ಬದುಕು ಕಟ್ಟಿ ಕೊಡುವಲ್ಲಿ ನರೇಗಾ ಯಶಸ್ವಿ

ಪ್ರತಿ ಗ್ರಾಪಂಗೆ 10 ಪೌಷ್ಟಿಕ ತೋಟ ,ಶಾಲಾ ಆವರಣದಲ್ಲೇ ಹಣ್ಣಿನ ಗಿಡಗಳ ನಾಟಿ

Team Udayavani, Oct 10, 2020, 6:40 PM IST

ಬದುಕು ಕಟ್ಟಿ ಕೊಡುವಲ್ಲಿ ನರೇಗಾ ಯಶಸ್ವಿ

ಚಿತ್ರದುರ್ಗ: ಕೋವಿಡ್‌ ಸಂಕಷ್ಟಕ್ಕೆ ತುತ್ತಾಗಿ ಊರು ಸೇರಿದವರಿಗೆ ಬದುಕು ಕಟ್ಟಿಕೊಡುವಲ್ಲಿ ನರೇಗಾ ಯೋಜನೆಯಡಿಸಾಕಷ್ಟು ಕಾಮಗಾರಿಗಳು ನಡೆಯುತ್ತಿವೆ. ವಿಶೇಷವಾಗಿ ರೈತರ ಜಮೀನುಗಳಲ್ಲಿ ಬದು ನಿರ್ಮಾಣಕ್ಕಾಗಿ ನಡೆದ ಅಭಿಯಾನ ಜಿಲ್ಲೆಯ ಮಟ್ಟಿಗೆ ಯಶಸ್ವಿಯಾಗಿದೆ. ಬದು ನಿರ್ಮಾಣದ ಮೂಲಕ ರೈತರಿಗೆ, ಕೂಲಿ ಕಾರ್ಮಿಕರರಿಗೆ ಉದ್ಯೋಗಒದಗಿಸುವುದು ಒಂದು ಕಡೆಯಾದರೆ, ಮುಂಗಾರಿನಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ಅಂತರ್ಜಲ ಇಂಗಿಸುವ ಕೆಲಸವೂ ಆಗಿದೆ.

ಈಗ ಅದೇ ನರೇಗಾ ಯೋಜನೆಬಳಸಿಕೊಂಡು ಶಾಲಾ ಮಕ್ಕಳಿಗೆ ಪೌಷ್ಟಿಕಆಹಾರ ಒದಗಿಸಲು ಆರ್‌ಡಿಪಿಆರ್‌ಇಲಾಖೆ ಮುಂದಾಗಿದ್ದು, ಜಿಲ್ಲೆಯಲ್ಲಿಅಕ್ಟೋಬರ್‌ 2 ರಿಂದ ಶಾಲೆ, ವಿದ್ಯಾರ್ಥಿನಿಲಯಗಳ ಆವರಣಗಳಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡುವ ಕೆಲಸಕ್ಕೆ ಜಿಲ್ಲಾ ಪಂಚಾಯಿತಿ ಕೈ ಹಾಕಿದೆ.

ಜಿಲ್ಲೆಯ ಪ್ರಮುಖ ನರ್ಸರಿ ಕೇಂದ್ರಗಳಿಂದ ಪೇರಳೆ, ನಿಂಬೆ, ನುಗ್ಗೆ, ಸಪೋಟಾ, ಸೇಬು, ಮೋಸಂಬಿ ಸೇರಿದಂತೆತರಹೇವಾರಿ ಸಸಿಗಳನ್ನು ತಂದು ನಾಟಿ ಮಾಡಿ ಬೆಳೆಸುವ ಮೂಲಕ ಮಕ್ಕಳಿಗೆ ಶಾಲಾ ಆವರಣದಲ್ಲೇ ಪೌಷ್ಟಿಕವಾದ ಹಣ್ಣುಗಳನ್ನು ಒದಗಿಸುವ ಯೋಜನೆ ಇದಾಗಿದೆ. ಇದಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಯಡಿ 35ಸಾವಿರ ರೂ.ಗಳನ್ನು ಪ್ರತಿ ಶಾಲೆಯ ಪೌಷ್ಟಿಕ ತೋಟಕ್ಕಾಗಿ ಒದಗಿಸಲಾಗುತ್ತಿದೆ. ಜಿಲ್ಲೆಯ 189 ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ಗ್ರಾಪಂಗೆ 10 ಪೌಷ್ಟಿಕ ತೋಟಗಳನ್ನು ಒದಗಿಸಲಾಗಿದೆ. ಇದರಲ್ಲಿ ಶಾಲೆ, ಅಂಗನವಾಡಿ ಹಾಗೂ ವಿದ್ಯಾರ್ಥಿ ನಿಲಯಗಳಿದ್ದರೆ ಅಲ್ಲಿ ಕೈ ತೋಟಗಳನ್ನು ನಿರ್ಮಾಣ ಮಾಡಿಕೊಳ್ಳಬಹುದು.

ಇಂಗು ಗುಂಡಿಗೆ ಗುರಿ ಮೀರಿದ ಸಾಧನೆ: ಗ್ರಾಮೀಣ ಭಾಗದ ಮನೆಗಳಆಸುಪಾಸಿನಲ್ಲಿ ಪಾತ್ರೆ ತೊಳೆದ, ಸ್ನಾನದಮನೆಯ ನೀರು ಬೀದಿಗೆ ಹರಿಯುವುದು ಸಾಮಾನ್ಯ. ಇದರಿಂದ ಸಾಕಷ್ಟು ರೋಗರುಜಿನಗಳು ಆವರಿಸಿಕೊಳ್ಳಲು ಅವಕಾಶ ಕಲ್ಪಿಸಿದಂತಾಗುತ್ತದೆ. ಇದನ್ನು ತಪ್ಪಿಸುವ ಉದ್ದೇಶದಿಂದ ನರೇಗಾದಡಿ ವೈಯಕ್ತಿಕವಾಗಿ ಇಂಗು ಗುಂಡಿ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ 189 ಗ್ರಾಪಂಗಳಿಗೆ ತಲಾ 50 ಗುರಿ ನೀಡಲಾಗಿತ್ತು. ಆದರೆ, ಗುರಿಮೀರಿದ ಸಾಧನೆಯಾಗಿದ್ದು,ಈಗಾಗಲೇ ಹತ್ತು ಸಾವಿರ ಇಂಗು ಗುಂಡಿ ನಿರ್ಮಾಣ ಮಾಡಲಾಗಿದೆ.

-ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chitradurga news

ಕನ್ನಡಿಗರಲ್ಲಿ ಆತ್ಮಾಭಿಮಾನ ಕೊರತೆ: ಲೀಲಾದೇವಿ ಪ್ರಸಾದ್‌

chitradurga news

ಆರೋಗ್ಯ ಇಲಾಖೆ ಕೊಡುಗೆ ಸ್ಮರಣೀಯ: ಶಾಸಕ ತಿಪ್ಪಾರೆಡ್ಡಿ

chitradurga news

ವರುಣನಬ್ಬರಕ್ಕೆ 25 ಲಕ್ಷ ರೂ. ಹಾನಿ

vidhana soudha

‘ಅನುಗ್ರಹ ಯೋಜನೆ’ ಮುಂದುವರಿಸಲು ಸರ್ಕಾರದ ಆದೇಶ

23brm1

ಏತ ನೀರಾವರಿ ಯೋಜನೆ ಯಶಸ್ವಿಯಾಗಲ್ಲ ಎಂಬ ಭಾವನೆ ಸರಿಯಲ್ಲ: ತರಳಬಾಳು ಶ್ರೀ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.