ಪ್ರತಿಭಟನೆ ಶಾಂತಿಯುತವಾಗಿರಲಿ

Team Udayavani, Sep 27, 2020, 6:48 PM IST

ಪ್ರತಿಭಟನೆ ಶಾಂತಿಯುತವಾಗಿರಲಿ

ಸಾಂದರ್ಭಿಕ ಚಿತ್ರ

ಚಳ್ಳಕೆರೆ: ರೈತ ಸಂಘ, ಕಾರ್ಮಿಕ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳ ಆಶ್ರಯದಲ್ಲಿ ಸೆ. 28 ರಂದು ನಡೆಯಲಿರುವ ಬಂದ್‌ ಅನ್ನು ಶಾಂತಿಯುತವಾಗಿ ಮಾಡಬೇಕು ಎಂದು ಉಪವಿಭಾಗದ ಡಿವೈಎಸ್ಪಿ ಕೆ.ವಿ. ಶ್ರೀಧರ್‌ ಹೇಳಿದರು.

ಇಲ್ಲಿನ ಪೊಲೀಸ್‌ ಠಾಣೆ ಆವರಣದಲ್ಲಿ ಶನಿವಾರ ನಡೆದ ರೈತ ಸಂಘದ ಪದಾಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿ ಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಮುಷ್ಕರಕ್ಕೆ ಸಂಬಂಧಪಟ್ಟಂತೆ ಬೆಂಬಲ ನೀಡುತ್ತಿರುವ ವಿವಿಧ ಸಂಘಟನೆಗಳ ಪ್ರಮುಖರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಯಾವುದೇ ಹಂತದಲ್ಲಿ ಕಾನೂನು ಉಲ್ಲಂಘನೆಯಾಗುವುದು ಕಂಡು ಬಂದಲ್ಲಿ ಪೊಲೀಸ್‌ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ. ರೈತರ ಸಂಕಷ್ಟಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ನಡೆಸುವ ಪ್ರತಿಭಟನೆ, ಮುಷ್ಕರ, ಧರಣಿ ಸತ್ಯಾಗ್ರಹ ಎಲ್ಲವನ್ನೂ ಪೊಲೀಸ್‌ ಇಲಾಖೆ ಕಾನೂನು ಚೌಕಟ್ಟಿನಲ್ಲೇ ನೋಡಬೇಕಿದೆ ಎಂದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, ರಾಜ್ಯ ರೈತ ಸಂಘದ ಸೂಚನೆಯಂತೆ ಬಂದ್‌ಗೆ ಕರೆ ನೀಡಲಾಗಿದೆ. ಎಲ್ಲಾ ಸಂಘಟನೆಗಳು ನಮಗೆ ಬೆಂಬಲ ನೀಡಿವೆ. ನಾವು ಸಹ ಪೊಲೀಸ್‌ ಇಲಾಖೆ ನಿಯಮಗಳಿಗೆ ಗೌರವ ನೀಡುತ್ತೇವೆ. ಹಲವಾರು ವರ್ಷಗಳಿಂದ ಅನೇಕ ಕಷ್ಟಗಳನ್ನು ಎದುರಿಸಿದ ರೈತರು ನೋವಿನಲ್ಲಿದ್ದಾರೆ. ಆದ್ದರಿಂದ ರೈತರ ಪ್ರತಿಭಟನೆಗೆ ಪೊಲೀಸ್‌ ಇಲಾಖೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಮಾತನಾಡಿ, ಹಲವಾರು ವರ್ಷಗಳಿಂದ ರೈತ ಸಂಘ ಹಾಗೂ ಇತರೆ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಾ ಬಂದಿವೆ. ಆದರೆ ರೈತರು ಯಾವತ್ತೂ ಕಾನೂನನ್ನು ಕೈಗೆತ್ತಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ವೃತ್ತ ನಿರೀಕ್ಷಕ ನಲವಾಗಲು ಮಂಜುನಾಥ, ಪಿಎಸ್‌ ಐಗಳಾದ ಪಿ.ಆರ್‌. ರಾಘವೇಂದ್ರ, ಮಂಜುನಾಥ ಅರ್ಜುನ ಲಿಂಗಾರೆಡ್ಡಿ, ದೊಡ್ಡಉಳ್ಳಾರ್ತಿ ಕರಿಯಣ್ಣ, ಪ್ರಗತಿಪರ ಚಿಂತಕ ಎಸ್‌.ಎಚ್‌. ಸಯ್ಯದ್‌, ತಾಪಂ ಸದಸ್ಯ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭಾ ಸದಸ್ಯ ವೀರಭದ್ರಪ್ಪ, ಗಾಡಿ ತಿಪ್ಪೇಸ್ವಾಮಿ, ಒ. ತಿಪ್ಪೇಸ್ವಾಮಿ, ಶರಣಪ್ಪ, ಮೂಡಲಗಿರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.