ನೀರು ಹರಿಸಲು ಅಗತ್ಯ ಕ್ರಮ

Team Udayavani, Apr 29, 2020, 6:28 PM IST

29-April-39

ನಾಯಕನಹಟ್ಟಿ: ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್‌ ವಿತರಿಸಲಾಯಿತು

ನಾಯಕನಹಟ್ಟಿ: ವಿವಿ ಸಾಗರದಿಂದ 0.25 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. ಆದರೆ ಈ ನೀರು ಚಳ್ಳಕೆರೆ ತಾಲೂಕನ್ನೇ ಪ್ರವೇಶ ಮಾಡಿಲ್ಲ. ಈ ಬಗ್ಗೆ ಜನರಿಗೆ ಆತಂಕ ಅನಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ಮಂಗಳವಾರ ಪಟ್ಟಣದಲ್ಲಿ ಆಹಾರ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವಿ ಸಾಗರದ ನೀರು ಹಿರಿಯೂರು ತಾಲೂಕಿನಲ್ಲಿ ಹರಿಯುವ ವೇಳೆಗೆ ನಿಗದಿತ ಪ್ರಮಾಣದ
ನೀರು ಪೂರ್ಣಗೊಂಡಿದೆ. ಆದ್ದರಿಂದ ನೀರಾವರಿ ಇಲಾಖೆ 0.25 ಟಿಎಂಸಿ ನೀರನ್ನು ವಿವಿ ಸಾಗರದಿಂದ ಹರಿಸಿದ ತಕ್ಷಣ ನಿಲ್ಲಿಸಿದೆ. ಈ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ವಿವಿ ಸಾಗರದಿಂದ ಸ್ಥಗಿತಗೊಳಿಸಲಾದ ನೀರು ಹರಿಸುವಿಕೆಯನ್ನು ಮತ್ತೆ ಆರಂಭಿಸಲಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಬೇಕಾಗಿತ್ತು. ಇದಕ್ಕಾಗಿ ನೀರಾವರಿ ಇಲಾಖೆ ಒಪ್ಪಿಗೆ ನೀಡಿದೆ. ಆದರೆ ಕೋವಿಡ್ ಕಾರಣದಿಂದ ಇದು ವಿಳಂಬವಾಗಿದೆ. ಪ್ರತಿ ಕೆರೆಗಳ ಬಳಿ ಇದರ ಕಾಮಗಾರಿ ಆರಂಭಿಸಬೇಕು ಎನ್ನುವ ಯೋಚನೆ ಇದೆ. ಕೆರೆಗಳಿಗೆ ನೀರು ಹರಿಸುವ ಯೋಜನೆ ಸಿದ್ಧಗೊಂಡು ಹಣಕಾಸು ಅನುಮೋದನೆಯೂ ದೊರೆತಿದೆ. 72 ಕೆರೆಗಳಿಗೆ ನೀರು ತುಂಬಿಸುವ ಭರವಸೆಯನ್ನು ಕ್ಷೇತ್ರದ ಜನರಿಗೆ ನೀಡಿದ್ದು, ಶೀಘ್ರದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

ಡಿಎಚ್‌ಒ ಡಾ| ಫಾಲಾಕ್ಷ, ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ, ಪಪಂ ಮುಖ್ಯಾಧಿಕಾರಿ ಡಿ. ಭೂತಪ್ಪ, ಬಿಜೆಪಿ ಮಂಡಲ ಅಧ್ಯಕ್ಷರುಗಳಾದ ರಾಮರೆಡ್ಡಿ, ಡಾ| ಮಂಜುನಾಥ್‌, ಜಯಪಾಲಯ್ಯ ಇತರರು ಇದ್ದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.