ಅಂಬೇಡ್ಕರ್‌ ಭಾವಚಿತ್ರ ಬಳಕೆಗೆ ಆಕ್ಷೇಪ

Team Udayavani, Sep 2, 2019, 1:39 PM IST

ಚಳ್ಳಕೆರೆ: ಸಾಮಾಜಿಕ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ್‌ ಸೇನೆ ವತಿಯಿಂದ ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಚಳ್ಳಕೆರೆ: ನಗರದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳದ ಸಂಯುಕ್ತಾಶ್ರಯದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಅಳವಡಿಸುವ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ರವರ ಭಾವಚಿತ್ರವನ್ನು ಪ್ರಕಟಿಸಿರುವುದು ಸರಿಯಲ್ಲ ಎಂದು ಚಿಂತಕ ಸಿ.ಕೆ. ಮಹೇಶ್ವರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಸಾಮಾಜಿಕ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ್‌ ಸೇನೆ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಡಾ| ಬಿ.ಆರ್‌. ಅಂಬೇಡ್ಕರ್‌ರವರು ಹಿಂದೂ ಧರ್ಮದ ಬಗ್ಗೆ ಹೆಚ್ಚು ವಿಶ್ವಾಸವನ್ನು ಹೊಂದಿರಲಿಲ್ಲ. ಹಿಂದೂ ಧರ್ಮದಲ್ಲಿನ ಅನೇಕ ಸಂಪ್ರದಾಯ, ಆಚರಣೆಗಳಿಗೆ ರೋಸಿ ಹೋಗಿ ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು. ತಾವು ಹಿಂದೂ ಧರ್ಮವನ್ನು ಎಂದೂ ಪಾಲಿಸುವುದಿಲ್ಲ ಎಂದು ನಿರ್ಧಾರ ಪ್ರಕಟಿಸಿದ್ದರು. ಅವರ ತತ್ವ ಸಿದ್ಧಾಂತವನ್ನು ನಾಡಿನ ಲಕ್ಷಾಂತರ ದಲಿತರು ಇಂದಿಗೂ ಪಾಲನೆ ಮಾಡುತ್ತಿದ್ದೇವೆ. ಅನಗತ್ಯವಾಗಿ ಸಂಘಟಕರು ಅವರ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ತಾಲೂಕು ಅಂಬೇಡ್ಕರ್‌ ಸೇನೆ ಅಧ್ಯಕ್ಷ ಎನ್‌. ಹೊನ್ನೂರಸ್ವಾಮಿ ನೇತೃತ್ವದಲ್ಲಿ ತಹಶೀಲ್ದಾರ್‌ ಎಂ. ಮಲ್ಲಿಕಾರ್ಜುನ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷ ಉಮೇಶ್‌ಚಂದ್ರ ಬ್ಯಾನರ್ಜಿ, ಮೈತ್ರಿ ದ್ಯಾಮಣ್ಣ, ವೀರಣ್ಣ, ಅಂಬೇಡ್ಕರ್‌ ಸೇನೆಯ ಜಿಲ್ಲಾ ಉಪಾಧ್ಯಕ್ಷ ಎಸ್‌. ಸುರೇಶ್‌, ಪೆನ್ನೇಶ್‌, ಹೇಮಂತರಾಜ್‌, ಕೆ.ಪಿ. ಹನುಮಂತರಾಯ, ರಾಜಣ್ಣ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಭರಮಸಾಗರ: ಭರಮಸಾಗರ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ಪೈಪ್‌ಲೈನ್‌ ಅಳವಡಿಸುವ ಸಂಬಂಧ ಇಲ್ಲಿನ ಬಿಳಿಚೋಡು ರಸ್ತೆ ಮಾರ್ಗದಲ್ಲಿ ಬರುವ ಕೆರೆಗಳಿಗೆ ನೀರು ತುಂಬಿಸಲು...

  • ಚಿತ್ರದುರ್ಗ: ಇಂದು ಬಹುತೇಕ ಯುವಕರು ಮಾದಕ ವ್ಯಸನಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಹೊರಬಂದು ವ್ಯಸನಮುಕ್ತರಾಗಿ ಭವಿಷ್ಯ ಕಟ್ಟಿಕೊಳ್ಳುವ ಮೂಲಕ ಸದೃಢ...

  • ಚಿತ್ರದುರ್ಗ: ಮನುಷ್ಯನ ಅತಿಯಾದ ಆಸೆ, ಸ್ನೇಹ, ಸಂಬಂಧವನ್ನೂ ಅನಾಚಾರ, ಅತ್ಯಾಚಾರ, ಅಕ್ರಮವನ್ನಾಗಿ ಮಾಡಿಸುತ್ತಿದೆ. ಹಣದ ಹಿಂದೆ ಬಿದ್ದು ಅತ್ಯಂತ ಕೆಟ್ಟ ಬದುಕು ಬಾಳುವಂತಾಗಿದೆ...

  • ಭರಮಸಾಗರ: ಇಲ್ಲಿನ ಐತಿಹಾಸಿಕ ಚಿಕ್ಕಕೆರೆ ಗ್ರಾಮದ ಕಸ ತ್ಯಾಜ್ಯ ವಿಲೇವಾರಿ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಬೇವಿನಹಳ್ಳಿ, ಬಿಳಿಚೋಡು ಕಡೆಯಿಂದ ಭರಮಸಾಗರ ಗ್ರಾಮವನ್ನು...

  • ಚಿತ್ರದುರ್ಗ: ನಗರದ ಹೊರವಲಯದ ಕುಂಚಿಗನಾಳ್ ಕಣಿವೆ ಬಳಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10 ಜನರಿಗೆ‌ ಗಾಯಗೊಂಡಿದ್ದಾರೆ. ದಾವಣಗೆರೆಯಿಂದ...

ಹೊಸ ಸೇರ್ಪಡೆ