20ರಂದು ಬೃಹತ್‌ ಪ್ರತಿಭಟನಾ ಮೆರವಣಿಗೆ

ಎಸ್ಸಿ-ಎಸ್ಟಿ ಜನಸಂಖ್ಯೆ ಆಧಾರಿತ ಮೀಸಲಾತಿ ನೀಡುವಲ್ಲಿ ಸರ್ಕಾರ ವಿಫಲ: ರಘುಮೂರ್ತಿ

Team Udayavani, May 15, 2022, 4:22 PM IST

protest

ಚಳ್ಳಕೆರೆ: ರಾಜ್ಯದಲ್ಲಿ ಕಳೆದ ನೂರಾರು ವರ್ಷಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಸೂಕ್ತ ಮೀಸಲಾತಿ ಸೌಲಭ್ಯ ದೊರಕದೆ ಹಿನ್ನಡೆ ಅನುಭವಿಸುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೇಲೆ ಒತ್ತಡ ಹೇರಲು ಮೇ 20ರ ಶುಕ್ರವಾರ ಬೃಹತ್‌ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಪಾವಗಡ ರಸ್ತೆಯ ಲಕ್ಷ್ಮಮ್ಮ ತಿಪ್ಪೇಸ್ವಾಮಿ ಕಲ್ಯಾಣ ಮಂಟಪದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಳ್ಳಕೆರೆ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯ ಬಹುತೇಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡೂ ಸಮುದಾಯಗಳು ಸಾಕಷ್ಟು ಪ್ರಮಾಣದಲ್ಲಿ ನಿರಂತರ ಹೋರಾಟ ನಡೆಸಿದ್ದರೂ ಸಹ ಸರ್ಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ವಾಲ್ಮೀಕಿ ಪೀಠದ ಶ್ರೀ ಪ್ರಸನ್ನನಾನಂದ ಸ್ವಾಮೀಜಿ ಕಳೆದ ಫೆಬ್ರವರಿಯಲ್ಲೇ ಬೆಂಗಳೂರಿನಲ್ಲೇ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮೀಸಲಾತಿ ಹೋರಾಟಕ್ಕೆ ಎಲ್ಲೆಡೆ ಪಕ್ಷಬೇಧ ಮರೆತು ಬೆಂಬಲ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ತಿಂಗಳ 20ರಂದು ಬೃಹತ್‌ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ನೀಡುವ ಮೂಲಕ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ. ಪ್ರಕಾಶ್‌ಮೂರ್ತಿ ಮಾತನಾಡಿ, ವಿವಿಧ ಪಕ್ಷಗಳ ಮುಖಂಡರು ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿಯ ಬಗ್ಗೆ ನಿರ್ಲಕ್ಷ್ಯ ತಾಳಿದ್ದು ಸರಿಯಲ್ಲ. ಸರ್ಕಾರ ಮನಸು ಮಾಡಿ ಈ ಮೀಸಲಾತಿ ನೀಡಿದ್ದಲ್ಲಿ ಎರಡೂ ಜನಾಂಗಗಳಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಎರಡೂ ಸಮುದಾಯದ ಎಲ್ಲ ಹಂತದ ನಾಯಕರು ನಮ್ಮ ಬೇಡಿಕೆ ಈಡೇರುವವರೆಗೂ ನಾವೆಲ್ಲರೂ ಸಂಘಟಿತರಾಗಿ ಹೋರಾಟ ನಡೆಸೋಣ ಎಂದರು.

ನಿವೃತ್ತ ಶಿಕ್ಷಕ ಕೆ.ಸೂರನಾಯಕ ಮಾತನಾಡಿ, ಹೋರಾಟ ಸಮಿತಿ ಸಹಯೋಗದಲ್ಲಿ ಎರಡೂ ಜನಾಂಗಗಳು ಮೀಸಲಾತಿ ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಿ ಹೋರಾಟ ನಡೆಸುತ್ತಿರುವುದು ಸೂಕ್ತವಾಗಿದೆ. ಎರಡೂ ಸಮುದಾಯಗಳು ಸಂಘಟಿತರಾಗಿ ಬೀದಿಗಿಳಿದು ಹೋರಾಟ ನಡೆಸಿದರೆ ಮಾತ್ರ ಸರ್ಕಾರ ಈ ನಿಟ್ಟಿನಲ್ಲಿ ಕಾಯೋನ್ಮುಖವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ದಲಿತ ಸಂಘಟನೆಗಳ ಹೋರಾಟಗಾರರಾದ ಟಿ.ವಿಜಯಕುಮಾರ್, ಸಮರ್ಥರಾಯ, ನಗರಸಭಾ ಸದಸ್ಯ ಕೆ.ವೀರಭದ್ರಪ್ಪ, ಕೆ.ಟಿ. ಕುಮಾರಸ್ವಾಮಿ ಮುಂತಾದವರು ಹೋರಾಟದ ರೂಪುರೇಷೆಗಳ ಬಗ್ಗೆ ಮಾತನಾಡಿದರು. ಸಭೆಯಲ್ಲಿ ನಗರಸಭಾ ಸದಸ್ಯ ಬಿ.ಟಿ. ರಮೇಶ್‌ಗೌಡ, ಮಾಜಿ ಸದಸ್ಯ ಎಂ. ಚೇತನ್‌ ಕುಮಾರ್‌, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಜೆ. ವೆಂಕಟೇಶ್‌, ಮುಖಂಡರಾದ ಅಂಜಿನಪ್ಪ, ಚಂದ್ರು, ಭೀಮನಕೆರೆ ಶಿವಮೂರ್ತಿ, ಪತ್ರಕರ್ತ ಕೊರ‌್ಲಕುಂಟೆ ತಿಪ್ಪೇಸ್ವಾಮಿ, ಚೌಳೂರುಪ್ರಕಾಶ್‌, ಭರಮಣ್ಣ, ಲಕ್ಷ್ಮೀ ದೇವಿ, ಜಿ.ಟಿ. ವೀರಭದ್ರಸ್ವಾಮಿ, ಸಿ.ಟಿ. ವೀರೇಶ್‌, ಎಲ್‌ಐಸಿ ತಿಪ್ಪೇಸ್ವಾಮಿ, ಬೆಸ್ಕಾಂ ಸಿ.ನಾಗರಾಜು ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.