ಯಾರಿಗೆ ಸಚಿವ ಸ್ಥಾನದ ಅದೃಷ್ಟ?

Team Udayavani, Aug 2, 2021, 6:23 PM IST

Karnataka Politics, Udayavani Chithradurga News

ತಿಪ್ಪೇಸ್ವಾಮಿ ನಾಕೀಕೆರೆ

ಚಿತ್ರದುರ್ಗ: ರಾಜ್ಯದ ಮುಖ್ಯಮಂತ್ರಿ ಆಯ್ಕೆ ಕಡೇ ಕ್ಷಣದವರೆಗೆ ಕುತೂಹಲ ಮೂಡಿಸಿತ್ತು. ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಈಗ ಅವರ ಸಂಪುಟದಲ್ಲಿ ಯಾರಿರುತ್ತಾರೆ ಎನ್ನುವ ಲೆಕ್ಕಾಚಾರ ಆರಂಭವಾಗಿದೆ.

ಹೊಸ ಸಂಪುಟದಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ವಿಶೇಷ ಪ್ರಾಧಾನ್ಯತೆ ಸಿಗುವ ಸಾಧ್ಯತೆಗಳ ಬಗ್ಗೆ ಜಿಲ್ಲೆಯಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಯಾವ ಶಾಸಕರಿಗೆ ಯಾವ ಕಾರಣಕ್ಕೆ ಮಂತ್ರಿಗಿರಿ ಸಿಗಬಹುದು, ಯಾರಿಗೆ ಯಾವ ಕಾರಣಕ್ಕೆ ಕೈ ತಪ್ಪಬಹುದು ಎಂಬೆಲ್ಲಾ ಪ್ಲಸ್‌ ಹಾಗೂ ಮೈನಸ್‌ ಲೆಕ್ಕಾಚಾರ ಜೋರಾಗಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಜಿಲ್ಲೆಯ ಸಂಸದ ಎ. ನಾರಾಯಣಸ್ವಾಮಿ ಅವರಿಗೆ ಈಗಾಗಲೇ ಸ್ಥಾನ ಸಿಕ್ಕಿದೆ. ಇನ್ನು ರಾಜ್ಯ ಸಚಿವ ಸಂಪುಟ ಸೇರುವ ಜಿಲ್ಲೆಯ ಅದೃಷ್ಟವಂತರು ಯಾರಾಗಲಿದ್ದಾರೆ ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆದಿದೆ.

ಸಚಿವ ಸ್ಥಾನ ಗಿಟ್ಟಿಸಲು ಪ್ರಯತ್ನ: ಬಿಎಸ್‌ ವೈ ಸಂಪುಟದಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಬಿ. ಶ್ರೀರಾಮುಲು ಅವರಿಗೆ ಜಿಲ್ಲೆಯ ಕೋಟಾದಾಡಿ ಸಚಿವ ಸ್ಥಾನ ಸಿಕ್ಕಿತ್ತು. ಇದನ್ನು ಹೊರತುಪಡಿಸಿ ಜಿಲ್ಲೆಯ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ದಟ್ಟವಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಈಗ ಬೊಮ್ಮಾಯಿ ಸಂಪುಟದಲ್ಲಾದರೂ ಜಿಲ್ಲೆಗೆ ಆದ್ಯತೆ ಸಿಗಬಹುದೇ ಎನ್ನುವ ಲೆಕ್ಕಾಚಾರ ಶುರುವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರು ತಮ್ಮ ಪ್ರಯತ್ನ ಮುಂದುವರೆಸಿದ್ದಾರೆ.

ರಾಜಕೀಯ ಅನುಭವ, ಸ್ಥಳೀಯರಿಗೆ ಆದ್ಯತೆ ನೀಡುವ ವಿಚಾರ ಬಂದಾಗ ಚಿತ್ರದುರ್ಗ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಮಹಿಳಾ ಕೋಟಾ, ಹಿಂದುಳಿದ ಗೊಲ್ಲ ಸಮುದಾಯಕ್ಕೆ ಆದ್ಯತೆ ನೀಡುವುದಾದರೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ರೇಸ್‌ನಲ್ಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಹಿನ್ನೆಲೆಯಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಈ ನಿಟ್ಟಿನಲ್ಲಿ ಅವರ ಬೆಂಬಲಿಗರು ಹೊಸದುರ್ಗದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇರಿ ಗೂಳಿಹಟ್ಟಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಈ ಬಾರಿಯಾದರೂ ಜಿಲ್ಲೆಯವರಿಗೆ ಸಚಿವ ಸ್ಥಾನ ದೊರೆಯಬಹುದೇ ಎಂಬುದು ಜನರ ಕಾತರ. ಇಲ್ಲಿಯವರೇ ಸಚಿವರಾದರೆ ಅಭಿವೃದ್ಧಿ ಕೆಲಸಗಳು ಹಾಗೂ ನೀರಾವರಿ ಯೋಜನೆಗಳಿಗೆ ಅನುಕೂಲವಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಶ್ರೀರಾಮುಲುಗೆ ದಕ್ಕುವುದೇ ಡಿಸಿಎಂ ಪಟ್ಟ

ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಬಿ. ಶ್ರೀರಾಮುಲು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದರೆ ಉಪಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪ್ರಚಾರ ಮಾಡಲಾಗಿತ್ತು. ಇದರೊಟ್ಟಿಗೆ ವಾಲ್ಮೀಕಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ನೀಡುವ ಭರವಸೆಯನ್ನೂ ಬಿಎಸ್‌ ವೈ ನೀಡಿದ್ದರು.

ಆದರೆ ಇದು ಭರವಸೆಯಾಗಿಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಈಗ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಬಿ. ಶ್ರೀರಾಮುಲು ಅವರಿಗೆ ಡಿಸಿಎಂ ಪಟ್ಟ ಬಹುತೇಕ ಗ್ಯಾರಂಟಿ ಎಂದೇ ವಿಶ್ಲೇಷಿಸಲಾಗತ್ತಿದೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.