ಕೇಂದ್ರದಿಂದ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ತಿಪ್ಪಾರೆಡ್ಡಿ


Team Udayavani, Sep 5, 2017, 3:03 PM IST

05-SHIV-7.jpg

ಚಿತ್ರದುರ್ಗ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆ ಆದ ಮೇಲೆ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿ ಶಕ್ತಿ ತುಂಬಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸೋಮವಾರ ಹಮ್ಮಿಕೊಂಡಿದ್ದ ತಾಲೂಕುಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಕೇಂದ್ರ ಸರ್ಕಾರ ಅನುದಾನ ನೀಡುವುದರ ಜೊತೆಯಲ್ಲಿ ಇದಕ್ಕೆ ಪೂರಕ ಎನ್ನುವಂತೆ ಕ್ರೀಡಾಪಟು ರಾಜವರ್ಧನ್‌ ಸಿಂಗ್‌ ರಾಥೋಡ್‌ ಅವರಿಗೆ ಕ್ರೀಡಾ ಮತ್ತು ಯುವಜನ ಇಲಾಖೆಯ ಜವಾಬ್ದಾರಿ ನೀಡುವ ಮೂಲಕ ಕ್ಷೇತ್ರದ ಏಳ್ಗೆಗೆ ಅನುಕೂಲ ಮಾಡಲಾಗಿದೆ. ಯಾವುದೇ ಕ್ಷೇತ್ರದಲ್ಲಿ ತಿಳಿದವರಿಗೆ ಹೊಣೆ ನೀಡಿದಾಗ ಮಾತ್ರ ಸಾಧನೆ ಸಾಧ್ಯ. ಮುಂಬರುವ ದಿನಗಳಲ್ಲಿ ಒಲಂಪಿಕ್ಸ್‌ ಗೇಮ್‌ನಲ್ಲಿ ಭಾರತ ಸಾಧನೆ ಮಾಡುವ ಸೂಚನೆ ಸ್ಪಷ್ಟವಾಗುತ್ತಿದೆ ಎಂದರು.

ಕೇಂದ್ರಸರ್ಕಾರವು ಅವಕಾಶ ವಂಚಿತ ಕ್ರೀಡಾ ಪಟುಗಳು, ಸಾಂಸ್ಕೃತಿಕ ಪ್ರತಿಭೆ ಗುರುತಿಸಲು ಪ್ರತ್ಯೇಕ ಆಪ್‌ ಅಭಿವೃದ್ಧಿ ಪಡಿಸಿದೆ. ಉತ್ತಮ ಸಾಧನೆ ಮಾಡಬೇಕು ಎನ್ನುವವರಿಗೆ ಬೆಂಬಲ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕ್ರೀಡೆಗಳು ಎಂದರೆ ಕ್ರಿಕೆಟ್‌, ಟೆನ್ನಿಸ್‌, ಬ್ಯಾಡ್ಮಿಂಟನ್‌ ಮಾತ್ರ ಎನ್ನುವಂತಾಗಿರುವುದು ಬೇಸರದ ಸಂಗತಿ. ಆ ಕ್ರೀಡೆಗಳಿಗೂ ಪ್ರೋತ್ಸಾಹ ನೀಡಲಿ. ಆದರೆ, ಗ್ರಾಮೀಣ ಕ್ರೀಡೆಗಳನ್ನು ಕಡೆಗಣಿಸುತ್ತಿರುವುದು ಎಷ್ಟು ನ್ಯಾಯ ಎಂದು ಪ್ರಶ್ನಿಸಿದ ಅವರು ಗ್ರಾಮೀಣ ಕ್ರೀಡೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಭಾರತ ದೇಶದ ಜನಸಂಖ್ಯೆ ವಿಶ್ವ ಮಟ್ಟದಲ್ಲಿ 2ನೇ ಸ್ಥಾನ ಪಡೆದಿದ್ದರೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಪ್ರಾಥಮಿಕ, ಪ್ರೌಢಶಾಲಾ ಹಂತದಲ್ಲೇ ದೈಹಿಕ ಶಿಕ್ಷಕರ ನೇಮಕ ಮಾಡಬೇಕು ಎಂದರು. ಕ್ರೀಡೆಗಳಿಗೆ ಜನಪ್ರತಿನಿಗಳು, ಕ್ರೀಡಾಸಕ್ತರ ಪ್ರೋತ್ಸಾಹದ ಕೊರತೆಯೇ ಬಹುಮುಖ್ಯ  ಕಾರಣ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ಪ್ರೋತ್ಸಾಹಿಸಿದಾಗ ಮಾತ್ರ ಬಲಿಷ್ಠ ಕ್ರೀಡಾಪಟುಗಳನ್ನು ರೂಪಿಸಿ ಒಲಿಂಪಿಕ್‌ನಲ್ಲಿ ಪದಕ ಗೆಲ್ಲಲು ಸಾಧ್ಯ ಎಂದು  ಹೇಳಿದರು.

ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ. ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಸಮಾನ ಮಸ್ಥಿತಿಯಲ್ಲಿರಬೇಕು. ಕ್ರೀಡೆಗಳಲ್ಲಿ ಸೋತರೆ, ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿಫಲರಾದರೆ ಯಾವ ಕಾರಣಕ್ಕೂ ಕುಗ್ಗಬೇಡಿ. ಧೈರ್ಯವಿದ್ದರೆ, ಜೀವನದಲ್ಲಿ ಎಂತಹ ಕಷ್ಟ ಬಂದರೂ ಸಹ ಮೆಟ್ಟಿ ನಿಂತು ಯಶಸ್ವಿ ವ್ಯಕ್ತಿಯಾಗಲು ಸಾಧ್ಯವಿದೆ ಎಂದು ಅಭಿಪ್ರಾಯ ಪಟ್ಟರು.

ಬಾಪೂಜಿ, ಡಾನ್‌ಬಾಸ್ಕೋ, ಮಹೇಶ್‌ ಪಿಯು ಕಾಲೇಜು, ಕಂಪಳರಂಗ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪಿಯು ಡಿಡಿ ಟಿ.ತಿಮ್ಮರಾಯಪ್ಪ, ಕಂಪಳರಂಗ ಕಾಲೇಜು ಕಾರ್ಯದರ್ಶಿ ಓ.ಪಾಲಮ್ಮ, ಮಹೇಶ್‌ ಕಾಲೇಜು ಸುರೇಶ್‌ ಬಾಸ್ರಿ, ಪ್ರಾಚಾರ್ಯರ ಸಂಘದ ಅಧ್ಯಕ್ಷ ಕೆ. ವೀರಭದ್ರಪ್ಪ, ಕಾರ್ಯದರ್ಶಿ ಡಾ| ಪಿ. ಶಿವಲಿಂಗಪ್ಪ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್‌. ಲಕ್ಷ್ಮಣ್‌, ಜಿ.ಎಸ್‌. ತಿಪ್ಪೇಸ್ವಾಮಿ, ಕೆ.ಮಧುಸೂದನ್‌, ಯಶವಂತ್‌ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.