ಶೈಕ್ಷಣಿಕ ಪ್ರಗತಿಗೆ ಮಠಗಳ ಕೊಡುಗೆ ಅಪಾರ: ಮಾಧುಸ್ವಾಮಿ

Team Udayavani, Sep 11, 2019, 6:53 PM IST

ಚಿತ್ರದುರ್ಗ: ಮಠಗಳ ಜೋಪಾನ ಮಾಡಿದರೆ ಸಮುದಾಯಕ್ಕೆ ಅನುಕೂಲ. ನಾಡಿನ ಶೈಕ್ಷಣಿಕ ಪ್ರಗತಿಗೆ ಮಠಗಳ ಕೊಡುಗೆ ಅಪಾರವಾಗಿವೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಮಾದಾರ‌ ಚನ್ನಯ್ಯ ಗುರುಪೀಠದಲ್ಲಿ  ಬುಧವಾರ ದಲಿತ ಮತ್ತು ಹಿಂದುಳಿದ ಮಠಾಧೀಶರ ಒಕ್ಕೂಟದ ಸಭೆ ನಡೆಯಿತು.

ಮಾದಾರ ಗುರುಪೀಠದಲ್ಲಿ ನಡೆದ ಒಕ್ಕೂಟದಿಂದ ಕಾರ್ಯಕ್ರಮದ ನೇತೃತ್ವವನ್ನು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿ ವಹಿಸಿದ್ದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು ಸಚಿವ ಮಾಧುಸ್ವಾಮಿ, ಆರೋಗ್ಯ ಸಚಿವ ಶ್ರೀ ರಾಮುಲು, ಪಂಚಾಯತ್ ರಾಜ್ ಸಚಿವ ಕೆ.ಎಸ್.‌ಈಶ್ವರಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಸಂಸದರಾದ ನಾರಾಯಣ ಸ್ವಾಮಿ, ಜಿ.ಎಂ. ಸಿದ್ದೇಶ್ವರ ಸೇರಿದಂತೆ ವಿವಿಧ ಶಾಸಕರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಸಚಿವ ಮಾಧುಸ್ವಾಮಿ, ಮಠಗಳ ಜೋಪಾನ ಮಾಡಿದರೆ ಸಮುದಾಯಕ್ಕೆ ಅನುಕೂಲ. ನಾಡಿನ ಶೈಕ್ಷಣಿಕ ಪ್ರಗತಿಗೆ ಮಠಗಳ ಕೊಡುಗೆ ಅಪಾರ. ಭೂಮಿ ತಂಪಾದರೆ ಬೇರುಗಳೆಲ್ಲಾ ತಂಪಾಗುತ್ತವೆ. ಈ ದೃಷ್ಟಿಯಲ್ಲಿ ಮಠಗಳು ಭೂಮಿ ಇದ್ದಂತೆ ಎಂದರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಮಾತನಾಡಿ, ಮಠಗಳಿಗೆ ಕೊಡುವ ಅನುದಾನ ಅವರ ವೈಯಕ್ತಿಕ ಅಲ್ಲ. ಅವರು ಕೂಡಾ ಸರ್ಕಾರದಂತೆ ಕೆಲಸ ಮಾಡುತ್ತಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಮಾತನಾಡಿ, ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡಬೇಕು, ಚಿತ್ರದುರ್ಗ ಜಿಲ್ಲೆಯ ಭದ್ರಾ ಕಾಮಗಾರಿ ತ್ವರಿತವಾಗಿ ಮುಗಿಸಿ ನೀರು ಕೊಡಬೇಕು ಎನ್ನುವುದು ಈ ಸಭೆಯ ಅಜೆಂಡಾ ಎಂದು ತಿಳಿಸಿದರು.

ದಲಿತ, ಹಿಂದುಳಿದ ‌ಮಠಾಧೀಶರ ಒಕ್ಕೂಟದ ಅಧ್ಯಕ್ಷ ನಿರಂಜನಾನಂದಪುರಿ ಶ್ರೀ, ಮಾದಾರ‌ ಚನ್ನಯ್ಯ, ವೇಮನ ಸ್ವಾಮೀಜಿ, ವಾಲ್ಮೀಕಿ ಪ್ರಸನ್ನಾನಂದಪುರಿ ಶ್ರೀ, ಕಬೀರಾನಂದ ಸ್ವಾಮೀಜಿ ಸೇರಿದಂತೆ 20 ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ