ಶತಮಾನದ ಸಂಭ್ರಮಕ್ಕೆ ಕೊಂಡ್ಲಹಳ್ಳಿ ಶಾಲೆ ಸಜ್ಜು

ಸ್ವಾತಂತ್ರ್ಯ ಪೂರ್ವದಲ್ಲೇ ಚಿಕ್ಕ ಕೊಠಡಿಯಲ್ಲಿ ಆರಂಭಿಸಿದ್ದ ಶಾಲೆಗಣ್ಯಾತಿಗಣ್ಯರು ಭಾಗಿ

Team Udayavani, Mar 7, 2020, 1:47 PM IST

7-March-11

ಕೊಂಡ್ಲಹಳ್ಳಿ: ಮೊಳಕಾಲ್ಮೂರು ತಾಲೂಕಿನ ಮಾದರಿ ಗ್ರಾಮ ಕೊಂಡ್ಲಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನೂರು ವಸಂತ ಪೂರೈಸಿ 124 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ರಾಜ್ಯ ಸರ್ಕಾರವು 100 ವರ್ಷ ಪೂರೈಸಿದ ರಾಜ್ಯದ ನೂರು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಪಾರಂಪರಿಕ ಶಾಲೆಗಳೆಂದು ಗುರುತಿಸಿತ್ತು. ಸರ್ಕಾರವು ಶತಮಾನ ಪೂರೈಸಿರುವ ಶಾಲಾ ಕೊಠಡಿಗಳ ಸಂರಕ್ಷಣೆ ಮತ್ತು ನವೀಕರಣದ ಉದ್ದೇಶದಿಂದ ರಾಜ್ಯದ 100 ಪ್ರಾಥಮಿಕ ಶಾಲೆಗಳನ್ನು ಪಾರಂಪರಿಕ ಶಾಲೆಗಳೆಂದು ಗುರುತಿಸಿದೆ. ಇವುಗಳಲ್ಲಿ ಕೊಂಡ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದಾಗಿದೆ.

1896ರಲ್ಲಿ ಸ್ವಾತಂತ್ರ ಪೂರ್ವವೇ ಆರಂಭವಾಗಿ 124 ವರ್ಷಗಳ ಹಿಂದೆ ಗ್ರಾಮದ ಆಂಜನೇಯಸ್ವಾಮಿ ದೇಗುಲದ ಎದುರಿನ ರಸ್ತೆಯಲ್ಲಿನ ಚಿಕ್ಕ ಕೊಠಡಿಯಲ್ಲಿ ಆರಂಭವಾಗಿ 20 -25 ವರ್ಷಗಳ ನಂತರ ಗ್ರಾಮದ ಅಪ್ಪಣ್ಣಜ್ಜನವರ ಮಕ್ಕಳಾದ ಗೌಡ್ರು ತಿಪ್ಪಯ್ಯ, ಶಿವರುದ್ರಪ್ಪ, ತಿಪ್ಪಣ್ಣ ಅವರು ನೀಡಿದ 2 ಎಕರೆ ಗುಂಟೆ ನೀಡಿದ ಜಮೀನು ದಾನ ನೀಡಿದ ನಂತರ ಈಗಿನ ಶಾಲೆಯ ಸ್ಥಳದಲ್ಲಿ ಎರಡು ಕೊಠಡಿಗಳು ನಿರ್ಮಾಣಗೊಂಡು ಗ್ರಾಮಸ್ಥರ, ದಾನಿಗಳ ನೆರವಿನಿಂದ 24 ಕೊಠಡಿಗಳಿಂದ ಸಮೃದ್ಧ ಶಾಲೆಯಾಗಿ ಜಿಲ್ಲೆಯಲ್ಲಿಯೇ ಅತಿ ದೊಡ್ಡ ಗ್ರಾಮೀಣ ಶಾಲೆಯಾಗಿ ಹೊರಹೊಮ್ಮಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡಿದೆ.

ಖ್ಯಾತ ನೇತ್ರ ತಜ್ಞ ಡಾ|ಕೆ.ನಾಗರಾಜ್‌, ನಿಕಟ ಪೂರ್ವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್‌. ಕಾಂತರಾಜ್‌ ಸೇರಿದಂತೆ ಅಪಾರ ಸಂಖ್ಯೆಯಷ್ಟು ವಿವಿಧ ಇಲಾಖೆಗಳ ವಿವಿಧ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಶಾಲೆ ಬೆಳಕಾಗಿ ಬದುಕು ಭವಿಷ್ಯ ನೀಡಿದೆ.

ಮಾ.7ರಂದು ಶನಿವಾರ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತಾ ಕಾರ್ಯಗಳು ಭರದಿಂದ ನಡೆದಿವೆ. ಇದಕ್ಕಾಗಿ ಶತಮಾನೋತ್ಸವ ಸಮಿತಿ, ಎಸ್‌ಡಿಎಂಸಿ, ಹಳೆಯ ವಿದ್ಯಾರ್ಥಿಗಳ ಬಳಗ, ಗಣ್ಯರ, ಗ್ರಾಮಸ್ಥರ ಸಹಕಾರದಿಂದ ಸಮಾರಂಭ ಆಯೋಜಿಸಲಾಗಿದೆ.

ಶಾಲಾ ಕೊಠಡಿಗಳಿಗೆ ಹಾಕಿರುವ ರೈಲು ಬಂಡಿಯ ಪೇಂಟಿಂಗ್‌ ಶಾಲೆಗ ಹೊಸತನ ನೀಡಿದೆ. ಸಂಭ್ರಮಾಚರಣೆ ನಿಮಿತ್ತ ವಿವಿಧ ಶಾಲಾಭಿವೃದ್ಧಿ ಕಾರ್ಯಗಳು ಉದ್ಘಾಟನೆಗೊಳ್ಳಲಿವೆ. ಸಮಾರಂಭಕ್ಕೆ ಶಾಲೆಯು ತಳೀರು ತೋರಣ, ವಿದ್ಯುದ್ದೀಪಗಳಿಂದ ಸಿಂಗಾರಗೊಂಡು ನವ ವಧುವಿನಂತೆ ಜನಮನಸೂರೆಗೊಳ್ಳುತ್ತಿದೆ.

ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಬಾಳಿಗೆ ಬೆಳಕಾಗಿ ಉಜ್ವಲ ಭವಿಷ್ಯ ನೀಡಿರುವ ನಮ್ಮೂರಿನ ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಬ್ಬದಲ್ಲಿ ಎಲ್ಲರೂ ಕುಟುಂಬ ಸಹಿತರಾಗಿ ಭಾಗವಹಿಸಿ ಶಾಲೆಯ ಋಣವನ್ನು ನಾವೆಲ್ಲರೂ ತೀರಿಸುವ ಅಮೃತ ಘಳಿಗೆಯಲ್ಲಿ ಪಾಲ್ಗೊಳ್ಳಬೇಕು.
ಎಸ್‌.ಕೆ.ಗುರುಲಿಂಗಪ್ಪ,
ರಾಜ್ಯ ಪ್ರದೇಶ ಕುರುಬರ ಸಂಘದ ನಿರ್ದೇಶಕರು.

„ಟಿ.ರಾಮಚಂದ್ರಪ್ಪ

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.