಸದಸ್ಯರಾದ ಕೃಷ್ಣಪ್ಪ, ಸರೋಜಾ, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.