ರೈತರ ಹೆಸರಿನಲ್ಲಿ ಕಾಂಗ್ರೆಸ್ ಡೋಂಗಿ ರಾಜಕಾರಣ ಮಾಡುತ್ತಿದೆ: ಶ್ರೀರಾಮುಲು
Team Udayavani, Jan 26, 2021, 11:45 AM IST
ಚಿತ್ರದುರ್ಗ: ಇಷ್ಟು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ರೈತರ ಕಷ್ಟ ಅರ್ಥವಾಗಿರಲಿಲ್ಲ. ಆದರೆ, ಈಗ ರೈತರನ್ನು ದುರ್ಬಳಕೆ ಮಾಡಿಕೊಂಡು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಎಂದೂ ರೈತರ ಪರವಾಗಿ ಹೋರಾಟ ಮಾಡಿದವರಲ್ಲ, ಈಗ ರೈತರ ನೆನಪಾಗಿದೆ. ರಾಜಕಾರಣಕ್ಕಾಗಿ ರೈತರನ್ನು ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷ ಡೋಂಗಿ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಪ್ರಚೋದನೆಯಿಂದ ರೈತರ ಪರೇಡ್ ನಡೆದಿದೆ: ಬಿ.ಸಿ ಪಾಟೀಲ್
ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ತಜ್ಞರ ಸಮಿತಿ ರಚನೆ ಮಾಡಿದೆ. ಅದರ ವರದಿ ಬಂದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ನಾವೆಲ್ಲಾ ರೈತರ ಮಕ್ಕಳು, ಕಾಯ್ದೆಯಿಂದ ರೈತರಿಗೆ ಹೇಗೆ ಲಾಭವಾಗುತ್ತದೆ ಎನ್ನುವುದು ಗೊತ್ತಿದೆ. ವೈಯಕ್ತಿಕ ಅಜೆಂಡಾ ಇಟ್ಟುಕೊಂಡು ಪ್ರತಿಭಟಿಸಲಾಗುತ್ತಿದೆ ಎಂದು ರಾಮುಲು ಹೇಳಿದರು.
2011 ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತಪರ ಬಜೆಟ್ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬೆಂಬಲ ಬೆಲೆಗಾಗಿ 1 ಲಕ್ಷ ಕೋಟಿ ನಿಧಿ ಇಟ್ಟಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ: ರಾಮ ಮಂದಿರ ನಿರ್ಮಾಣ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಗೆ ಸ್ಥಾನ ಸಿಕ್ಕಿರುವುದು ಹೆಮ್ಮೆ:ರಾಮುಲು
ಖಾತೆ ಬದಲಾದಾಗ ಸಮಾಧಾನ-ಅಸಮಧಾನ ಇದ್ದೇ ಇರುತ್ತೆ. ಎಲ್ಲವನ್ನೂ ಮುಖ್ಯಮಂತ್ರಿ ನೋಡಿಕೊಳ್ಳುತ್ತಾರೆ. ದೇಶದ ಕೆಲವೆಡೆ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಕೆಲ ಲೋಪಗಳಾಗಿವೆ. ಡ್ಯೂಪ್ಲಿಕೇಶನ್ ಹೇಗೆ ನಡೆದಿದೆ ಗೊತ್ತಿಲ್ಲ. ಎಫ್ ಐಆರ್ ಆಗಿದೆ. ತನಿಖೆ ನಂತರ ಮಾಹಿತಿ ಗೊತ್ತಾಗಲಿದೆ ಎಂದು ಕಿಸಾನ್ ಸಮ್ಮಾನ್ ಯೋಜನೆ ಅವ್ಯವಹಾರ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ