ಶಾಸಕರ ಅನರ್ಹತೆ ಪ್ರಕರಣ: ಸುಪ್ರೀಂ ತೀರ್ಪು ನಮಗೆ ಮುಖ್ಯ

Team Udayavani, Oct 26, 2019, 8:40 PM IST

ಚಿತ್ರದುರ್ಗ: ಅನರ್ಹ ಶಾಸಕರ ಕುರಿತ ತೀರ್ಪು ನಮಗೆ ಬಹಳ ಮುಖ್ಯವಾಗಿದ್ದು, ಅದಕ್ಕಾಗಿ ಕಾಯುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿದ ಶಾಸಕರ ಬಗ್ಗೆ ಹಿಂದಿನ ಸ್ಪೀಕರ್‌ ತೆಗೆದುಕೊಂಡ ನಿರ್ಧಾರದ ಬಗ್ಗೆ ನಮ್ಮ ಅಸಮಾಧಾನವಿದೆ. ಈ ತೀರ್ಪು ಸರಿಯಲ್ಲ ಎನ್ನುವುದು ಮೊದಲಿನಿಂದಲೂ ನಮ್ಮ ವಾದವಾಗಿತ್ತು ಎಂದರು.

ವ್ಯಾಕರಣ ಸರಿಯಿಲ್ಲ
ಸ್ಪೀಕರ್‌ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಏಕವಚನ ಬಳಕೆ ಮಾಡಿರುವುದು ಸರಿಯಲ್ಲ. ನಮಗೂ ಏಕವಚನ, ಬಹುವಚನಗಳು ಗೊತ್ತು. ಆದರೆ ಸಿದ್ದರಾಮಯ್ಯ ವ್ಯಾಕರಣದ ಮೇಷ್ಟ್ರು. ಅವರಿಗೆ ಏಕವಚನ ಮಾತ್ರ ಗೊತ್ತಿದೆ. ವ್ಯಾಕರಣದ ವ್ಯತ್ಯಾಸ ಗೊತ್ತಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ಸರಕಾರ ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರೈತರ ಹಿತ ಕಾಯುವುದು ನಮ್ಮ ಮೊದಲ ಆದ್ಯತೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಕೇಂದ್ರ ಸರಕಾರಕ್ಕೆ ತಿಳಿಸುತ್ತೇವೆ. ರೈತರಿಗೆ ತೊಂದರೆಯಾಗದಂತೆ ಕೇಂದ್ರದ ಗಮನ ಸೆಳೆಯುತ್ತೇವೆ ಎಂದರು.

ನೆರೆಯಿಂದ ಕುಸಿದು ಬಿದ್ದಿರುವ ಶಾಲೆಗಳ ಪುನಶ್ಚೇತನಕ್ಕೆ 540 ಕೋ. ರೂ. ಬೇಕಾಗಬಹುದು. ಈ ಶಾಲೆಗಳನ್ನು ಸರಿಪಡಿಸುವುದು ನಮ್ಮ ಮೊದಲ ಆದ್ಯತೆ. ಶತಮಾನ ಕಳೆದಿರುವ ಹೆರಿಟೇಜ್‌ ಶಾಲೆಗಳ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ