ಆರೆಸ್ಸೆಸ್‌ಗೆ ರಾಜಕೀಯ ಹೊಂದಾಣಿಕೆ ಆಗಲ್ಲ: ಭಾಗವತ್‌

ಆಧ್ಯಾತ್ಮಿಕತೆ ನಮ್ಮ ಆದ್ಯತೆ : ಸ್ವಾಮೀಜಿಗಳ ಭೇಟಿಯಿಂದ ಸಮಾಜ ಸುಧಾರಣೆ

Team Udayavani, Jul 13, 2022, 12:18 AM IST

ಆರೆಸ್ಸೆಸ್‌ಗೆ ರಾಜಕೀಯ ಹೊಂದಾಣಿಕೆ ಆಗಲ್ಲ: ಭಾಗವತ್‌

ಚಿತ್ರದುರ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ರಾಜಕೀಯ ಅಲ್ಲ. ಧಾರ್ಮಿಕತೆ ಮತ್ತು ಆಧ್ಯಾ ತ್ಮಿಕತೆ ಹೆಚ್ಚು ಹೊಂದಾ ಣಿಕೆಯಾಗುತ್ತದೆ. ಹಾಗಾಗಿ ಸಂಘಕ್ಕೆ ರಾಜಕೀಯದವರಿಗಿಂತ ಸ್ವಾಮೀಜಿ ಗಳೇ ಹೆಚ್ಚು ಹತ್ತಿರವಾಗುತ್ತಾರೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಮೋಹನ್‌ ಭಾಗವತ್‌ ಹೇಳಿದರು.

ನಗರದ ಶಿವಶರಣ ಮಾದಾರ ಚನ್ನಯ್ಯ ಗುರು ಪೀಠದಲ್ಲಿ ಮಂಗಳ ವಾರ ದಲಿತ, ಹಿಂದುಳಿದ ವರ್ಗಗಳ 21 ಮಠಾಧಿಧೀಶರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ನಮ್ಮ ಸಮಾಜದಲ್ಲಿ ಕೆಲವು ಭಾಗ ಹಿಂದುಳಿಯಿತು. ಕಾರಣ ಸಂಪರ್ಕ ಕಡಿದು ಹೋಯಿತು.

ಹಿಂದೂ ಸಮಾಜದ ಎಲ್ಲ ಅಂಗಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮ ಕರ್ತವ್ಯ. ಮತ್ತೆ ಮತ್ತೆ ಸೇರುವುದರಿಂದ ಇದು ಸರಿ ಆಗುತ್ತದೆ. ಅದೇ ಸಮರಸ. ಸಂಘ ಇದೇ ಪ್ರಯತ್ನ ಮಾಡುತ್ತಿದೆ. ಸಮಾಜದ ಎಲ್ಲ ಅಂಗಗಳ ಬಗ್ಗೆ ಸಂವೇದನೆ ಇರಬೇಕು. ಆಗಾಗ ಸೇರುವುದರಿಂದ ನಮಗೆ ಪರಸ್ಪರರ ಬಗ್ಗೆ ಅರಿವು ಹೆಚ್ಚಾಗುತ್ತದೆ. ಅರಿವು ಹೆಚ್ಚಾದಾಗ ಸಂಶಯಗಳು, ಅಪನಂಬಿಕೆ ಗಳು ದೂರ ಆಗುತ್ತವೆ. ಆಗ ಮನಸ್ಸುಗಳು ಒಂದಾಗುತ್ತವೆ. ಆರೆಸ್ಸೆಸ್‌ ಹಾಗೂ ಸ್ವಾಮೀಜಿಗಳು ಮತ್ತೆ ಮತ್ತೆ ಭೇಟಿ ಮಾಡುತ್ತಿರಬೇಕು ಎಂದರು.

ಎಲ್ಲ ಮಠಾ ಧೀಶರು ಮಾಡುತ್ತಿರುವ ಪ್ರಯತ್ನ ಬೀಜ ರೂಪದಲ್ಲಿದೆ. ಇದು ಖಂಡಿತವಾಗಿ ಹೆಮ್ಮರ ವಾಗಿ ಬೆಳೆಯುತ್ತದೆ. ಫಲವನ್ನೂ, ನೆರಳನ್ನೂ ನೀಡುತ್ತದೆ. ಮಾತ್ರವಲ್ಲ, ಸಾವಿರಾರು ಬೀಜಗಳನ್ನು ಸೃಷ್ಟಿಸಿ ಅವು ಭೂಮಿಗೆ ತಾಗಿ ಸಸಿಗಳಾಗಿ ಬೆಳೆದು ಹೆಮ್ಮರವಾಗಿ ನಿಂತು ಫಲಗಳನ್ನೂ ನೀಡುವಂತೆ ಖಂಡಿತವಾಗಿ ಬೆಳೆದೇ ಬೆಳೆಯುತ್ತವೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸದಾ ಸ್ವಾಮೀಜಿಗಳ ಜತೆ ಇದೆ. ಸಂಘದ ರೀತಿ ಅತ್ಯಂತ ಪ್ರಾಕೃತಿಕವಾಗಿದೆಯಲ್ಲದೇ ಸಂಘದ ಗತಿ ನಿಧಾನ ಗತಿ. ನಿಮ್ಮ ಜತೆ ಇದ್ದೇವೆ ಮತ್ತು ಇರುತ್ತೇವೆ. ನಾವು ದೊಡ್ಡವರು ಎಂಬ ಕಾರಣಕ್ಕಾಗಿ ಅಲ್ಲ. ಬದಲಾಗಿ ಇದು ನಮ್ಮ ಕರ್ತವ್ಯ. ಹಾಗಾಗಿ ನೀವು ಸಂಘದ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿ ಎಂದರು.

ಸಮಾಜ ಕಟ್ಟೋಣ
ದೊಡ್ಡವರಿಗೆ ಗೌರವ ಕೊಡುವುದು, ನಮ್ಮ ಮಾತೆಯರು, ಸೋದರಿ ಯರ ಜತೆ ಹೇಗೆ ನಡೆದುಕೊಳ್ಳಬೇಕು ಎನ್ನುವ ಸಂಸ್ಕಾರವನ್ನು ಸಮಾಜದ ನವ ಪೀಳಿಗೆಗಳಿಗೆ ಹೇಳಿಕೊಡಬೇಕಿದೆ. ಆಧುನಿಕ ವಿದ್ಯಾಭ್ಯಾಸದೊಂದಿಗೆ ಶಿಕ್ಷಣ ಸಿಗುತ್ತಿದೆ. ಆದರೆ ಸಂಸ್ಕಾರ ಸ್ವಲ್ಪ ದೂರ ಆಗುತ್ತಿದೆ. ಸಂಸ್ಕಾರ, ನಿಷ್ಠೆ ದೃಢವಾಗಬೇಕಾದರೆ ಏನಾದರೂ ಒಂದು ರೀತಿಯ ಉಪಾಸನೆಯನ್ನು ಜೋಡಿಸಿಕೊಳ್ಳ ಬೇಕು. ಸ್ವಾಮೀಜಿ ಗಳು ಸಾಧನೆ, ನಿಯಮಿತ ತಪಸ್ಸು ಮಾಡುವವರು. ಸೇವೆ ಮತ್ತು ಸಂಸ್ಕಾರದ ಮೂಲಕ ನಾವು ಸಮಾಜವನ್ನು ಕಟ್ಟಿ ಬೆಳೆಸಬೇಕಿದೆ. ಸತ್ಯದ ಸಾಧನೆ ಮಾಡುತ್ತಾ ಸರ್ವರ ಸೇವೆ ಮಾಡಬೇಕಿದೆ ಎಂದರು.

ಆರೆಸ್ಸೆಸ್‌ ಸಹ ಸರಕಾರ್ಯವಾಹ ಮುಕುಂದ್‌, ಕ್ಷೇತ್ರೀಯ ಪ್ರಚಾರಕ ಸುಧೀರ್‌, ಕ್ಷೇತ್ರೀಯ ಕಾರ್ಯ ವಾಹ ನ. ತಿಪ್ಪೇಸ್ವಾಮಿ, ಸಂಘದ ಪ್ರಮು ಖರಾದ ಪಟ್ಟಾಭಿರಾಮ, ಗುರುಪ್ರಸಾದ, ನಂದೀಶ, ಸಾಮರಸ್ಯ ವೇದಿಕೆಯ ವಾದಿರಾಜ, ವಿಎಚ್‌ಪಿ ಪ್ರಮುಖರಾದ ಬಸವರಾಜ ಸಂವಾದದಲ್ಲಿ ಭಾಗವಹಿಸಿದ್ದರು. ರವಿ ಮಲ್ಲಾಪುರ ವಂದಿಸಿದರು.

ಈಗ ಕಾಲ ಕೂಡಿ ಬಂದಿದೆ: ಶ್ರೀ
ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರನ್ನು ಈ ಹಿಂದೆ ಮಠಕ್ಕೆ ಆಹ್ವಾನಿಸಿದ್ದೆವು. ಕೋವಿಡ್‌ ಕಾರಣಕ್ಕೆ ಆಗಿರಲಿಲ್ಲ. ಈಗ ಸಂದರ್ಭ ಒದಗಿ ಬಂದಿದ್ದು, ದಲಿತ, ಹಿಂದುಳಿದ ಮಠಾಧಿಧೀಶರ ಜತೆಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದೆವು. ಮತಾಂತರ, ಅಸ್ಪೃಶ್ಯತೆ, ಮೀಸಲಾತಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. ಮೀಸಲಾತಿ ಕುರಿತು ಮಾತನಾಡಿದ ಮೋಹನ್‌ ಭಾಗವತ್‌ ಅವರು, ಸರ್ಕಾರಗಳು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಎಲ್ಲರಿಗೂ ನ್ಯಾಯ ಒದಗಿಸಬೇಕು ಎಂದು ಧ್ವನಿಗೂಡಿಸಿದರು ಎಂದು ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

ಭಾಗಿಯಾಗಿದ್ದ ಮಠಾಧೀಶರು
ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಅವರ ಜತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಡಾ| ಶಾಂತವೀರ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತೀ ಅಪ್ಪಣ್ಣ ಸ್ವಾಮೀಜಿ, ಶ್ರೀ ಬಸವಕುಂಬಾರ ಗುಂಡಯ್ಯ ಸ್ವಾಮೀಜಿ, ಜಗದ್ಗುರು ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ವೇಮನಾನಂದ ಸ್ವಾಮೀಜಿ, ಶ್ರೀ ಶಾಂತಭೀಷ್ಮ ಅಂಬಿಗರ ಚೌಡಯ್ಯ ಸ್ವಾಮೀಜಿ, ಶ್ರೀ ಬಸವ ಭೃಂಗೀಶ್ವರ ಸ್ವಾಮೀಜಿ, ಡಾ| ಬಸವಕುಮಾರ ಸ್ವಾಮೀಜಿ, ಶ್ರೀ ದಯಾನಂದಪುರಿ ಸ್ವಾಮೀಜಿ, ಶ್ರೀ ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಶ್ರೀ ಬಸವನಾಗಿದೇವ ಸ್ವಾಮೀಜಿ, ಶ್ರೀ ಜ್ಞಾನಾನಂದಪುರಿ ಸ್ವಾಮೀಜಿ, ಶ್ರೀ ಮಾತಾ ಬಿಸuದೇವಿ, ಶ್ರೀ ಬಸವ ಹರಳಯ್ಯ ಸ್ವಾಮೀಜಿ, ಶ್ರೀ ಪೂರ್ಣಾನಂದ ಭಾರತೀ ಸ್ವಾಮೀಜಿ, ಶ್ರೀ ಶ್ರೀಧರಾನಂದ ಸ್ವಾಮೀಜಿ ಭಾಗವಹಿಸಿದ್ದರು. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಮತಾಂತರ ತಡೆಗಟ್ಟುವ ಪ್ರಯತ್ನ ಆಗಲಿ
ಭಾರತ ಭಾರತವಾಗಿ ಉಳಿಯಬೇಕಾದರೆ ನಾವು ನಾವಾಗಿ ಉಳಿಯಬೇಕು. ಇಲ್ಲದಿದ್ದರೆ ಭಾರತ ಭಾರತವಾಗಿ ಉಳಿಯುವುದಿಲ್ಲ. ಮತಾಂತರ ನಮ್ಮಲ್ಲಿ ಪ್ರತ್ಯೇಕತೆ ತರುತ್ತದೆ. ಧರ್ಮ ಎಲ್ಲಾ ಕಡೆಗಳಲ್ಲಿ ಓತಪ್ರೋತವಾಗಿರುವಂತೆ ನೋಡಿಕೊಳ್ಳುವ ಅಗತ್ಯವಿದೆ. ಮೂಲ ಅಥವಾ ಬೇರಿನಿಂದ ಯಾರೂ ಕೂಡ ದೂರವಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮತಾಂತರ ತಡೆಯುವ ಪ್ರಯತ್ನ ಮಾಡಬೇಕು. ಹಿಂದೂ ಸಮಾಜದ ಪ್ರಮುಖ ಸಮಸ್ಯೆಗಳಾದ ಅಸ್ಪೃಶ್ಯತೆ, ವಿಷಮತೆ, ಅಸಮಾನತೆ ಮುಖ್ಯವಾಗಿರುವುದು ನಮ್ಮ ಮನಸ್ಸಿನಲ್ಲಿ. ಶಾಸ್ತ್ರಗಳಲ್ಲಿ ಈ ಸಮಸ್ಯೆ ಇಲ್ಲ. ಈ ಸಮಸ್ಯೆಗಳು ಹಲವು ಶತಮಾನಗಳಿಂದ ನಮ್ಮ ಮನಸ್ಸಿನಲ್ಲಿ ಉಳಿದಿವೆ. ಹಾಗಾಗಿ ಇದರ ಪರಿಹಾರಕ್ಕೆ ಸಮಯ ಬೇಕು. ಮನಸ್ಸಿನಿಂದ ತೆಗೆಯುವ ಕೆಲಸವಾಗಬೇಕಿದೆ. ಅಲ್ಲಿಯವರೆಗೂ ಸಹನೆ ಮತ್ತು ಧೈರ್ಯವನ್ನು ನಾವು ಹೊಂದಬೇಕು. ಅದು ಆಗಿಯೇ ಆಗುತ್ತದೆ ಮತ್ತು ಆ ಕಾರ್ಯದಲ್ಲಿ ನಾವು ನಿರತರಾಗಿದ್ದೇವೆ ಎಂದು ಮೋಹನ್‌ ಭಾಗವತ್‌ ತಿಳಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.